ಸರ್ಕಾರಕ್ಕೆ ನೂರು ದಿನ: ʼಕೈಕೊಟ್ಟ ಯೋಜನೆಗಳು-ಹಳಿ ತಪ್ಪಿದ ಆಡಳಿತ’ ಪುಸ್ತಕ ಬಿಡುಗಡೆ ಮಾಡಿದ ಬಿಜೆಪಿ

Date:

Advertisements
  • ರಾಜ್ಯ ಸರ್ಕಾರದ 100 ವೈಫಲ್ಯಗಳ ಒಳಗೊಂಡ ಪುಸ್ತಕ
  • ಮಾಧ್ಯಮ ವರದಿಗಳನ್ನೇ ಮುಂದಿಟ್ಟುಕೊಂಡ ಪುಸ್ತಕ

ರಾಜ್ಯ ಕಾಂಗ್ರೆಸ್ ಸರ್ಕಾರ ನೂರು ದಿನ ಪೂರೈಸಿದ ಬೆನ್ನಲ್ಲೇ ಕಾಂಗ್ರೆಸ್‌ನ ವೈಫಲ್ಯಗಳ ಕುರಿತು ಬಿಜೆಪಿ ‘ಕೈಕೊಟ್ಟ ಯೋಜನೆಗಳು-ಹಳಿ ತಪ್ಪಿದ ಆಡಳಿತ’ ಪುಸ್ತಕ ಬಿಡುಗಡೆ ಮಾಡಿದೆ.

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಮಂಗಳವಾರ ರಾಜ್ಯ ಸರ್ಕಾರದ 100 ವೈಫಲ್ಯಗಳ ಒಳಗೊಂಡ ಪುಸ್ತಕವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬಿಡುಗಡೆ ಮಾಡಿದ್ದಾರೆ.

ಕೇವಲ ಮಾಧ್ಯಮ ವರದಿಗಳನ್ನೇ ಮುಂದಿಟ್ಟುಕೊಂಡು ಮುದ್ರಿಸಿ ಪುಸ್ತಕದ ರೂಪದಲ್ಲಿ ಬಿಡುಗಡೆ ಮಾಡಲಾಗಿದ್ದು, ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿನ ಆರೋಪಗಳು ಸೇರಿದಂತೆ ವರ್ಗಾವಣೆ ದಂಧೆ, ಶಾಸಕರು-ಸಚಿವರ ನಡುವಿನ ಹಗ್ಗಜಗ್ಗಾಟ ಸೇರಿದಂತೆ ಇತರೆ ವಿಷಯವನ್ನು ಈ ಪುಸ್ತಕ ಒಳಗೊಂಡಿದೆ.

Advertisements

ನೂರಾರು ತಪ್ಪು ಮಾಡಿದ ಕಾಂಗ್ರೆಸ್: ಕಟೀಲ್

ಪುಸ್ತಕ ಬಿಡುಗಡೆ ಬಳಿಕ ಮಾತನಾಡಿದ ನಳಿನ್‌ ಕುಮಾರ್‌ ಕಟೀಲ್, “ನೂರು ದಿನಗಳಲ್ಲಿ ಕಾಂಗ್ರೆಸ್​​ ಸರ್ಕಾರ ಜನದ್ರೋಹ ಮಾಡಿದೆ. ಕಾಂಗ್ರೆಸ್​​ ಅಧಿಕಾರಕ್ಕೆ ಬಂದ ನಂತರ ನೂರಾರು ತಪ್ಪು ಮಾಡಿದೆ. ಇಬ್ಬರು ಸಚಿವರ ಮೇಲೆ ಭ್ರಷ್ಟಾಚಾರದ ಆರೋಪ ಕೇಳಿಬಂದಿತ್ತು. ಆದರೂ ಸರ್ಕಾರ ಅವರ ರಾಜೀನಾಮೆ ಪಡೆಯಲಿಲ್ಲ” ಎಂದು ಟೀಕಿಸಿದರು.

