ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿ ಬಿಜೆಪಿಯವರು ವರ್ತಿಸುತ್ತಿದ್ದಾರೆ: ಡಿ ಕೆ ಶಿವಕುಮಾರ್‌

Date:

ಬಿಜೆಪಿಯವರು ಸಂವಿಧಾನವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿ ವರ್ತಿಸುತ್ತಿದ್ದಾರೆ. ರಾಜ್ಯಪಾಲರನ್ನು ಬಿಜೆಪಿಯವರು ತಮ್ಮ ಏಜೆಂಟರನ್ನಾಗಿ ಪರಿವರ್ತನೆ ಮಾಡಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

- Advertisement -

ಶೇಷಾದ್ರಿಪುರ ಜಂಕ್ಷನ್ ಬಳಿ ರಾಜೀವ್ ಗಾಂಧಿ ಅವರ ಪ್ರತಿಮೆಗೆ ಮಂಗಳವಾರ ಪುಷ್ಪನಮನ ಸಲ್ಲಿಸಿದ ನಂತರ, ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿಯನ್ನು ಲೋಕಾಯುಕ್ತದ ಎಸ್ಐಟಿ ರಾಜ್ಯಪಾಲರಿಗೆ ಸಲ್ಲಿಸಿದ್ದು, ಈ ವಿಚಾರದಲ್ಲಿ ರಾಜ್ಯಪಾಲರ ಪ್ರತಿಕ್ರಿಯೆ ಏನಿರಬಹುದು ಎನ್ನುವ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ನಾನು ರಾಜ್ಯಪಾಲರಿಗಾಗಲಿ, ಲೋಕಾಯುಕ್ತಕ್ಕಾಗಲಿ ವಕ್ತಾರನಲ್ಲ. ನಾನು ಕಾಂಗ್ರೆಸ್ ಪಕ್ಷದ ಪ್ರತಿನಿಧಿ. ಹೀಗಾಗಿ ಕುಮಾರಸ್ವಾಮಿ ಪ್ರಕರಣದ ಬಗ್ಗೆ ತಿಳಿದುಕೊಂಡು ಅನಂತರ ಈ ಬಗ್ಗೆ ಮಾತನಾಡುತ್ತೇನೆ” ಎಂದರು.

ಬಿಬಿಎಂಪಿಯಿಂದ ಪ್ರತಿ ವರ್ಷ ರಾಜೀವ್ ಗಾಂಧಿ ಜನ್ಮ ದಿನಾಚರಣೆ

“ಮಾಜಿ ಪ್ರಧಾನ ಮಂತ್ರಿಗಳಾದ ರಾಜೀವ್ ಗಾಂಧಿ ಅವರ ಆಲೋಚನೆಗಳು ಇಂದಿನ ಯುವಪೀಳಿಗೆಗೆ ಸ್ಪೂರ್ತಿ. ಆದ ಕಾರಣ ಪ್ರತಿ ವರ್ಷ ಇವರ ಜನ್ಮದಿನವನ್ನು ಬಿಬಿಎಂಪಿಯಿಂದ ನಡೆಸಬೇಕು ಎಂದು ಆದೇಶ ನೀಡಲಾಗುವುದು” ಎಂದರು.

“ಪಂಚಾಯತ್ ಮಟ್ಟದಿಂದ ಪಾರ್ಲಿಮೆಂಟ್ ವರೆಗೆ ನಾಯಕರು ರಾಜೀವ್ ಗಾಂಧಿ ಅವರನ್ನು ಮರೆಯುವಂತಿಲ್ಲ. ನಾನು ಬೆಂಗಳೂರು ಅಭಿವೃದ್ಧಿ ಸಚಿವನಾದ ತಕ್ಷಣ ರಾಜೀವ್ ಗಾಂಧಿಯವರ ನೂತನ ಪ್ರತಿಮೆ ನಿರ್ಮಾಣಕ್ಕೆ ಸಹಿ ಹಾಕಿದೆ. ದಿನೇಶ್ ಗುಂಡೂರಾವ್ ಅವರ ಇಚ್ಛೆಯಂತೆ, ಅವರ ಕ್ಷೇತ್ರ ವ್ಯಾಪ್ತಿಯ ಶೇಷಾದ್ರಿಪುರಂ ಸಿಗ್ನಲ್ ಮುಕ್ತ ಜಂಕ್ಷನ್ ಗೆ ರಾಜೀವ್ ಗಾಂಧಿ ಹೆಸರಿಟ್ಟು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟನೆ ಮಾಡಿಸಲಾಗಿತ್ತು” ಎಂದರು.

“18 ವರ್ಷಕ್ಕೆ ಮತದಾನದ ಹಕ್ಕು, ಪಂಚಾಯತ್ ರಾಜ್ ತಿದ್ದುಪಡಿ, ಐಟಿ ಬಿಟಿ ಬೆಳವಣಿಗೆಗೂ ಇವರೇ ಕಾರಣ. ಇಂದು ಎಲ್ಲರ ಬಳಿ ಎರಡೆರಡು ಮೊಬೈಲ್ ಗಳಿವೆ. ಇದಕ್ಕೆ ಕಾರಣ ರಾಜೀವ್ ಗಾಂಧಿಯವರ ದೂರದೃಷ್ಟಿಯ ಟೆಲಿಫೋನ್ ಕ್ರಾಂತಿ ಕಾರಣ” ಎಂದು ಹೇಳಿದರು.

“ದೇಶದ ಸಮಗ್ರತೆ ಐಕ್ಯತೆ ಶಾಂತಿಗಾಗಿ ನೆಹರು ಕುಟುಂಬ ದುಡಿದಿದೆ. ರಾಜೀವ್ ಗಾಂಧಿ ಅವರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ಅವರ ವಿಚಾರಗಳನ್ನು ನಾವು ಮರೆಯಬಾರದು ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...