ಕಾಂಗ್ರೆಸ್ ಸರಕಾರದ ದ್ವೇಷದ ರಾಜಕಾರಣ: ಕಾರ್ಯಕರ್ತರ ನೆರವಿಗಾಗಿ ಸಹಾಯವಾಣಿ ಆರಂಭಿಸಿದ ಬಿಜೆಪಿ

Date:

  • 24 ಗಂಟೆ ಕಾರ್ಯಾಚರಣೆ ನಡೆಸಲಿರುವ ಬಿಜೆಪಿ ಸಹಾಯವಾಣಿ
  • ಸಹಾಯವಾಣಿ ಕಾರ್ಯಾಚರಣೆಗೆ 100 ಜನ ವಕೀಲರ ಸಹಯೋಗ

ಕಾಂಗ್ರೆಸ್ ಸರಕಾರದ ದ್ವೇಷದ ರಾಜಕಾರಣ ಮುಂದುವರೆಸಿದ್ದು, ಅದನ್ನು ಎದುರಿಸಲು ಬಿಜೆಪಿ ಕಾರ್ಯಕರ್ತರಿಗೆ ನೆರವಾಗುವ ದೃಷ್ಟಿಯಿಂದ ‘ಕಾನೂನು ಸಹಾಯವಾಣಿ’ ಸ್ಥಾಪಿಸಲಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ತಿಳಿಸಿದರು.

ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಹೆಲ್ಪ್ ಲೈನ್‌ ಉದ್ಘಾಟಿಸಿ ಮಾತನಾಡಿದ ತೇಜಸ್ವಿ ಸೂರ್ಯ, ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ನಮ್ಮ ಕಾರ್ಯಕರ್ತರ ಮೇಲೆ, ನಮ್ಮ ಪರವಾಗಿ ಕೆಲಸ ಮಾಡುವವರ ಮೇಲೆ ರಾಜಕೀಯ ದ್ವೇಷದ ರಾಜಕೀಯ ಮಾಡುವ ಮುನ್ಸೂಚನೆ ಸಿಕ್ಕಿದೆ ಎಂದರು.

ಈ ಹಿನ್ನೆಲೆಯಲ್ಲಿ ಬಿಜೆಪಿ ಕಾನೂನು ಪ್ರಕೋಷ್ಟ 100 ವಕೀಲರ ತಂಡವು ಸಹಾಯವಾಣಿಗಾಗಿ ಕಾರ್ಯ ನಿರ್ವಹಿಸಲಿದೆ. ಸದನದ ಒಳಗೆ ಮತ್ತು ಹೊರಗೆ ಇಂತಹ ದೌರ್ಜನ್ಯದ ವಿರುದ್ಧ ಹೋರಾಟ ಸಂಘಟಿಸಲು ಪಕ್ಷದ ವತಿಯಿಂದ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ತೇಜಸ್ವಿ ಹೇಳಿದರು.

ಹೋರಾಟದ ಮೂಲಕವೇ ಬಿಜೆಪಿ ಬೆಳೆದುಬಂದಿದೆ. ಈ ಪಕ್ಷದ ದಮನ ಇವತ್ತಿನದಲ್ಲ. ಇಂತಹ ದ್ವೇಷವನ್ನು ಎದುರಿಸಿಯೇ ನಮ್ಮ ಪಕ್ಷ ಮುಂದುವರಿದಿದೆ. ಪಕ್ಷ ಅನ್ಯಾಯ, ಅವ್ಯವಸ್ಥೆ ವಿರುದ್ಧ ಹೋರಾಟ ಮುಂದುವರೆಯಲಿದೆ. ಈ ವೇಳೆ ದೌರ್ಜನ್ಯ ನಡೆದರೆ, ಸುಳ್ಳು ಕೇಸು ಹಾಕಿದರೆ ಸಹಾಯವಾಣಿ(18003091907) ಸಂಖ್ಯೆಗೆ ಕರೆ ಮಾಡಿ ಎಂದು ತಿಳಿಸಿದರು.ತೇಜಸ್ವಿ ಸೂರ್ಯ

