ಅಬಕಾರಿ ನೀತಿ ಪ್ರಕರಣದ ಸಾಕ್ಷಿಗೂ ಬಿಜೆಪಿಗೂ ಸಂಬಂಧವಿದೆ: ಎಎಪಿ

Date:

ಅಬಕಾರಿ ನೀತಿ ಪ್ರಕರಣದ ಸಾಕ್ಷಿಗಳ ಪೈಕಿ ಓರ್ವ ಸಾಕ್ಷಿ ಮತ್ತು ಬಿಜೆಪಿ ನಡುವೆ ಸಂಬಂಧವಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಶನಿವಾರ ಆರೋಪಿಸಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಎಎಪಿ ಸವಾಲು ಹಾಕಿದೆ.

ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿರುವ ಎಎಪಿ ನಾಯಕ, ಸಚಿವರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್, “ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ಮಾಗುಂಟ ಶ್ರೀನಿವಾಸುಲು ರೆಡ್ಡಿ ಅವರ ಪುತ್ರ ರಾಘವ ಮಾಗುಂಟ ರೆಡ್ಡಿ ಅವರನ್ನು ಬಿಜೆಪಿಯ ಮಿತ್ರ ಪಕ್ಷ ಟಿಡಿಪಿ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಿದೆ” ಎಂದು ಆರೋಪಿಸಿದ್ದಾರೆ.

“ಸಾಕ್ಷಿ ಮತ್ತು ಬಿಜೆಪಿ ನಡುವಿನ ಸಂಬಂಧವನ್ನು ದಾಖಲಿಸಲು ಮತ್ತು ತನಿಖೆ ನಡೆಸಲು ಇಡಿ ಸ್ವತಂತ್ರವಾಗಿದೆಯೇ ಎಂದು ಇಡಿ ಸವಾಲು ಹಾಕುತ್ತೇನೆ. ಮದ್ಯ ವ್ಯಾಪಾರಿಗಳ ‘ಸೌತ್ ಲಾಬಿ’ ಎಂದು ಕರೆಯಲ್ಪಡುವವರೊಂದಿಗೆ ಬಿಜೆಪಿ ಸಂಪರ್ಕವಿದೆ” ಎಂದು ಆರೋಪಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಬಕಾರಿ ನೀತಿ ಪ್ರಕರಣ: ದೆಹಲಿ ಸಚಿವ ಕೈಲಾಶ್ ಗಹ್ಲೋಟ್‌ಗೆ ಇಡಿ ಸಮನ್ಸ್

ಎಎಪಿಯ ಆರೋಪಕ್ಕೆ ಬಿಜೆಪಿಯಿಂದ ಯಾವುದೇ ರೀತಿಯ ತಕ್ಷಣದ ಪ್ರತಿಕ್ರಿಯೆ ಲಭ್ಯವಾಗಿಲ್ಲ ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನಾವು ಮತ ಹಾಕುತ್ತೇವೆ, ಆದರೆ ಬಿಜೆಪಿಗಲ್ಲ’; 1,200 ಕುಟುಂಬಗಳು ಹೀಗೆ ಹೇಳಿದ್ದೇಕೆ?

ನಾವು ಒಡೆದ ಮನೆಯಲ್ಲಿ ಬದುಕುತ್ತಿದ್ದೇವೆ. ಬಿಜೆಪಿ ಸರ್ಕಾರ ನಮ್ಮ ಮನೆಗಳನ್ನು ಒಡೆದುರುಳಿಸಿದೆ....

‘ಇಂಡಿಯಾ’ ಒಕ್ಕೂಟ ತೊರೆಯಲು ನಿರಾಕರಿಸಿದ್ದಕ್ಕೆ ಮಾಜಿ ಸಿಎಂ ಹೇಮಂತ್ ಸೊರೆನ್‌ಗೆ ಜೈಲು’

'ಇಂಡಿಯಾ' ಮೈತ್ರಿಕೂಟವನ್ನು ತೊರೆಯಲು ನಿರಾಕರಿಸಿದ್ದಕ್ಕೆ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ, ಜೆಎಂಎಂ ನಾಯಕ...

ಮೋದಿಯವರ ದ್ವೇಷ ಭಾಷಣ ಜನರ ಗಮನವನ್ನು ಬೇರೆಡೆಗೆ ತಿರುಗಿಸುವ ಯತ್ನ: ರಾಹುಲ್ ಗಾಂಧಿ

"ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೊಂದಿರುವ ಮುಸ್ಲಿಮರಿಗೆ...