ವಿಜಯೇಂದ್ರ, ಸಿಟಿ ರವಿ, ಪಿ.ರಾಜೀವ್‌ನಿಂದ ಬಿಜೆಪಿ ಹಾಳಾಗುತ್ತಿದೆ: ಮಾಲೀಕಯ್ಯ ಗುತ್ತೇದಾರ ಕಿಡಿ

Date:

Advertisements

ಸಹೋದರ ನಿತಿನ್ ಗುತ್ತೇದಾರ ಅವರನ್ನು ಬಿಜೆಪಿಗೆ ಸೇರಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಅವರು ಸ್ವಪಕ್ಷದ ನಾಯಕರ ವಿರುದ್ಧವೇ ಹರಿಹಾಯ್ದಿದ್ದಾರೆ.

ಕಲಬುರಗಿ ನಗರದ ಹೊರವಲಯದಲ್ಲಿ ಮಂಗಳವಾರ ಆಯೋಜಿಸಿದ್ದ ಹಿತೈಷಿಗಳ ಸಭೆಯಲ್ಲಿ ಮಾತನಾಡಿದ ಅವರು, “ವಿಜಯೇಂದ್ರ, ಸಿ ಟಿ ರವಿಯಂತಹ ನಾಯಕರು ‌ರಾಜ್ಯದಲ್ಲಿ ಪಕ್ಷವನ್ನು ಒಡೆಯುತ್ತಿದ್ದಾರೆ” ಎಂದು ಕಿಡಿಕಾರಿದರು.

“ನನ್ನ ಒಂದು ಮಾತು ಕೇಳದೇ ನಿತಿನ್ ಗುತ್ತೇದಾರ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಲಾಗಿದೆ. ನಿತಿನ್ ಗುತ್ತೇದಾರ ಅವರು ಅಫಜಲಪುರ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ನನ್ನ ವಿರುದ್ಧ ಸ್ಪರ್ಧಿಸಿದಾಗ ಆರು ವರ್ಷ ಅಮಾನತು ಮಾಡಲಾಗಿತ್ತು. ವಿಜಯೇಂದ್ರ ಅವರು ಅಮಾನತು ನಿರ್ಧಾರ ಯಾವಾಗ ವಾಪಸ್ ಪಡೆದರು” ಎಂದು ಪ್ರಶ್ನಿಸಿದರು.

“ಅಮಾನತು ವಾಪಸ್ ಪಡೆಯುವ ‌ಮುನ್ನ ಪಕ್ಷದ ಮುಖಂಡರನ್ನು ಕರೆದು ಮಾತನಾಡಬೇಕು ಎಂಬುದು ಇವರಿಗೆ ಗೊತ್ತಿಲ್ಲವೇ? ನಿತಿನ್ ನನ್ನು ಪಕ್ಷಕ್ಕೆ ‌ಸೇರಿಸಿಕೊಳ್ಳಲು ವಿಜಯೇಂದ್ರ, ಸಿ ಟಿ ರವಿ, ಪಿ.ರಾಜೀವ್ ಎಷ್ಟು ಹಣ ಪಡೆದಿದ್ದಾರೆ?” ಎಂದು ಹರಿಹಾಯ್ದರು.

“ಒಂದು ಕಡೆ ಅಫಜಲಪುರದಲ್ಲಿ ನನಗೆ ಟಿಕೆಟ್ ನೀಡಿ, ಮತ್ತೊಂದು ಕಡೆ ನಿತಿನ್‌ನನ್ನು ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುವಂತೆ ಪುಸಲಾಯಿಸಿದ್ದು ಬಿಜೆಪಿಯವರು. ಹೀಗಾಗಿ ನನ್ನ ಮನೆಯನ್ನು ಒಡೆದ ಅಪಕೀರ್ತಿ ಅವರಿಗೇ ಸಲ್ಲುತ್ತದೆ” ಎಂದು ವಿಜಯೇಂದ್ರ ವಿರುದ್ಧ ಕಿಡಿಕಾರಿದರು.

“ಅರುಣ್ ಸಿಂಗ್ ಅವರು ಪಕ್ಷದ ಉಸ್ತುವಾರಿಯಾಗಿದ್ದಾಗ ಎಲ್ಲರೂ ಹೆದರುತ್ತಿದ್ದರು. ಆದರೆ, ಈಗಿನ ಪಕ್ಷದ ಸಂಘಟನಾ ಕಾರ್ಯದರ್ಶಿ ರಾಜೇಶ್ ಅವರನ್ನು ವಿಜಯೇಂದ್ರ ತಮ್ಮ ಕೈಗೊಂಬೆ ಮಾಡಿಕೊಂಡಿದ್ದಾರೆ. ಈಗ ರಾಜ್ಯ ಸಂಘಟನಾ ಕಾರ್ಯದರ್ಶಿಗಳು ಭಾರಿ ಪ್ರಮಾಣದ ಆಸ್ತಿ ‌ಮಾಡಿಕೊಂಡಿದ್ದಾರೆ” ಎಂದು ಪಿ ರಾಜೀವ್‌ ವಿರುದ್ಧ ವಾಗ್ದಾಳಿ ನಡೆಸದರು.

