ತಪ್ಪು ಮಾಹಿತಿ ಮೂಲಕ ಜನರನ್ನು ಪ್ರಚೋದಿಸುತ್ತಿರುವ ಬಿಜೆಪಿ: ಸಚಿವ ರಾಮಲಿಂಗಾರೆಡ್ಡಿ

Date:

ಹುಬ್ಬಳ್ಳಿ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ವಾಪಸ್‌ ಪಡೆದ ವಿಚಾರದಲ್ಲಿ ಜನರಿಗೆ ತಪ್ಪು ಮಾಹಿತಿ ನೀಡಿ ಬಿಜೆಪಿ ಪ್ರಚೋದಿಸಲು ಹವಣಿಸುತ್ತಿದೆ ಎಂದು ಸಚಿವ ರಾಮಲಿಂಗಾರೆಡ್ಡಿ, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್‌ ಬಾಬು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ಹೇಳಿದ್ದಾರೆ.

- Advertisement -

ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಜಂಟಿಸುದ್ದಿಗೋಷ್ಠಿಯಲ್ಲಿ ಮೂವರು ಮಾತನಾಡಿ, “ಕಲಂ 321ರ ಅಡಿಯಲ್ಲಿ ರಾಜ್ಯ ಸರ್ಕಾರಗಳು ಕಾನೂನು ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತಾಸಕ್ತಿಯಿಂದ ಯಾವ ಯಾವ ಸಂದರ್ಭಗಳಲ್ಲಿ ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್ ಹಿಂಪಡೆಯಬಹುದೆಂದು ಹಲವಾರು ತೀರ್ಪುಗಳಲ್ಲಿ ನ್ಯಾಯಾಲಯಗಳು ತಮ್ಮ ವ್ಯಾಖ್ಯಾನ ನೀಡಿರುತ್ತವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಕ್ರಿಮಿನಲ್ ಪ್ರಕ್ರಿಯೆ ಸಂಹಿತೆ ಕಲಂ 321ರ ಅಡಿಯಲ್ಲಿ ಸಂಪುಟ ಸಭೆಯ ಅನುಮೋದನೆ ಯೊಂದಿಗೆ ಪ್ರಾಸಿಕುಷನ್ ಅನುಮತಿಯನ್ನು ವಾಪಸ್ಸು ಪಡೆಯಲು ರಾಜ್ಯ ಸರ್ಕಾರಕ್ಕೆ ಅವಕಾಶವಿರುತ್ತದೆ. ಸಾಮಾನ್ಯ ವಾಗಿ ಗೃಹ ಇಲಾಖೆಯ ಪ್ರಸ್ತಾವನೆ ಯೊಂದಿಗೆ, ಸಂಪುಟ ಸಭೆಯ ಉಪಸಮಿತಿಯು ನೀಡಿದ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಅಂಗೀಕರಿಸುವ ಅಥವಾ ತಿರಸ್ಕರಿಸುವ ಅವಕಾಶವಿರುತ್ತದೆ. ಇದೊಂದು ನಿರಂತರ ಪ್ರಕ್ರಿಯೆ ಆಗಿದ್ದು, ಬಿಜೆಪಿ ಸರ್ಕಾರದಲ್ಲಿ ಕಾನೂನು ಸಚಿವರಾಗಿದ್ದ ಜೆ ಸಿ ಮಾಧುಸ್ವಾಮಿ, ಬೊಮ್ಮಾಯಿ ಅವರ ಬಿಜೆಪಿ ಸರ್ಕಾರದಲ್ಲಿ 62 ಪ್ರಕರಣಗಳನ್ನು ಹಿಂದಕ್ಕೆ ಪಡೆದಿದ್ದನ್ನು ಸಾರ್ವಜನಿಕವಾಗಿ ಸಮರ್ಥಿಸಿಕೊಂಡಿದ್ದರು” ಎಂದು ಹೇಳಿದರು.

