ಹೊಟ್ಟೆಯುರಿಯಿಂದ ಬಿಜೆಪಿಯವರು ನನ್ನ ವಿರುದ್ಧ ಮಾಡಬಾರದ್ದನ್ನೆಲ್ಲ ಮಾಡುತ್ತಿದ್ದಾರೆ: ಸಿದ್ದರಾಮಯ್ಯ

Date:

ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದಕ್ಕೆ ಬಿಜೆಪಿಯವರು ಹೊಟ್ಟೆಯುರಿಯಿಂದ ಮಾಡಬಾರದ್ದನ್ನೆಲ್ಲ ನನ್ನ ವಿರುದ್ಧ ಮಾಡುತ್ತಿದ್ದಾರೆ. ಬಿಜೆಪಿಯ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

- Advertisement -

ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಸದ್ಭಾವನಾ ದಿನಾಚರಣೆ ಮತ್ತು ದೇವರಾಜ ಅರಸು ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಭಯ ನಾಯಕರಿಗೆ ಗೌರವ ಸಲ್ಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಕಾಂಗ್ರೆಸ್‌ ಅಸಮಾನತೆಯನ್ನು ಹೋಗಲಾಡಿಸಲು ಬಯಸುತ್ತದೆ. ಈಗಲೂ ಅಸಮಾನತೆ ವಿರುದ್ಧ ಹೋರಾಟ ಮಾಡುತ್ತಿದೆ. ಅದಕ್ಕೆ ಬಿಜೆಪಿಯವರಿಗೆ ಸಹಿಸಲಾಗುತ್ತಿಲ್ಲ. ಅಸಮಾನತೆ ವಿರುದ್ಧ ಕಾರ್ಯಕ್ರಮ ನೀಡುತ್ತೇನೆಂಬ ಕಾರಣಕ್ಕೆ ಬಿಜೆಪಿ ನನ್ನನ್ನು ಸಹಿಸುತ್ತಿಲ್ಲ” ಎಂದರು.

“ಬಿಜೆಪಿಯವರು ತಾವು ಹಿಂದುಳಿದವರು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡವರ ಪರ ಎಂದು ಎಷ್ಟೇ ಹೇಳಿಕೊಂಡರೂ, ಅವರು ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರ ಇರಲು ಸಾಧ್ಯವೇ ಇಲ್ಲ. ಬಡವರಿಗೆ ಅವರು ಯಥಾ ಸ್ಥಿತಿಯಲ್ಲಿರಬೇಕು. ಅವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬರಬಾರದು ಎಂದು ಬಯಸುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಇವತ್ತು ದೇಶದ ಸಂಪರ್ಕ ಕ್ಷೇತ್ರದಲ್ಲಿ ಆಗಿರುವ ಕ್ರಾಂತಿಗೆ ರಾಜೀವ್ ಗಾಂಧಿ‌ ಕಾರಣ. ರಾಜೀವ್ ಗಾಂಧಿಯವರು ಯುವ ಶಕ್ತಿ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿದ್ದರು. ಆದ್ದರಿಂದ ಮತದಾನದ ವಯಸ್ಸು 21 ರಿಂದ 18 ಕ್ಕೆ ಇಳಿಸಿದರು. ಅವರು ಇನ್ನೂ ಬದುಕಿರಬೇಕಾಗಿತ್ತು. ಅವರು ಇದ್ದಿದ್ದರೆ ದೇಶದಲ್ಲಿ ನಿಜವಾದ ಬದಲಾವಣೆ ಆಗಿರುತ್ತಿತ್ತು. ದೂರದೃಷ್ಟಿ, ದೇಶ, ಸಮಾಜದ ಬಗ್ಗೆ ಕಾಳಜಿ ಇದ್ದವರು, ಬಹಳ ಚಿಕ್ಕ ವಯಸ್ಸಿನಲ್ಲಿಯೇ ನಮ್ಮನ್ನು ಅಗಲಿದರು” ಎಂದು ವಿಷಾದಿಸಿದರು.

