ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿದ ಬಿಜೆಪಿ

Date:

  • ಗೋಹತ್ಯಾ ನಿಷೇಧ ಕಾಯ್ದೆ ಮುಂದುವರೆಸಲು ಒತ್ತಾಯ
  • ಕಾಂಗೆಸ್ ಮೇಲೆ ವಿದ್ಯುತ್ ಬೆಲೆ ಏರಿಕೆ ಆರೋಪ ಹೊರಿಸಿದ ಬಿಜೆಪಿ

ರಾಜ್ಯ ಸರ್ಕಾರ ಜನ ವಿರೋಧಿ ನಡೆ ಅನುಸರಿಸುತ್ತಿದೆ. ಇದರ ವಿರುದ್ದ ವಿಪಕ್ಷ ಬಿಜೆಪಿ ನಿರಂತರ ಹೋರಾಟ ನಡೆಸಲಿದೆ ಎಂದು ಮಾಜಿ ಸಚಿವ ಅಶ್ವತ್ಥ ನಾರಾಯಣ ಹೇಳಿದರು.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದ ಮುಂಭಾಗದಲ್ಲಿ ನಡೆದ ರಾಜ್ಯ ಸರ್ಕಾರದ ಜನ ವಿರೋಧಿ ಧೋರಣೆ ಖಂಡಿಸಲು ಬಿಜೆಪಿ ನೆಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಇದರ ಜೊತೆ ಜೊತೆಗೆ ಕಾಂಗ್ರೆಸ್ ಸರಕಾರವು ಹೆಚ್ಚಿಸಿದ ವಿದ್ಯುತ್ ದರವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದು ಅಶ್ವತ್ಥನಾರಾಯಣ್ ಆಗ್ರಹಿಸಿದರು.ಬಿಜೆಪಿ ಪ್ರತಿಭಟನೆ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ?:ದೇವರಾಜ ಅರಸು ನಾಡು ಕಂಡ ಮುತ್ಸದ್ದಿ ರಾಜಕಾರಣಿ: ಸಿಎಂ ಸಿದ್ದರಾಮಯ್ಯ ಬಣ್ಣನೆ

ಬಳಿಕ ಸರ್ಕಾರ ತೆರವುಗೊಳಿಸಲುದ್ದೇಶಿಸಿರುವ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಮುಂದುವರೆಸಲು ಆಗ್ರಹಿಸಿದ ಬಿಜೆಪಿಗರು, ಗೋಪೂಜೆ ನೆರವೇರಿಸಿ ಬಿಜೆಪಿ ಜಾರಿಗೊಳಿಸಿದ ಗೋಹತ್ಯಾ ನಿಷೇಧ ಕಾನೂನನ್ನು ಮುಂದುವರಿಸಬೇಕು ಮತ್ತು ಅದನ್ನು ಹಿಂದಕ್ಕೆ ಪಡೆಯದಂತೆ ಸರಕಾರವನ್ನು ಆಗ್ರಹಿಸಿದರು.

ಇದರ ಜೊತೆಗೆ ಹಾಲಿನ ಪ್ರೋತ್ಸಾಹ ಧನಕ್ಕೆ ಕತ್ತರಿ ಹಾಕಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಅಶ್ವತ್ ನಾರಾಯಣ, ಹಾಲು ಒಕ್ಕೂಟಗಳು ಹಾಲು ಉತ್ಪಾದಕರಿಗೆ ನೀಡುತ್ತಿದ್ದ ಪ್ರೋತ್ಸಾಹಧನವನ್ನು ಯಥಾವತ್ ಮುಂದುವರಿಸುವಂತೆ ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಮಂತ್ರಿಗಳು ಜನರಿಗಿಂತ ಮೇಲಲ್ಲ ಎಂದು ಜನ ತೋರಿಸಿ ಕೊಟ್ಟಿದ್ದಾರೆ, ಪ್ರತಿಭಟನೆ ವ್ಯರ್ಥ ಪ್ರಯತ್ನ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿಂದುತ್ವ | ಭಾರತೀಯ ಸಮಾಜವನ್ನು ಒಳಗಿನಿಂದಲೇ ವಂಚಿಸುವ ‘ಗೋಮುಖ ವ್ಯಾಘ್ರ’

ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ ಭಾರತದ ಅತಿದೊಡ್ಡ ರಾಜಕೀಯ ಶಕ್ತಿಯಾಗಿದೆ. ಆದರೆ,...

ಸಂತ್ರಸ್ತೆ ಅಪಹರಣ ಪ್ರಕರಣ | ಮೇ 31ಕ್ಕೆ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ತೀರ್ಪು

ಕೆ ಆರ್‌ ನಗರ ಮಹಿಳೆ ಅಪಹರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ...

ಚಂದ್ರಶೇಖರ್‌ ಆತ್ಮಹತ್ಯೆ | ಸರ್ಕಾರದ ಖಜಾನೆಯನ್ನೇ ಲೂಟಿ ಮಾಡಿದ ಹಗರಣವಿದು: ಗೋವಿಂದ ಕಾರಜೋಳ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿ ಇಲಾಖಾ ಸಚಿವ ನಾಗೇಂದ್ರ ಅವರು...