ಚುನಾವಣೆ 2023 | ‘ಕೈ’ ನಾಯಕರ ಬೆದರಿಸಲು ಐಟಿ, ಇಡಿ, ಸಿಬಿಐ ಛೂ ಬಿಟ್ಟ ಬಿಜೆಪಿ; ಸಿದ್ದರಾಮಯ್ಯ ಕಿಡಿ

Date:

Advertisements
  • ದಾಳಿಗಳಿಗೆ ಹೆದರದಂತೆ ಸಿದ್ದರಾಮಯ್ಯ ಕರೆ
  • ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಪತ್ರಿಕಾಗೋಷ್ಠಿ

ಸೋಲಿನ ಭೀತಿ ಎದುರಿಸುತ್ತಿರುವ ಬಿಜೆಪಿಯು ಕಾಂಗ್ರೆಸ್ ನಾಯಕರನ್ನು ಬೆದರಿಸಲು ಐಟಿ, ಇಡಿ ಹಾಗೂ ಸಿಬಿಐ ಮುಂತಾದ ಸ್ವಾಯತ್ತ ಸಂಸ್ಥೆಗಳನ್ನು ಛೂ ಬಿಡುವ ಷಡ್ಯಂತ್ರ ನಡೆಸಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ದೆಹಲಿಯಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿರುವ ಸಿದ್ದರಾಮಯ್ಯ ಅವರು, ಬಿಜೆಪಿ ಸರ್ಕಾರದ ವಿರುದ್ಧ ಅನುಮಾನ ವ್ಯಕ್ತಪಡಿಸಿದ್ದಾರೆ.

“ಕಾಂಗ್ರೆಸ್ ಅಭ್ಯರ್ಥಿಗಳು, ನಾಯಕರು, ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಬಗ್ಗೆ ಒಲವು ಹೊಂದಿರುವರ ಮೇಲೆ ದಾಳಿ ಮಾಡಿ ಬೆದರಿಸಲು ಕೇಂದ್ರ  ಸರ್ಕಾರ ಸಾವಿರಕ್ಕೂ ಹೆಚ್ಚು ಐಟಿ, ಇಡಿ ಮತ್ತು ಸಿಬಿಐ ಅಧಿಕಾರಿಗಳನ್ನು ಕರ್ನಾಟಕಕ್ಕೆ ಕಳುಹಿಸಿದೆ” ಎಂದು ಆರೋಪಿಸಿದ್ದಾರೆ.

Advertisements

“ಬಿಜೆಪಿ ನಾಯಕರು ಸೋಲಿನ ಭೀತಿಯಿಂದ ತತ್ತರಿಸಿ ಹೋಗಿದ್ದಾರೆ. ಪಕ್ಷದೊಳಗೆ ಬಂಡಾಯಗಳು ಹೆಚ್ಚಿವೆ, ಅವರಲ್ಲಿ ಹಲವರು ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಆದ್ದರಿಂದ, ಬಿಜೆಪಿ ನಾಯಕರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ದಾಳಿಗಿಳಿದಿದ್ದಾರೆ” ಎಂದಿದ್ದಾರೆ.

“ಬಿಜೆಪಿ ಸರ್ಕಾರದ ಈ ಷಡ್ಯಂತ್ರವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಹೋರಾಟದ ಮೂಲಕವೇ ಬಿಜೆಪಿಯ ಈ ದಮನಕಾರ್ಯವನ್ನು ಎದುರಿಸುತ್ತೇವೆ. ನಮ್ಮ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಭೀತಿಗೀಡಾಗದೆ ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸಬೇಕು” ಎಂದು ಕರೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಧರ್ಮ, ದೇವರು ಬಿಜೆಪಿಗೆ ಮತಫಸಲು ಕೊಡುವ ಸಾಧನಗಳಷ್ಟೇ: ಎಚ್‌ ಡಿ ಕುಮಾರಸ್ವಾಮಿ

