- ಗೋಹತ್ಯಾ ನಿಷೇಧ ಕಾಯ್ದೆ ಮುಂದುವರೆಸಲು ಒತ್ತಾಯ
- ಕಾಂಗೆಸ್ ಮೇಲೆ ವಿದ್ಯುತ್ ಬೆಲೆ ಏರಿಕೆ ಆರೋಪ ಹೊರಿಸಿದ ಬಿಜೆಪಿ
ರಾಜ್ಯ ಸರ್ಕಾರ ಜನ ವಿರೋಧಿ ನಡೆ ಅನುಸರಿಸುತ್ತಿದೆ. ಇದರ ವಿರುದ್ದ ವಿಪಕ್ಷ ಬಿಜೆಪಿ ನಿರಂತರ ಹೋರಾಟ ನಡೆಸಲಿದೆ ಎಂದು ಮಾಜಿ ಸಚಿವ ಅಶ್ವತ್ಥ ನಾರಾಯಣ ಹೇಳಿದರು.
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದ ಮುಂಭಾಗದಲ್ಲಿ ನಡೆದ ರಾಜ್ಯ ಸರ್ಕಾರದ ಜನ ವಿರೋಧಿ ಧೋರಣೆ ಖಂಡಿಸಲು ಬಿಜೆಪಿ ನೆಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಇದರ ಜೊತೆ ಜೊತೆಗೆ ಕಾಂಗ್ರೆಸ್ ಸರಕಾರವು ಹೆಚ್ಚಿಸಿದ ವಿದ್ಯುತ್ ದರವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದು ಅಶ್ವತ್ಥನಾರಾಯಣ್ ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ?:ದೇವರಾಜ ಅರಸು ನಾಡು ಕಂಡ ಮುತ್ಸದ್ದಿ ರಾಜಕಾರಣಿ: ಸಿಎಂ ಸಿದ್ದರಾಮಯ್ಯ ಬಣ್ಣನೆ
ಬಳಿಕ ಸರ್ಕಾರ ತೆರವುಗೊಳಿಸಲುದ್ದೇಶಿಸಿರುವ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಮುಂದುವರೆಸಲು ಆಗ್ರಹಿಸಿದ ಬಿಜೆಪಿಗರು, ಗೋಪೂಜೆ ನೆರವೇರಿಸಿ ಬಿಜೆಪಿ ಜಾರಿಗೊಳಿಸಿದ ಗೋಹತ್ಯಾ ನಿಷೇಧ ಕಾನೂನನ್ನು ಮುಂದುವರಿಸಬೇಕು ಮತ್ತು ಅದನ್ನು ಹಿಂದಕ್ಕೆ ಪಡೆಯದಂತೆ ಸರಕಾರವನ್ನು ಆಗ್ರಹಿಸಿದರು.
ಇದರ ಜೊತೆಗೆ ಹಾಲಿನ ಪ್ರೋತ್ಸಾಹ ಧನಕ್ಕೆ ಕತ್ತರಿ ಹಾಕಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಅಶ್ವತ್ ನಾರಾಯಣ, ಹಾಲು ಒಕ್ಕೂಟಗಳು ಹಾಲು ಉತ್ಪಾದಕರಿಗೆ ನೀಡುತ್ತಿದ್ದ ಪ್ರೋತ್ಸಾಹಧನವನ್ನು ಯಥಾವತ್ ಮುಂದುವರಿಸುವಂತೆ ಒತ್ತಾಯಿಸಿದರು.
ಮಂತ್ರಿಗಳು ಜನರಿಗಿಂತ ಮೇಲಲ್ಲ ಎಂದು ಜನ ತೋರಿಸಿ ಕೊಟ್ಟಿದ್ದಾರೆ, ಪ್ರತಿಭಟನೆ ವ್ಯರ್ಥ ಪ್ರಯತ್ನ.