ಸಂವಿಧಾನದ ಮೂಲಕ ಅಂಬೇಡ್ಕರ್ ವಾಕ್ ಸ್ವಾತಂತ್ರ್ಯ ಕೊಟ್ಟಿದ್ದಾರೆ. ಆದರೆ, ವಾಕ್ ಸ್ವಾತಂತ್ರ್ಯವನ್ನು ದುರ್ಬಳಕೆ ಮಾಡುವುದರಲ್ಲಿ ಬಿಜೆಪಿಯೇ ನಂಬರ್ ಒನ್ ಸ್ಥಾನದಲ್ಲಿದೆ. ಬಿಜೆಪಿಗರು ಎಲ್ಲಿ ಏನು ಬೇಕಾದರೂ ಮಾತನಾಡುತ್ತಾರೆ ಎಂದು ಬಿಜೆಪಿ ವಿರುದ್ಧ ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡೆಸಿದ್ದಾರೆ.
ಧಾರವಾಡದ ನವಲಗುಂದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎಲ್ಲದಕ್ಕೂ ಒಂದು ಮಿತಿ ಇರುತ್ತದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400 ಸ್ಥಾನಗಳನ್ನು ಗೆಲ್ಲುತ್ತದೆ ಎನ್ನುತ್ತಿದ್ದಾರೆ. ಎನ್‌ಡಿಎ ಈಗ 300 ಸ್ಥಾನ ಗೆಲ್ಲೋದಕ್ಕೂ ಆಗುಲ್ಲ. ಅವರು ಹೇಳಿದ್ದನ್ನೆಲ್ಲ ಮಾಧ್ಯಮಗಳು ತೋರಿಸುತ್ತವೆ. ನಾವು ಅವರಂತೆ ಮಾತನಾಡುವುದಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಕನಿಷ್ಠ 18 ಸ್ಥಾನ ಗೆಲ್ಲುತ್ತದೆ” ಎಂದು ಹೇಳಿದರು.
“ಚುನಾವಣೆಗೆ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರು ಪ್ರಕಟವಾಗುತ್ತದೆ. ಸಚಿವರಿಗೆ ಟಿಕೆಟ್ ನೀಡುವ ವಿಚಾರ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದು” ಎಂದರು.