“ಕರ್ನಾಟಕದ ಹಿಂದಿನ ಬಿಜೆಪಿಯ ಯಡಿಯೂರಪ್ಪನವರ ನೇತೃತ್ವದ ಸರ್ಕಾರ ಒಟ್ಟು 385 ಕ್ರಿಮಿನಲ್ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುತ್ತದೆ. ಅದರಲ್ಲಿ 182 ಪ್ರಕರಣಗಳು ಕೋಮು ಸಂಘರ್ಷ ದ್ವೇಷ ಭಾಷಣ ಸಂಬಂಧಪಟ್ಟ ಪ್ರಕರಣಗಳಾಗಿರುತ್ತವೆ. ಸುಮಾರು 2000 ಆರೋಪಿಗಳು ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ಸು ಪಡೆದ ಪ್ರಕರಣಗಳ ಫಲಾನುಭವಿಗಳಾಗಿದ್ದು, ಇದರಲ್ಲಿ 1000 ಆರೋಪಿಗಳು ಕೋಮು ಸಂಘರ್ಷದ ಆರೋಪಿಗಳಾಗಿರುತ್ತಾರೆ. ಬಿಜೆಪಿ ಶಾಸಕರು ಮತ್ತು ಪಾರ್ಲಿಮೆಂಟ್ ಸದಸ್ಯರು ವಾಪಸ್ಸು ಪಡೆದ ಪ್ರಕರಣಗಳ ಫಲಾನುಭವಿಗಳಾಗಿರುತ್ತಾರೆ. ಆಗ ಬಸವರಾಜ ಬೊಮ್ಮಾಯಿ ಗೃಹ ಸಚಿವರಾಗಿದ್ದರು” ಎಂದು ವಿವರಿಸಿದರು.

“ಕರ್ನಾಟಕದ ಬಿಜೆಪಿ ಸರ್ಕಾರ 2020ರಲ್ಲಿ 62 ಪ್ರಕರಣಗಳನ್ನು ವಾಪಸ್ಸು ಪಡೆದಿದ್ದು, ಇದರಲ್ಲಿ ಅಂದಿನ ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ, ಪ್ರವಾಸೋದ್ಯಮ ಸಚಿವ ಸಿ ಟಿ ರವಿ, ಆನಂದ್ ಸಿಂಗ್, ರಮೇಶ್ ಜಾರಕಿ ಹೋಳಿ, ಬಿ ಸಿ ಪಾಟೀಲ್, ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್, ಆಲಪ್ಪ ಆಚಾರ್, ರೇಣುಕಾಚಾರ್ಯ ಮತ್ತು ಇತರೆ ಬಿಜೆಪಿ ನಾಯಕರ ಪ್ರಕರಣಗಳು ಸೇರಿರುತ್ತದೆ. ಸಾರ್ವಜನಿಕ ಹಿತಾಸಕ್ತಿಯಿಂದ ಕೋಮು ಸಂಘರ್ಷದ ಗೋ ವಿವಾದದ ಹಾಗೂ ದ್ವೇಷ ಭಾಷಣದ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುವುದಾಗಿ ಅಂದಿನ ಕಾನೂನು ಸಚಿವರು ಹೇಳಿರುತ್ತಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪೊಲೀಸರಿಗೆ-ಸರ್ಕಾರಕ್ಕೆ ಸವಾಲಾಗಿರುವ ಸೈಬರ್ ಕ್ರೈಮ್