“ಬಿಜೆಪಿಗೆ ಕರ್ನಾಟಕದಲ್ಲಿ ಸೋಲಿನ ಭೀತಿ ಆರಂಭವಾಗಿದೆ. ಎಲ್ಲ ಸಮೀಕ್ಷೆಗಳು ಕಾಂಗ್ರೆಸ್‌ ಪಕ್ಷ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಹೇಳುತ್ತಿವೆ. ಹಲವು ಹಾಲಿ ಶಾಸಕರು, ವಿಧಾನ ಪರಿಷತ್‌ ಸದಸ್ಯರು, ನಿಗಮ ಮಂಡಳಿಯ ಅಧ್ಯಕ್ಷರು ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರಿದ್ದಾರೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ರಾಜ್ಯದಲ್ಲಿ ಕಾಂಗ್ರೆಸ್‌ ಪರವಾದ ಅಲೆ ಇದೆ ಎಂದು ಕರ್ನಾಟಕದ ಪ್ರತಿಯೊಬ್ಬರಿಗೂ ಗೊತ್ತಿದೆ. ಈ ಕಾರಣದಿಂದ ಹಾಲಿ ಶಾಸಕರು ಕಾಂಗ್ರೆಸ್‌ ಸೇರುತ್ತಿದ್ದಾರೆ. ಅವರ್ಯಾರು ಮೂರ್ಖರಲ್ಲ, ತಾವು ಬಿಜೆಪಿಯಲ್ಲಿಯೇ ಮುಂದುವರೆದರೆ ಸೋಲುತ್ತೇವೆ ಎಂಬುದು ಅವರಿಗೆ ಗೊತ್ತಾಗಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಬಿಜೆಪಿ ಹೈಕಮಾಂಡ್‌ ಗೆ ಕೂಡ ಕರ್ನಾಟಕದ ಬಿಜೆಪಿ ಮುಳುಗುತ್ತಿದೆ, ಮುಂದೆ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಗೊತ್ತಿದೆ. ತಮ್ಮ ದ್ವೇಷ ರಾಜಕೀಯ ಮತ್ತು ಹಿಂದುತ್ವದ ಅಜೆಂಡಾ ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಕೆಲಸ ಮಾಡುವುದಿಲ್ಲ ಎಂಬುದು ಅವರಿಗೆ ಅರ್ಥವಾಗಿದೆ” ಎಂದು ಕುಟುಕಿದ್ದಾರೆ.

“ಬಿಜೆಪಿಗೆ ಉಳಿದಿರುವ ಏಕೈಕ ಮಾರ್ಗವೆಂದರೆ ಅಧಿಕಾರದ ದುರುಪಯೋಗ ಮತ್ತು ತಮ್ಮ ಹಣಬಲದ ಬಳಕೆ. ಹಣ ನೀಡಿದರೂ ಕೂಡ ರಾಜ್ಯದ ಜನ ಕಾಂಗ್ರೆಸ್‌ ಗೆ ಮತ ನೀಡಬೇಕು ಎಂದು ನಿರ್ಧಾರ ಮಾಡಿದ್ದಾರೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಬಿಜೆಪಿ ಸರ್ಕಾರ ಕರ್ನಾಟಕ ಕಂಡ ಅತ್ಯಂತ ಭ್ರಷ್ಟ ಸರ್ಕಾರ. ರಾಜ್ಯದ ಮತದಾರರಿಗೆ ತಾವು ಹಿಂದಿನ ಚುನಾವಣೆಯಲ್ಲಿ ಮಾಡಿದ ತಪ್ಪಿನ ಅರಿವಾಗಿದೆ. ಜನ ಹಿಂದಿನ ಕಾಂಗ್ರೆಸ್‌ ಸರ್ಕಾರದ ಯೋಜನೆಗಳನ್ನು ಸ್ಮರಿಸುತ್ತಿದ್ದಾರೆ. ಇದರಿಂದ ಬಿಜೆಪಿಗರು ಬೆದರಿದ್ದಾರೆ” ಎಂದು ಬಿಜೆಪಿಯನ್ನು ಟೀಕಿಸಿದ್ದಾರೆ.

“ಕಾಂಗ್ರೆಸ್‌ ಪಕ್ಷಕ್ಕೆ ಯಾರೂ ಬೆಂಬಲ ನೀಡಬಾರದು ಎಂಬುದು ಬಿಜೆಪಿಯವರ ಉದ್ದೇಶ. ಇದಕ್ಕೆ ನಮ್ಮ ಕಾರ್ಯಕರ್ತರು ಮತ್ತು ನಾಯಕರು ಬಗ್ಗುವವರಲ್ಲ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಬೇಕು: ಬಿ ಕೆ ಹರಿಪ್ರಸಾದ್ ಆಗ್ರಹ

ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದರೆ ಕ್ಷಮೆ...

ಕಲ್ಯಾಣ ಕರ್ನಾಟಕದಲ್ಲಿ 36 ಪಿಯು ಉಪನ್ಯಾಸಕರ ಹುದ್ದೆ ಭರ್ತಿಗೆ ಸರ್ಕಾರ ಅನುಮತಿ!

ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಸರ್ಕಾರಿ...

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ: ಬಿಜೆಪಿಯ ಅಮಿತ್ ಮಾಳವೀಯ

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ. ಸುಪ್ರೀಂ ಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ...

ಡಿ ಕೆ ಶಿವಕುಮಾರ್ ಬಳಿಕ ಕಾಂಗ್ರೆಸ್ ಶಾಸಕ ರಂಗನಾಥ್‌ರಿಂದ ಆರ್‌ಎಸ್‌ಎಸ್ ಗೀತೆ ಗುಣಗಾನ!

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಳಿಕ ಇದೀಗ ಕಾಂಗ್ರೆಸ್ ಶಾಸಕ...

Download Eedina App Android / iOS

X