ಬಿಜೆಪಿ ಕಾರ್ಯಕರ್ತರ ಒಳಿತು ಮತ್ತು ಅವರ ಹಕ್ಕುಗಳ ರಕ್ಷಣೆಯ ದೃಷ್ಟಿಯಿಂದ ಈ ಸಹಾಯವಾಣಿ ಕಾರ್ಯ ನಿರ್ವಹಿಸಲಿದೆ. ರಾಜ್ಯದ ಎಲ್ಲ ಜಿಲ್ಲೆಗಳು ಹಾಗೂ ಹೈಕೋರ್ಟ್ ಪೀಠವಿರುವ ಎಲ್ಲ ಜಾಗಗಳಲ್ಲಿ ಕಾನೂನು ಪ್ರಕೋಷ್ಠದ ಕಾರ್ಯಕರ್ತರು ಮತ್ತು ವಕೀಲರ ತಂಡದ ರಚನೆ ಆಗಿದೆ ಎಂದು ಸೂರ್ಯ ಹೇಳಿದರು.

ನಮ್ಮ ಕಾರ್ಯಕರ್ತರು ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರೆ ಅವರು ಕೆಲಸ ಕಳೆದುಕೊಳ್ಳುವಂತೆ ಮಾಡುವ ಪ್ರಯತ್ನ ಹಿಂದೆ ಆಗಿತ್ತು ಎಂದು ಆರೋಪಿಸಿದರು. ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆ ಆದಾಗ ಎಫ್ಐಆರ್ ನೋಂದಣಿ ವೇಳೆ ವಿಳಂಬ ಮಾಡಲಾಗುತ್ತಿತ್ತು. ದೋಷಾರೋಪ ಪಟ್ಟಿ ಸಲ್ಲಿಸುವಾಗ ಅದನ್ನು ಸಮರ್ಪಕವಾಗಿ ಸಲ್ಲಿಸುತ್ತಿರಲಿಲ್ಲ ಎಂದು ಟೀಕಿಸಿದರು.

ಈ ಸುದ್ದಿ ಓದಿದ್ದೀರಾ?: ದಕ್ಷಿಣ ಕನ್ನಡ ಜಿಲ್ಲೆಯ ನೈತಿಕ ಪೊಲೀಸ್‌ ಗಿರಿಗೆ ಅಂತ್ಯ ಹಾಡುತ್ತೇವೆ: ಸಚಿವ ದಿನೇಶ್ ಗುಂಡೂರಾವ್

ಹಬ್ಬಗಳ ಮೆರವಣಿಗೆಗೂ ಅವಕಾಶ ಇಲ್ಲ

ಸಂವಿಧಾನದಲ್ಲಿ ರಾಜಕೀಯ ಪಕ್ಷಕ್ಕೆ ಕೊಟ್ಟ ಅವಕಾಶದಂತೆ ನಡೆದುಕೊಂಡರೂ ಸುಳ್ಳು ಕೇಸು ಹಾಕಿದ್ದರು. ಗಣಪತಿ ಹಬ್ಬ, ಯುಗಾದಿ, ರಾಮನವಮಿ, ಹನುಮ ಜಯಂತಿಯ ಸಂದರ್ಭದಲ್ಲೂ ಮೆರವಣಿಗೆಗೆ ಅವಕಾಶ ಕೊಟ್ಟಿರಲಿಲ್ಲ. ಆಗಲೂ ಕೋರ್ಟಿಗೆ ಹೋಗಿ ಅನುಮತಿ ಪಡೆದು ರ್‍ಯಾಲಿ, ಮೆರವಣಿಗೆ, ಶೋಭಾಯಾತ್ರೆ ಮಾಡಬೇಕಾದ ಪರಿಸ್ಥಿತಿ ಬಂದಿತ್ತು ಎಂದು ತೇಜಸ್ವಿ ಸೂರ್ಯ ಅವರು ಆರೋಪಿಸಿದರು.