“ಬಿಜೆಪಿ ಸರ್ಕಾರಗಳು ಹಿಂದಕ್ಕೆ ಪಡೆದಿರುವ ಪ್ರಕರಣಗಳಲ್ಲಿ ಬಲಪಂಥೀಯ ಸಂಘಟನೆಗಳ, ಹಿಂದೂ ಸಂಘಟನೆಗಳ ಹಾಗೂ ಕೋಮುಗಲಭೆ ಆರೋಪಿಗಳ ಪ್ರಕರಣಗಳು ಸೇರಿರುತ್ತವೆ. ಇವುಗಳಲ್ಲಿ ಟಿಪ್ಪು ಜಯಂತಿ ಹೆಸರಿನಲ್ಲಿ ನಡೆದ ಗಲಭೆಗಳು, ಅಂತರ್ಜಾತಿಯ ವಿವಾಹದ ಹೆಸರಿನಲ್ಲಿ ನಡೆದ ಗಲಭೆಗಳು, ಮತಾಂತರದ ಹೆಸರಿನಲ್ಲಿ ನಡೆದ ಗಲಭೆಗಳು, ಸೇರಿರುತ್ತವೆ. ಮತೀಯ ಗಲಭೆಗೆ ಪ್ರಚೋದನೆ ನೀಡಿದ ಗಂಭೀರ ಸ್ವರೂಪದ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುವ ಬಿಜೆಪಿ ಸರ್ಕಾರ, ಹಿಂದೂ ಜಾಗರಣ ವೇದಿಕೆ, ಶ್ರೀರಾಮ ಸೇನೆ ಹಾಗೂ ನೈತಿಕ ಪೊಲೀಸ್ ಗಿರಿ ಹೆಸರಿನಲ್ಲಿ ದಾಂದಲೆ ಮಾಡಿದ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುತ್ತದೆ” ಎಂದು ವಿವರಿಸಿದರು.

“ರಾಜ್ಯದಲ್ಲಿ ಪಿಎಫ್ ಐ, ಎಸ್‌ಡಿಪಿಐ, ಭಜರಂಗದಳ, ಶ್ರೀರಾಮ ಸೇನೆ ಹಾಗೂ ಇತರ ಸಂಘಟನೆಗಳ ಮೇಲೆ ದಾಖಲಾಗಿದ್ದ ವಿವಿಧ ಜಿಲ್ಲೆಗಳ 2018 ರಿಂದ 2020ರ ಸುಮಾರು 127 ಪ್ರಕರಣಗಳನ್ನು ಹಿಂದಿನ ಬಿಜೆಪಿ ಸರ್ಕಾರವೇ ವಾಪಸ್ಸು ಪಡೆದಿರುತ್ತದೆ ಉತ್ತರ ಕನ್ನಡ ಜಿಲ್ಲೆಗೆ ಸೇರಿದ ಸುಮಾರು 45 ಕೋಮುದಳ್ಳುರಿಯ ಪ್ರಕರಣಗಳನ್ನು ಮಡಿಕೇರಿ ಜಿಲ್ಲೆ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೋಮುಸಂಘರ್ಷಗಳ ಪ್ರಕರಣಗಳನ್ನು ಬಿಜೆಪಿ ಸರ್ಕಾರವೇ ಹಿಂದಕ್ಕೆ ಪಡೆದಿರುತ್ತದೆ. ಸರ್ಕಾರಿ ಆಸ್ತಿಗೆ ನಷ್ಟ ಉಂಟು ಮಾಡಿದ ಅನೇಕ ಪ್ರಕರಣಗಳಲ್ಲಿ ಸಾರ್ವಜನಿಕ ಹಿತಾಸಕ್ತಿಯ ಹೆಸರಿನಲ್ಲಿ ನೂರಾರು ಪ್ರಕರಣಗಳನ್ನು ಹಿಂದಿನ ಬಿಜೆಪಿ ಸರ್ಕಾರ ವಾಪಸ್ಸು ಪಡೆದಿದ್ದು, ರಾಜಕೀಯ ಕಾರಣಗಳಿಗಾಗಿ ಜನರನ್ನು ಪ್ರಚೋದನೆ ಮಾಡುವ ಉದ್ದೇಶದಿಂದ ಬಿಜೆಪಿ, ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮೇಲೆ ನಿರಂತರವಾದ ಸುಳ್ಳು ಆರೋಪಗಳನ್ನು ಮಾಡುತ್ತಿದೆ” ಎಂದು ಕಿಡಿಕಾರಿದರು.

