ಬಿಜೆಪಿಗೆ ಕರ್ನಾಟಕದ ಅಸ್ಮಿತೆ ಬಗ್ಗೆ ಕಾಳಜಿ ಇಲ್ಲ : ಪ್ರಿಯಾಂಕ್‌ ಖರ್ಗೆ

Date:

  • ಬಿಜೆಪಿ ಕರ್ನಾಟಕವನ್ನು ಒಡೆಯುತ್ತಿದೆ
  • ಗೃಹ ಸಚಿವರ ಸಾಮರ್ಥ್ಯ ಪ್ರಶ್ನಿಸಿ ವ್ಯಂಗ್ಯ

ಬಿಜೆಪಿಯವರಿಗೆ ಕರ್ನಾಟಕದ ಅಸ್ಮಿತೆ ಬಗ್ಗೆ ಕಾಳಜಿ ಇಲ್ಲ. ರಾಜ್ಯದ ಇತಿಹಾಸ ಹಾಗೂ ಕರ್ನಾಟಕದ ಏಕೀಕರಣಕ್ಕೆ ಅವರ ಕೊಡುಗೆಯೇ ಇಲ್ಲ ಎಂದು ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಬಿಜೆಪಿ ಕರ್ನಾಟಕವನ್ನು ಒಡೆಯುತ್ತದೆ. ಅವರಿಗೆ ಕರ್ನಾಟಕದ ಅಸ್ಮಿತೆ ಬಗ್ಗೆ ಕಾಳಜಿ ಇಲ್ಲ. ರಾಜ್ಯದ ಇತಿಹಾಸ ಹಾಗೂ ಕರ್ನಾಟಕದ ಏಕೀಕರಣಕ್ಕೆ ಅವರ ಕೊಡುಗೆಯೇ ಇಲ್ಲ. ಹೀಗಿರುವಾಗ ಅವರಿಗೆ ಕನ್ನಡದ ವಿಚಾರವಾಗಿ ಪ್ರೀತಿ ಹುಟ್ಟಲು ಹೇಗೆ ಸಾಧ್ಯ” ಎಂದು ವ್ಯಂಗ್ಯವಾಡಿದ್ದಾರೆ.

“ಬಿಜೆಪಿಯವರು ಪದೇ ಪದೆ ಕನ್ನಡಿಗರಿಗೆ ಅಪಮಾನ ಮಾಡುತ್ತಿದ್ದಾರೆ. ರಾಯಚೂರು ಶಾಸಕ ಶಿವರಾಜ್ ಪಾಟೀಲ್ ಅವರು ರಾಯಚೂರಿನ ಉಸ್ತುವಾರಿ ಆಗಿದ್ದ ಪ್ರಭು ಚವ್ಹಾಣ್ ಅವರನ್ನು ಪಕ್ಕದಲ್ಲಿ ಕೂರಿಸಿಕೊಂಡು ಈ ಸರ್ಕಾರದಲ್ಲಿ ಹಣ ಸಿಗುತ್ತಿಲ್ಲ. ಹೀಗಾಗಿ ಆಂಧ್ರ ಪ್ರದೇಶಕ್ಕೆ ರಾಯಚೂರು ಸೇರಿಸಿ ಎಂದಿದ್ದರು. ಸಚಿವರು ಇದನ್ನು ಗಂಭೀರವಾಗಿ ಪರಿಗಣಿಸದೇ ನಗುತ್ತಾರೆ” ಎಂದು ಹೇಳಿದ್ದಾರೆ.

“ಶಾಸಕ ಮತ್ತುಸಚಿವರಿಗೆ ಈ ಬಿಜೆಪಿ ಒಂದು ನೋಟಿಸ್ ಕೂಡ ಕೊಟ್ಟಿಲ್ಲ. ಇನ್ನು ಸಚಿವ ಆನಂದ್ ಸಿಂಗ್ ಅವರು ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಪ್ರತ್ಯೇಕ ರಾಜ್ಯ ಮಾಡಬೇಕು ಎಂದಿದ್ದರು. ಆಗಲೂ ಬಿಜೆಪಿ ಒಂದು ಮಾತನ್ನೂ ಆಡಲಿಲ್ಲ. ಈ ಮಾತು ಆಡಿರುವುದು ಶಾಸಕರು ಹಾಗೂ ಸಚಿವರು. ಈ ಬಗ್ಗೆ ಬಿಜೆಪಿ ಸರ್ಕಾರ ಸ್ಪಷ್ಟ ನಿಲುವು ತಾಳಬೇಕಿತ್ತು” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ವೈಎಸ್‌ವಿ ದತ್ತಗೆ ತಪ್ಪಿದ ಕಾಂಗ್ರೆಸ್ ಟಿಕೆಟ್: ಅಭಿಮಾನಿಗಳಿಗೆ ಪತ್ರದ ಮೂಲಕ ಸಭೆಗೆ ಆಹ್ವಾನ