“ರಾಜೀವ್‌ ಗಾಂಧಿ ಅವರು ವಿಶೇಷವಾಗಿ ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಪಾಲು ಸಿಗಬೇಕು ಎಂದು ಬಯಸಿದ್ದರು. ಆಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಸಂವಿಧಾನಕ್ಕೆ 73 ಮತ್ತು 74 ನೇ ತಿದ್ದುಪಡಿ ಜಾರಿಗೆ ತಂದರು. ಈ ದೇಶದಲ್ಲಿ ಏನಾದರೂ ಮಹಿಳೆಯರಿಗೆ ರಾಜಕೀಯದಲ್ಲಿ ಪಾಲು ಸಿಕ್ಕಿದ್ದರೆ, ಸಂವಿಧಾನಕ್ಕೆ ತಂದ ಈ ತಿದ್ದುಪಡಿಗಳು ಕಾರಣ ಎಂದು ಹೇಳ ಬಯಸುತ್ತೇನೆ” ಎಂದರು.

“‌ದೇವರಾಜ ಅರಸು ಅವರು 1972 ರಿಂದ ದೀರ್ಘ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದರು.
ಅರಸು ಅವರನ್ನು ಸಾಮಾಜಿಕ ನ್ಯಾಯದ ಹರಿಕಾರ ಎಂದು ಕರೆಯುತ್ತೇವೆ. ಹಾವನೂರ ಆಯೋಗದ ರಚನೆ ಮಾಡಿ, ಹಿಂದುಳಿದವರಿಗೆ ಶಿಕ್ಷಣ ಉದ್ಯೋಗದಲ್ಲಿ ಮೀಸಲಾತಿ ಒದಗಿಸಿದರು; ಸಮಾಜದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾದವರನ್ನು ರಾಜಕೀಯವಾಗಿ ಗುರುತಿಸಿ, ಅವರಿಗೆ ಚುನಾವಣೆಯಲ್ಲಿ ನಿಲ್ಲಲು ಅವಕಾಶ ಕೊಟ್ಟರು. ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವೇ ಇಲ್ಲ ಎಂದುಕೊಂಡವರೂ ವಿಧಾನ ಸೌಧ ಪ್ರವೇಶಿಸುವಂತೆ ಮಾಡಿದರು” ಎಂದರು.

“ಅರಸು ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ, ಜಾಫರ್‌ ಷರೀಫ್‌ ಅವರಿಗೆ ಟಿಕೆಟ್‌ ಕೊಟ್ಟರು. ನಾಗರತ್ನಮ್ಮ ಅವರು ಜಟಕಾ ಗಾಡಿ ಓಡಿಸುವವರಿಗೆ ಟಿಕೆಟ್‌ ಕೊಡ್ತೀಯಲ್ಲ ಎಂದು ಕೇಳಿದರು. ನೋಡಮ್ಮಾ, ಇನ್ನು ಮೇಲೆ ಜಟಕಾ ಸಾಹೇಬರಿಗೆ, ಕ್ಷೌರ ಮಾಡುವವರಿಗೆ ಟಿಕೆಟ್‌ ಕೊಡೋದು, ಶೋಕಿ ಮಾಡುವವರಿಗಲ್ಲ ಎಂದು ಉತ್ತರಿಸಿದರಂತೆ” ಎಂದು ತಾವು ಓದಿದ್ದನ್ನು ಸ್ಮರಿಸಿದರು.

ರಾಜೀವ ಗಾಂಧಿ ಹಾಗೂ ದೇವರಾಜ ಅರಸರ ಬದುಕು- ಕೆಲಸಗಳು ನಮಗೆ ಮಾರ್ಗದರ್ಶಿಯಾಗಿದೆ. ಅವರ ಹಾದಿಯಲ್ಲಿ ನಾವು ನಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಜೆ. ಜಾರ್ಜ್‌, ರಾಮಲಿಂಗಾರೆಡ್ಡಿ, ಈಶ್ವರ ಖಂಡ್ರೆ ಮತ್ತಿತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...