“ಉತ್ತರ ಕನ್ನಡ ಜಿಲ್ಲೆಯ ಪರೇಶ್ ಮೆಸ್ತಾ ಪ್ರಕರಣದಲ್ಲಿ ರಾಜಕೀಯ ಲಾಭಕ್ಕಾಗಿ ಹವಣಿಸಿದ್ದ ಬಿಜೆಪಿ, ದೊಡ್ಡ ಮಟ್ಟದ ಪ್ರತಿಭಟನೆಯನ್ನು ನಡೆಸಿ ಆತ್ಮಹತ್ಯೆಯನ್ನು ಕೊಲೆ ಎಂದು ಬಿಂಬಿಸುವ ಪ್ರಯತ್ನವನ್ನು ಮಾಡಿತ್ತು. ಅಂದಿನ ಕಾಂಗ್ರೆಸ್ ಸರ್ಕಾರ ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದ್ದು, ಸಿಬಿಐ ಪ್ರಕರಣದಲ್ಲಿ ಕೊಲೆ ಅಲ್ಲವೆಂದು ತನ್ನ ಅಂತಿಮ ವರದಿಯನ್ನು ನೀಡಿರುತ್ತದೆ. ಇಲ್ಲಿಯವರೆಗೆ ಈ ಪ್ರಕರಣದಲ್ಲಿ ಜನರಿಗೆ ತಪ್ಪು ಮಾಹಿತಿ ನೀಡಿದ ಬಿಜೆಪಿ ಸಾರ್ವಜನಿಕವಾಗಿ ಕ್ಷಮೆಯನ್ನು ಕೇಳಿರುವುದಿಲ್ಲ. ರಾಜಕೀಯವಾಗಿ ಜನರಿಗೆ ಪ್ರಚೋದನೆ ನೀಡಿದ ಬಿಜೆಪಿ ನಾಯಕರ ಕೇಸುಗಳನ್ನು ಬಿಜೆಪಿ ಸರ್ಕಾರ ಹಿಂದಕ್ಕೆ ಪಡೆದಿರುತ್ತದೆ” ಎಂದು ಹರಿಹಾಯ್ದಿದ್ದಾರೆ.

“ಹಿಂದಿನ ರಾಜ್ಯ ಬಿಜೆಪಿಯ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿರವರ ಸರ್ಕಾರ ಹಲವಾರು ಕ್ರಿಮಿನಲ್ ಪ್ರಕರಣಗಳನ್ನು ಸಂಪುಟ ಸಭೆಯ ತೀರ್ಮಾನದ ಮೂಲಕ ಹಿಂದಕ್ಕೆ ಪಡೆದಿರುತ್ತದೆ. ಆ ಪ್ರಕರಣಗಳಲ್ಲಿ ಪಿ. ಎಫ್.ಐ, ಎಸ್‌ಡಿಪಿಐ, ಭಜರಂಗದಳ, ಶ್ರೀರಾಮ ಸೇನೆ ಹಾಗೂ ಇತರ ಸಂಘಟನೆಗಳ ಪ್ರಕರಣಗಳು ಸೇರಿದ್ದು, ಪ್ರಮುಖವಾಗಿ ಕೋಮುವಾದಿ ಬಲಪಂಥೀಯ ಸಂಘಟನೆಗಳ ಕೇಸುಗಳನ್ನು ಹಿಂದಕ್ಕೆ ಪಡೆಯಲಾಗಿದೆ. ಇದು ಒಂದು ರಾಜ್ಯ ಸರ್ಕಾರದ ನಿರಂತರ ಕಾನೂನು ಪ್ರಕ್ರಿಯೆ ಎಂದು ಅಂದಿನ ಬಿಜೆಪಿ ಸರ್ಕಾರದ ಕಾನೂನು ಸಚಿವ ಮಾಧುಸ್ವಾಮಿರವರ ಹೇಳಿಕೆಯು ಸಾರ್ವಜನಿಕವಾಗಿ ದಾಖಲಾಗಿರುತ್ತದೆ. ರಾಜ್ಯ ಬಿಜೆಪಿ ರಾಜ್ಯದ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಲು ವಿಫಲವಾಗಿ ಇಂತಹ ವಿಷಯಗಳನ್ನು ಪ್ರಸ್ತಾಪಿಸುವ ಮೂಲಕ ತನ್ನ ದಿವಾಳಿತನವನ್ನು ಬಹಿರಂಗಗೊಳಿಸಿದೆ” ಎಂದು ಟೀಕಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...