ದೆಹಲಿ | ಸೋಮವಾರವಿಡೀ ಕಾದರೂ ಬೊಮ್ಮಾಯಿಗೆ ಸಿಗದ ‘ಹೈಕಮಾಂಡ್ ದರ್ಶನ’; ಇಂದು ಭೇಟಿ ಸಾಧ್ಯತೆ

Date:

ರಾಜ್ಯದ ವಿಧಾನಸಭಾ ಚುನಾವಣೆಯ ಫಲಿತಾಂಶ ಬಂದು ಮೂರು ತಿಂಗಳಾಗುತ್ತಾ ಬಂದರೂ ರಾಜ್ಯದ ವಿಪಕ್ಷ ನಾಯಕ ಇನ್ನೂ ಆಯ್ಕೆಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರವಿಡೀ ಕಾದರೂ ಹೈಕಮಾಂಡ್ ನಾಯಕರ ಭೇಟಿಗೆ ಸಾಧ್ಯವಾಗಿಲ್ಲ.

- Advertisement -

ಬಿಜೆಪಿಯ ರಾಜ್ಯಾಧ್ಯಕ್ಷ ಹುದ್ದೆ ಹಾಗೂ ವಿಪಕ್ಷ ನಾಯಕನ ಆಯ್ಕೆಯ ಚರ್ಚೆಗಾಗಿ ಹೈಕಮಾಂಡ್‌ನಿಂದ ಬುಲಾವ್ ಬಂದಿತ್ತು ಎಂಬ ಸುದ್ದಿ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿಯೇ ಬೊಮ್ಮಾಯಿ ಅವರು ದೆಹಲಿಗೆ ತೆರಳಿದ್ದರು. ಸೋಮವಾರ ಇಡೀ ದಿನದ ಪ್ರಯತ್ನದ ಬಳಿಕವೂ ವರಿಷ್ಠರ ಭೇಟಿ ಸಾಧ್ಯವಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

ಬಿಜೆಪಿ ಹೈಕಮಾಂಡ್ ಲೋಕಸಭೆ, ರಾಜ್ಯಸಭೆಯಲ್ಲಿ ಸಾಲು ಸಾಲು ಮಸೂದೆಗಳ ಮಂಡನೆಯಲ್ಲಿ ನಿರತವಾಗಿದೆ.

ರಾಷ್ಟ್ರೀಯ ನಾಯಕರ ಭೇಟಿ ಲಭ್ಯವಾಗದ ಹಿನ್ನೆಲೆಯಲ್ಲಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಬೊಮ್ಮಾಯಿ, ‘ನನಗೆ ವರಿಷ್ಠರು ಬುಲಾವ್‌ ನೀಡಿರಲಿಲ್ಲ’ ಎಂದು ಸಮಜಾಯಿಷಿ ನೀಡಿದರು.

‘ಸಂಸತ್ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ದೆಹಲಿಗೆ ಬನ್ನಿ ಎಂದು ರಾಜ್ಯದ ಕೆಲ ಸಂಸದರು ಆಹ್ವಾನಿಸಿದ್ದರು. ನನಗೂ ಅವರನ್ನು ಭೇಟಿಯಾಗಿ, ಕೆಲವೊಂದು ಮಾತುಕತೆ ನಡೆಸುವುದಿತ್ತು. ಹಾಗಾಗಿ ಬಂದಿದ್ದೆ’ ಎಂದರು.

‘ರಾಜ್ಯಸಭೆಯಲ್ಲಿ ಅಮಿತ್ ಶಾ ಅಲ್ಲಿ ಬ್ಯುಝಿಯಾಗಿದ್ದಾರೆ. ಹಾಗಾಗಿ, ಅವರನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ, ಜೆ.ಪಿ.ನಡ್ಡಾ ಅವರನ್ನು ಮಂಗಳವಾರ ಭೇಟಿ ಮಾಡುವ ಉದ್ದೇಶವಿದ್ದು, ಕಾಲಾವಕಾಶ ಕೇಳಿದ್ದೇನೆ. ಶಾ ಅವರು ಮಂಗಳವಾರ ಸಮಯಾವಕಾಶ ಕೊಟ್ಟರೆ ಭೇಟಿಯಾಗುತ್ತೇನೆ’ ಎಂದರು.

‘ಸದ್ಯ ಸಂಸತ್ ಅಧಿವೇಶನ ನಡೆಯುತ್ತಿದೆ. ಐದು ರಾಜ್ಯಗಳ ಚುನಾವಣೆಗೆ ಸಿದ್ಧತೆ ನಡೆಸಬೇಕಿದೆ. ನಮ್ಮ ರಾಷ್ಟ್ರೀಯ ನಾಯಕರು ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ಮುಂದಿನ ದಿನಗಳಲ್ಲಿ ನಮ್ಮ ರಾಜ್ಯದ ಬಗ್ಗೆ ಗಮನ ಹರಿಸಲಿದ್ದಾರೆ’ ಎಂದು ವಿಪಕ್ಷ ನಾಯಕನ ಆಯ್ಕೆ ವಿಳಂಬವಾಗುತ್ತಿರುವ ಬಗ್ಗೆ ಪತ್ರಕರ್ತರು ಕೇಳಿದಾಗ, ಈ ರೀತಿ ಪ್ರತಿಕ್ರಿಯಿಸಿದರು.

ಬಸವರಾಜ ಬೊಮ್ಮಾಯಿಯವರು ಇಂದು(ಮಂಗಳವಾರ) ಹೈಕಮಾಂಡ್ ನಾಯಕರ ಭೇಟಿ ಮಾಡುವ ಸಾಧ್ಯತೆ ಇದೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಸಮಯ ಕೇಳಿದ್ದಾರೆ. ಇಂದು ವರಿಷ್ಠರಿಂದ ಸಮಯ ಸಿಗುವ ಸಾಧ್ಯತೆ ಇದೆ. ಆದರೆ, ಅದು ಇನ್ನೂ ಅಧಿಕೃತಗೊಂಡಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಿನ ಬಜೆಟ್‌ನಲ್ಲಿ ಅನುದಾನ: ಸಿಎಂ ಡಿ ಕೆ ಶಿವಕುಮಾರ್

"ಮುಂದಿನ ಬಜೆಟ್‌ನಲ್ಲಿ ಮೇಕೆದಾಟು ಅಣೆಕಟ್ಟು ಯೋಜನೆಗೆ ಸೂಕ್ತ ಅನುದಾನ ಮೀಸಲಿಡಲಾಗುವುದು. ಅರಣ್ಯ...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ? ಅಂಜಲಿ ಭಾರದ್ವಾಜ್‌ ಏನು ಹೇಳುತ್ತಾರೆ?

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು....

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...