“ಈಗ ಮಹಾರಾಷ್ಟ್ರ ಮತ್ತೆ ತಗಾದೆ ತೆಗೆದಿದೆ. ಮೋದಿ ಹಾಗೂ ಅಮಿತ್ ಶಾ ಅವರು ರಾಜ್ಯಕ್ಕೆ ಬಂದಾಗ ಅನೇಕ ವಿಚಾರ ಮಾತನಾಡುತ್ತಾರೆ. ನನ್ನ ಸಮಾಧಿ ತೋಡಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳುತ್ತಾರೆ. ಪ್ರಧಾನಿ ವಿರುದ್ಧ ಸಂಚು ಮಾಡುತ್ತಿರುವುದು ಯಾರು? ಗೃಹ ಸಚಿವರು ಅಷ್ಟು ಅಸಮರ್ಥರೇ?” ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

“ಪ್ರಧಾನಿಗಳು ವೈಯಕ್ತಿಕ ವಿಚಾರ ಮಾತನಾಡುತ್ತಾರೆ. ಆದರೆ ಕರ್ನಾಟಕದ ಬಗ್ಗೆ ಮಾತನಾಡುವುದಿಲ್ಲ. ಅವರು ರಾಜ್ಯಕ್ಕೆ ಬಂದಾಗ ಮಹಾರಾಷ್ಟ್ರ ತಗಾದೆ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ರಾಜ್ಯ ಹಾಗೂ ಕೇಂದ್ರ ಬಿಜೆಪಿ ನಾಯಕರು ಬಾಯಿಗೆ ಬೀಗ ಹಾಕಿಕೊಂಡಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಅಭಿವೃದ್ಧಿಯ ಕುರಿತು ಮಾತನಾಡದೆ ಲವ್ ಜಿಹಾದ್ ಬಗ್ಗೆ ಮಾತನಾಡಿ ಎನ್ನುವ ನಳಿನ್ ಕುಮಾರ್ ಕಟೀಲ್‌ ಹೇಳಿಕೆ ಉಲ್ಲೇಖಿಸಿದ ಪ್ರಿಯಾಂಕ್ ಖರ್ಗೆ, “ಬಿಜೆಪಿ ಚುನಾವಣೆಯನ್ನು ಯಾವ ದಿಕ್ಕಿನೆಡೆಗೆ ತೆಗೆದುಕೊಂಡು ಹೋಗಬೇಕು ಎಂದು ಹೇಳುತ್ತಿದ್ದಾರೆ” ಎಂದು ಹರಿಹಾಯ್ದಿದ್ದಾರೆ.

“ಬಿಜೆಪಿಯವರು ಹತಾಶರಾಗಿ ಈ ಹೇಳಿಕೆ ನೀಡುತ್ತಿದ್ದು, ಪ್ರಮುಖ ವಿಚಾರ ಮುಚ್ಚಿ ಹಾಕಲು ಈ ಯತ್ನ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಿಂಚಣಿದಾರರ ಮನೆ ಬಾಗಿಲಿನಲ್ಲಿ ಡಿಜಿಟಲ್ ಲೈಫ್ ಪ್ರಮಾಣಪತ್ರ ಸಲ್ಲಿಸಲು ವ್ಯವಸ್ಥೆ

ಪಿಂಚಣಿದಾರರು ವೈಯಕ್ತಿಕವಾಗಿ ಜೀವನ ಪ್ರಮಾಣಪತ್ರವನ್ನು ಸಲ್ಲಿಸುವ ಸಮಯದಲ್ಲಿ ಎದುರಿಸುತ್ತಿರುವ ತೊಂದರೆಗಳನ್ನು ತಪ್ಪಿಸುವ...

ತಹಶೀಲ್ದಾರ್ ಅಜಿತ್ ಕುಮಾರ್ ರೈ ಅನ್ನು ನ್ಯಾಯಾಲಯ ವಿಚಾರಣೆಗೆ ಒಳಪಡಿಸಲು ಆದೇಶ

ಅರಣ್ಯ ಜಮೀನನ್ನು ಕಂದಾಯ ಜಮೀನನ್ನಾಗಿ ಪರಿವರ್ತಿಸಿರುವ ಆರೋಪ ಅನುಕಂಪದಲ್ಲಿ ಸರ್ಕಾರಿ...

ಬೆಂಗಳೂರು ಟೆಕ್ ಸಮ್ಮಿಟ್ 2023 | ಜೈವಿಕ ತಂತ್ರಜ್ಞಾನ ಕಾರ್ಯನೀತಿಯ ಪರಿಷ್ಕೃತ ಕರಡು ಬಿಡುಗಡೆ

ಬೆಂಗಳೂರು ಅರಮನೆಯಲ್ಲಿ 'ಬ್ರೇಕಿಂಗ್ ದಿ ಬೌಂಡರೀಸ್' ಘೋಷವಾಕ್ಯದ 26ನೇ ‘ಬೆಂಗಳೂರು ತಂತ್ರಜ್ಞಾನ...

ಕಾಗಿನೆಲೆ ಪೀಠ ಒಂದು ಜಾತಿಯ ನೆಲೆ ಅಲ್ಲ, ಎಲ್ಲ ಶೋಷಿತ ಜಾತಿ-ಸಮುದಾಯಗಳ ನೆಲೆ: ಸಿದ್ದರಾಮಯ್ಯ

ಕನಕದಾಸರು ಜಾತಿ‌, ಅನಕ್ಷರತೆಯ ಅಸಮಾನತೆ ಹೋಗಲಾಡಿಸಲು ಹೋರಾಡಿದರು ಯಾವ ಧರ್ಮವೂ...