“ನಮ್ಮ ಸರ್ಕಾರವಿದ್ದಾಗ ಬಂಡವಾಳ ಹೂಡಿಕೆ ಅತಿ ಹೆಚ್ಚು ಬಂದಿತ್ತು. ಈಗ ವಿದ್ಯುತ್ ದರ ಹೆಚ್ಚಳ, ವ್ಯತ್ಯಯದಿಂದ ಹೂಡಿಕೆದಾರರು ವಾಪಸ್ ಹೋಗಿದ್ದಾರೆ. ರೈತ ವಿದ್ಯಾನಿಧಿ, ಕಿಸಾನ್​​ ಸಮ್ಮಾನ್ ಯೋಜನೆಗಳಿಗೆ ಕತ್ತರಿ ಹಾಕಿದ್ದಾರೆ. ಎರಡು ಶಕ್ತಿಗಳು ಸಿಎಂ ಕಂಟ್ರೋಲ್ ಮಾಡುತ್ತಿವೆ ಎಂಬುದನ್ನು ಕೇಳಿದ್ದೇವೆ. ಭ್ರಷ್ಟಾಚಾರ ನಿಯಂತ್ರಣ ಮಾಡುವಲ್ಲೂ ಸರ್ಕಾರ ವಿಫಲವಾಗಿದೆ” ಎಂದು ಕಿಡಿಕಾರಿದರು.

“ಕಾಂಗ್ರೆಸ್‌ ಬಿಜೆಪಿ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿದೆ. ನಮ್ಮ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಹಾಕಿ ಜೈಲಿಗೆ ಹಾಕುತ್ತಿದ್ದಾರೆ. ಹಿಂದಿನ ತುರ್ತು ಪರಿಸ್ಥಿತಿ ನಿರ್ಮಾಣ ಮಾಡುತ್ತಿದ್ದಾರೆ. ಮಾಧ್ಯಮಗಳ ಮೇಲೂ ಇವರು ದಬ್ಬಾಳಿಕೆ ಮಾಡುತ್ತಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲೂ ವಿಫಲರಾಗಿದ್ದಾರೆ” ಕಟೀಲ್‌ ಆರೋಪಿಸಿದರು.‌

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರಕ್ಕೆ ನೂರು, ಸಮಸ್ಯೆ ನೂರಾರು

ಹಳಿ ತಪ್ಪಿದ ಸರ್ಕಾರ: ಬೊಮ್ಮಾಯಿ ವಾಗ್ದಾಳಿ

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, “ರಾಜ್ಯ ಕಾಂಗ್ರೆಸ್ ಸರ್ಕಾರ ಐದು ವರ್ಷದ ಆಡಳಿತದ ದಿಕ್ಸೂಚಿ ಹೇಳಬೇಕಿತ್ತು. ಆದರೆ, ಹಲವಾರು ವಿಚಾರಗಳಲ್ಲಿ ವೈಫಲ್ಯ ಮತ್ತು ಗೊಂದಲ ಇದೆ. ನಾಡಿನ ಜನರಿಗೆ ಕೊಟ್ಟ ಮಾತು ತಪ್ಪಿದೆ. ಹಣಕಾಸಿನ ವಿಚಾರದಲ್ಲಿ ರಾಜ್ಯ ಸರ್ಕಾರ ಹಳಿ ತಪ್ಪಿದೆ. ಇದು ದಿಕ್ಕುತಪ್ಪಿದ ಸರ್ಕಾರ” ಎಂದು ಟೀಕಿಸಿದರು.