“ನಾನು ಶಾಸಕನಾದರೆ ಸರ್ಕಾರದಲ್ಲಿ ಮಂತ್ರಿಯಾಗಬಹುದು ಎಂಬ ಆತಂಕದಿಂದ ನನ್ನ ತಮ್ಮನನ್ನು ಮುಂದಿಟ್ಟುಕೊಂಡು ಬಿಜೆಪಿಯವರೇ ನನ್ನನ್ನು ಸೋಲಿಸಿದರು. ಪಕ್ಷಕ್ಕೆ ದುಡಿದ ಕೆ ಎಸ್‌ ಈಶ್ವರಪ್ಪ, ಕರಡಿ ಸಂಗಣ್ಣ, ಪ್ರತಾಪ ಸಿಂಹ ಅವರಿಗೆ ಉದ್ದೇಶಪೂರ್ವಕವಾಗಿ ಯಡಿಯೂರಪ್ಪ, ವಿಜಯೇಂದ್ರ ಅವರು ಟಿಕೆಟ್ ‌ನಿರಾಕರಿಸಿದ್ದಾರೆ” ಎಂದು ಆರೋಪಿಸಿದರು.

“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಗ್ಯಾರಂಟಿ ಯೋಜನೆಗಳಿಂದಲ್ಲ. ಬದಲಾಗಿ ಬಿಜೆಪಿ ಭ್ರಷ್ಟಾಚಾರದಿಂದ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಮಿತಿಮೀರಿತ್ತು. ಈ ಬಗ್ಗೆ ಅರುಣ್ ಸಿಂಗ್ ಅವರ ಗಮನಕ್ಕೆ ತಂದಿದ್ದೆ” ಎಂದರು.

ಕಾಂಗ್ರೆಸ್‌ಗೆ ಆಹ್ವಾನ

“ಬಿಜೆಪಿ ಬಿಡಬೇಕೋ ಬೇಡವೋ ಎಂಬ ಬಗ್ಗೆ ಇದೇ 19ರಂದು ಅಂತಿಮ ತೀರ್ಮಾನ ಕೈಗೊಳ್ಳುತ್ತೇನೆ. ಬಿಜೆಪಿ ಬಿಡುವಂತೆ ಇಂದಿನ ಸಭೆಯಲ್ಲಿ ‌ಕಾರ್ಯಕರ್ತರು ತಿಳಿಸಿದ್ದಾರೆ. ಕಾಂಗ್ರೆಸ್ ಸೇರುವಂತೆಯೂ ಹಲವರು ಸಲಹೆ ನೀಡಿದ್ದಾರೆ. ಬಹುತೇಕ ಕಾರ್ಯಕರ್ತರು ನಾನು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ದ ಎಂದಿದ್ದಾರೆ. ಸಿದ್ದರಾಮಣ್ಣ, ಡಿ.ಕೆ. ಶಿವಕುಮಾರ್ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ” ಎಂದು ತಿಳಿಸಿದರು.

ಸಭೆಯಲ್ಲಿ ಮಾಲೀಕಯ್ಯ ಸಹೋದರ ಅರವಿಂದ ಗುತ್ತೇದಾರ, ಮಗ ರಿತೇಶ್ ಗುತ್ತೇದಾರ, ಮುಖಂಡರಾದ ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಅರುಣಕುಮಾರ ಪಾಟೀಲ್ ಕೊಡಲಹಂಗರಗಾ, ಶಿವಕಾಂತ ಮಹಾಜನ್, ಕಲ್ಯಾಣಪ್ಪ ಪಾಟೀಲ ಮಳಖೇಡ, ಚಿತ್ರಶೇಖರ ಪಾಟೀಲ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ಬಾಪೂ ಎಂಬ ಪವಾಡದ ಅನ್ವೇಷಣೆ…

ಇಂದು ರಾಷ್ಟ್ರಪಿತ ಬಾಪೂ ಜನ್ಮದಿನ. ಆ ನೆನಪಿನಲ್ಲಿ ಸದ್ಯದಲ್ಲೇ ಹೊರಬರಲಿರುವ ಎನ್.ಎಸ್.‌...

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು...

Download Eedina App Android / iOS

X