ಬಿಜೆಪಿಯವರನ್ನು ಕೇಳಿಕೊಂಡು ಕಾನೂನು ಪಾಲನೆ ಮಾಡುತ್ತಿಲ್ಲ, ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಿಲ್ಲ: ಪರಮೇಶ್ವರ್‌ ಸ್ಪಷ್ಟನೆ

Date:

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಬಿಜೆಪಿಯವರನ್ನು ಕೇಳಿಕೊಂಡು ಕಾನೂನು ಪಾಲನೆ ಮಾಡುತ್ತಿಲ್ಲ. ಕಾನೂನು, ಸುವ್ಯವಸ್ಥೆ ಹಾಳು ಮಾಡಲು ಬಿಜೆಪಿಯವರು ಎಷ್ಟೇ ಪ್ರಯತ್ನ ಮಾಡಿದರೂ ಅದನ್ನು ನಿಯಂತ್ರಿಸುವ ಶಕ್ತಿ ಸರ್ಕಾರಕ್ಕಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿರುಗೇಟು ನೀಡಿದರು.

- Advertisement -

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಪೊಲೀಸ್‌ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ಕೊಟ್ಟಿರುವ ಬಗ್ಗೆ ತುಮಕೂರಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿಲ್ಲ. ಎಲ್ಲವನ್ನೂ ನಿಯಂತ್ರಣದಲ್ಲೇ ಇದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

“ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ (ಎನ್‌ಸಿಆರ್‌ಬಿ) ಬಿಡುಗಡೆ ಮಾಡಿರುವ ವರದಿ ಗಮನಕ್ಕೆ ಬಂದಿದೆ. ಈ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಲಾಗುವುದು. ಜನರ ಸುರಕ್ಷತೆಗಾಗಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರ ಸಿದ್ಧ” ಎಂದು ಹೇಳಿದರು.

“ನಾಲ್ಕು ತಿಂಗಳ ವರದಿ ಇಟ್ಟುಕೊಂಡು ವಿಶ್ಲೇಷಣೆ ಮಾಡಲಾಗದು. ಒಂದೊಂದು ಘಟನೆಗೂ ಪ್ರತ್ಯೇಕ ಕಾರಣಗಳು ಇರುತ್ತವೆ. ಬಿಜೆಪಿಯವರ ಆಡಳಿತದಲ್ಲಿ ಎಷ್ಟು ಕೊಲೆಗಳು ನಡೆದಿದ್ದವು. ನಮ್ಮ ಸರ್ಕಾರದ ಅವಧಿಯಲ್ಲಿ ಎಷ್ಟು ನಡೆದಿವೆ ಎಂಬ ಅಂಕಿ ಸಂಖ್ಯೆ ಬಿಡುಗಡೆ ಮಾಡುತ್ತೇವೆ. ನಾವು ಬಿಡುಗಡೆ ಮಾಡುವ ವರದಿಯಿಂದ ಯಾರ ಅವಧಿಯಲ್ಲಿ ಹೆಚ್ಚು ಕೊಲೆಗಳು ನಡೆದಿದ್ದವು ಎಂಬುದು ರಾಜ್ಯದ ಜನರಿಗೆ ಗೊತ್ತಾಗಲಿದೆ” ಎಂದು ತಿಳಿಸಿದರು.

ವಕೀಲ ದೇವರಾಜೇಗೌಡನಿಗೆ ₹100 ಕೋಟಿ ಆಮಿಷ ಒಡ್ಡಿರುವ ಬಗ್ಗೆ ಸಚಿವರು ಪ್ರತಿಕ್ರಿಯಿಸಿ, “ದೇವರಾಜೇಗೌಡನ ಹೇಳಿಕೆಯನ್ನು ಎಸ್ಐಟಿ ಅಧಿಕಾರಿಗಳು ನೋಡಿಕೊಳ್ಳುತ್ತಾರೆ. ನಾನು ಹೊರಗೆ ಬಂದರೆ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ‌ ಎಂದರೆ ಅವರು ಜೈಲಿನಲ್ಲೇ ಇರಬೇಕಾಗುತ್ತದೆ” ಎಂದು ಎಚ್ಚರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ ‘ಮಹಾಭಿಯೋಗ’ ನಡೆದಿದೆಯೇ?

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ...

ಸೌಜನ್ಯ ಪ್ರಕರಣ ಮರುತನಿಖೆ | SIT ಪುನರ್‌ ರಚಿಸುವಂತೆ ಕೊಂದವರು ಯಾರು? ಆಂದೋಲನ ಒತ್ತಾಯ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ...

ರಾಜ್ಯದಲ್ಲಿ ಮಿತಿಮೀರಿದ ದಲಿತರ ಮೇಲಿನ ದೌರ್ಜನ್ಯ: ಕಾನೂನು ಸುವ್ಯವಸ್ಥೆ ವೈಫಲ್ಯದ ವಿರುದ್ಧ ಮುಖಂಡರ ಗುಡುಗು

ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಿಂದ ದಲಿತರ ಮೇಲಿನ ಹಲ್ಲೆ, ದೌರ್ಜನ್ಯ, ಮಹಿಳೆಯರ...

ಪ್ರಧಾನಿಗಳು ರೈತರ ಆದಾಯ ಡಬಲ್ ಮಾಡಲಿಲ್ಲ; ಯುದ್ಧ ನಡೆಯುತ್ತಿದ್ದಾಗಲೂ ರೈತರು ವಿಶ್ರಾಂತಿ ಪಡೆಯಲಿಲ್ಲ-ಸಿಎಂ

ಪ್ರಧಾನಿ ದೇಶವನ್ನು, ಮುಖ್ಯಮಂತ್ರಿ ರಾಜ್ಯವನ್ನು ಹಾಗೂ ಶಾಸಕರು ಕ್ಷೇತ್ರವನ್ನು ಪ್ರತಿನಿಧಿಸಿದರೆ, ರೈತ...