ಕಾಂಗ್ರೆಸ್ ಸರಕಾರವು ಅಧಿಕಾರಕ್ಕೆ ಬಂದ ಬಳಿಕ ಕಾನೂನಾತ್ಮಕವಾಗಿ ನಮ್ಮ ಕಾರ್ಯಕರ್ತರನ್ನು ಕಟ್ಟಿ ಹಾಕುವ ಕೆಲಸಕ್ಕೆ ಮುಂದಾಗಿದೆ. ಮಂತ್ರಿ ಸಹಿತವಾಗಿ ಕಾಂಗ್ರೆಸ್ ಕಾರ್ಯಕರ್ತರು ನಮ್ಮ ಕಾರ್ಯಕರ್ತರಿಗೆ ಧಮ್ಕಿ ಹಾಕುತ್ತಿದ್ದಾರೆ. ಇವೆಲ್ಲದಕ್ಕೆ ಉತ್ತರವಾಗಿ ಈ ಸಹಾಯವಾಣಿ ಸ್ಥಾಪನೆಯಾಗಿದೆ, ಇದು ದಿನದ 24 ಗಂಟೆ ಕೆಲಸ ಮಾಡಲಿದೆ ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಅವರಿಂದ ಕಾಲ್ ಬರುವ ಮೊದಲು ನಿಮಗೆ ಬರುವ ಕಾಲ್ ಬರಬಹುದು.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

28 ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರಾಗಿ ಸಚಿವರ ನೇಮಕ; ಎಂ ಬಿ ಪಾಟೀಲ್‌, ಜಾರ್ಜ್‌ಗಿಲ್ಲ ಜವಾಬ್ದಾರಿ

ಸಚಿವರ ತವರು ಜಿಲ್ಲೆ ಹೊರತುಪಡಿಸಿ ಬೇರೆ ಬೇರೆ ಜಿಲ್ಲೆಗಳಿಗೆ ನೇಮಕ ಸಂಭಾವ್ಯ ಅಭ್ಯರ್ಥಿಗಳ...

ವಿಪಕ್ಷಗಳಿಂದ ನೀರಿನ ರಾಜಕಾರಣ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಕಾವೇರಿ ನೀರಿನ ವಿಚಾರದಲ್ಲಿ ವಿಪಕ್ಷಗಳ ಮುಖಂಡರಾದ ಬಿಎಸ್​ವೈ, ಬೊಮ್ಮಾಯಿ, ಹೆಚ್​ಡಿ ಕುಮಾರಸ್ವಾಮಿಯವರು...

ತಮಿಳುನಾಡಿಗೆ ನೀರು ಬಿಟ್ಟಿದ್ದೇ ಆದರೆ ನಮ್ಮ ನಡೆ ಬೇರೆ ಇರಲಿದೆ: ಕುಮಾರಸ್ವಾಮಿ ಎಚ್ಚರಿಕೆ

ತಮಿಳುನಾಡು ಕೇಳುವ ಮೊದಲೇ ನೀರು ಬಿಟ್ಟ ಸರ್ಕಾರ ತಮಿಳುನಾಡಿನವರು ಎರಡು ಬೆಳೆ ಬೆಳೆಯುತ್ತಾರೆ:...

ಹೊಸ ಸಂಸತ್ ಕಟ್ಟಡವನ್ನು ‘ಮೋದಿ ಮಲ್ಟಿಪ್ಲೆಕ್ಸ್’ ಎನ್ನಬೇಕು: ಜೈರಾಮ್ ರಮೇಶ್

ಹೊಸ ಸಂಸತ್ ಭವನದ ರಚನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್...