“ಎಲ್ಲ ತೆರಿಗೆ ಹೆಚ್ಚಳವಾಗಿದೆ, ಸಾಲ ಮತ್ತು ತೆರಿಗೆ ಮೂಲಕ 45 ಸಾವಿರ ಕೋಟಿ ಆದಾಯ ಇದ್ದರೂ 12 ಸಾವಿರ ಕೋಟಿ ರೂ. ಖೋತಾ ಬಜೆಟ್ ಮಂಡಿಸಿದ್ದಾರೆ. ಹಲವಾರು ಸಂಘ ಮತ್ತು ಸಂಸ್ಥೆಗಳ ಸಂಬಳ ಸರಿಯಾಗಿ ಆಗುತ್ತಿಲ್ಲ. ರಾಜ್ಯದಲ್ಲಿ 1 ಕಿ.ಮೀ. ರಸ್ತೆ ಕೂಡ ಕಾಂಗ್ರೆಸ್ ನಿರ್ಮಾಣ ಮಾಡಿಲ್ಲ. ಕೃಷಿ ಸೇರಿ ಹಲವು ಇಲಾಖೆಯಲ್ಲಿ ವರ್ಗಾವಣೆಯ ಸುಗ್ಗಿ ನಡೆದಿದೆ” ಎಂದು ಹರಿಹಾಯ್ದರು.

“ದೂರು ಕೊಟ್ಟವರ ಮೇಲೆಯೇ ಈ ಸರ್ಕಾರ ಕೇಸ್ ಹಾಕಿಸುತ್ತಿದೆ. ಕೆಂಪಣ್ಣ ಪ್ರಧಾನಿಗೆ ಪತ್ರ ಬರೆದರೂ ನಾವೇನೂ ಕೇಸ್ ಹಾಕಲಿಲ್ಲ. ತನಿಖೆ ಮಾಡದೇ ದೂರು ಕೊಟ್ಟವರ ಮೇಲೆಯೇ ಕ್ರಮ ತೆಗೆದುಕೊಳ್ಳುವುದು ಕಾಂಗ್ರೆಸ್ ಸರ್ಕಾರ” ಎಂದು ಎಂದು ಕಿಡಿಕಾರಿದರು..

“ಶಾಸಕ ಬಿ.ಆರ್. ಪಾಟೀಲ್ ನಕಲಿ ಪತ್ರ ಎಂದರು. ಅವರ ಶಾಸಕರೇ ತಾವು ಸಹಿ ಮಾಡಿದ್ದೇವೆ ಎಂದರು. ತನಿಖೆ ಮಾಡದೇ ಪತ್ರಕರ್ತರ ಮೇಲೆ ಪ್ರಶ್ನೆ ಮಾಡಿದರು. ಎಲ್ಲದಕ್ಕೂ ಕೇಸ್ ಹಾಕಿದರೆ ಜೈಲಿನಲ್ಲಿ ಜಾಗ ಸಾಕಾಗಲ್ಲ. ಎಲ್ಲ ಕ್ಲಬ್ ಗಳನ್ನು ಬಂದ್ ಮಾಡಲಾಗಿತ್ತು. ಈಗ ಮತ್ತೆ ಎಲ್ಲ ಓಪನ್ ಆಗಿವೆ. ಎಲ್ಲೆಂದರಲ್ಲಿ ಮಾಮೂಲಿ ಪಡೆದು ಓಪನ್ ಮಾಡಿದ್ದಾರೆ” ಎಂದು ದೂರಿದರು.

“ಶಿಕ್ಷಣ, ಆರೋಗ್ಯ, ಕೃಷಿಗೆ ಪ್ರೋತ್ಸಾಹ ಇಲ್ಲ. ರಾಜ್ಯದ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ. ಮುಕ್ತವಾಗಿ ಭ್ರಷ್ಟಾಚಾರ ನಡೆಯುತ್ತಿದೆ. ಮಂತ್ರಿಗಳು, ಸಿಎಂ ಕಚೇರಿ ನಡುವೆ ಭ್ರಷ್ಟಾಚಾರಕ್ಕಾಗಿ ಗಲಾಟೆ ನಡೆಯುತ್ತಿವೆ. ಬೆಂಗಳೂರು ಗ್ರಾಮೀಣ ಎಸಿ ಸೇರಿದಂತೆ ಪ್ರಮುಖ ಹುದ್ದೆಗಳ ವರ್ಗಾವಣೆಗೆ ಹರಾಜು ನಡೆಯುತ್ತಿದೆ” ಎಂದು ಆರೋಪಿಸಿದರು.

ಪುಸ್ತಕ ಬಿಡುಗಡೆಯಲ್ಲಿ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X