ಬಿಜೆಪಿ ನಾಯಕರಲ್ಲೇ ಒಗ್ಗಟ್ಟಿಲ್ಲ, ಹಾಗಾಗಿ ವಿಪಕ್ಷ ನಾಯಕನ ಆಯ್ಕೆ ಆಗಿಲ್ಲ : ಎಚ್ ಡಿ ದೇವೇಗೌಡ

Date:

  • “ಇಷ್ಟು ವರ್ಷ ರಾಜಕೀಯ ಮಾಡಿಯೂ ಸಣ್ಣ ಕಾಮನ್‌ಸೆನ್ಸ್‌ ಕೂಡ ಈ ಬಿಜೆಪಿಯವರಿಗಿಲ್ಲ”
  • ‘ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆ’ ಎಷ್ಟು ತಿಂಗಳು, ಹೇಗೆ ನಡೆಯುತ್ತದೆ ನೋಡೋಣ ಎಂದ ಮಾಜಿ ಪ್ರಧಾನಿ

ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಟಿ.ರವಿ, ವಿಪಕ್ಷ ನಾಯಕ ಸ್ಥಾನಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ರನ್ನು ಆಯ್ಕೆ ಬಹುತೇಕ ತೀರ್ಮಾನವಾಗಿದೆ ಎಂದು ಕಳೆದ ಜುಲೈನಲ್ಲಿ ಅಚ್ಚರಿಯ ಹೇಳಿಕೆ ನೀಡಿದ್ದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, “ಬಿಜೆಪಿ ನಾಯಕರಲ್ಲೇ ಒಗ್ಗಟ್ಟಿಲ್ಲ. ಹಾಗಾಗಿ ವಿರೋಧ ಪಕ್ಷದ ನಾಯಕನ ಆಯ್ಕೆ ಆಗಿಲ್ಲ” ಎಂದು ಈಗ ಮತ್ತೊಂದು ಹೇಳಿಕೆ ನೀಡಿದ್ದಾರೆ.

- Advertisement -

ಹಾಸನದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ವೇಳೆ ಬಿಜೆಪಿ-ಜೆಡಿಎಸ್ ಮೈತ್ರಿಯ ಕುರಿತು ಪತ್ರಕರ್ತರೋರ್ವರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಿದ್ದ ವೇಳೆ ಈ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

“ಬಿಜೆಪಿ ನಾಯಕರ ನಡುವೆಯೇ ಒಗ್ಗಟ್ಟಿಲ್ಲ. ಹಾಗಾಗಿ, ಅವರ ರಾಜ್ಯಾಧ್ಯಕ್ಷ ಯಾರು ಅಂತ ಅವರಿಗೇ ಗೊತ್ತಿಲ್ಲ, ಈವರೆಗೂ ವಿರೋಧ ಪಕ್ಷದ ನಾಯಕನ ಆಯ್ಕೆ ಆಗಿಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿಯ ಕುರಿತು ಒಂದು ವೇಳೆ ಚರ್ಚೆ ನಡೆಸಿ, ಮಾತುಕತೆ ಮಾಡುವುದಾದರೆ ಯಾರ ಜೊತೆಗೆ ಮಾಡಬೇಕು? ಎಂದು ಕೇಳಿದ ಮಾಜಿ ಪ್ರಧಾನಿ, “ಇಷ್ಟು ವರ್ಷ ರಾಜಕೀಯ ಮಾಡಿಯೂ ಸಣ್ಣ ಕಾಮನ್‌ಸೆನ್ಸ್‌ ಕೂಡ ಈ ಬಿಜೆಪಿಯವರಿಗಿಲ್ಲ” ಎಂದು ನೇರವಾಗಿಯೇ ಹೇಳಿದರು.

WhatsApp Image 2023 09 03 at 8.09.24 PM

“ಚಾಮುಂಡೇಶ್ವರಿ ಕೂಡ ಹೆಣ್ಣು ದೇವತೆ. ಹಾಗಾಗಿ ತಾಯಿ ಒಳ್ಳೆಯದು ಮಾಡು ಎಂದು ಸಿಎಂ ಸಿದ್ದರಾಮಯ್ಯ ಅವರು ಗೃಹಲಕ್ಷ್ಮಿ ಯೋಜನೆಯ 2 ಸಾವಿರ ರೂ. ದುಡ್ಡು ಕೊಟ್ಟಿದ್ದಾರೆ. ಆ ಗ್ಯಾರಂಟಿ ಎಷ್ಟು ತಿಂಗಳು, ಹೇಗೆ ನಡೆಯುತ್ತದೆ ನೋಡೋಣ. ಮೂರ್ನಾಲ್ಕು ತಿಂಗಳು ಕಾಯೋಣ. ಆಮೇಲೆ ಗೊತ್ತಾಗಬಹುದು” ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಇದೇ ವೇಳೆ ಗೃಹಲಕ್ಷ್ಮಿ ಯೋಜನೆ ಮುಂದುವರಿಯುವ ಬಗ್ಗೆ ಅನುಮಾನ ವ್ಯಕ್ತಪಡಿಸಿದರು.

ಜೆಡಿಎಸ್ ಪಕ್ಷ ಸಂಘಟನೆಯ ಕುರಿತು ಮಾತನಾಡಿದ ದೇವೇಗೌಡ, “ಈಗಾಗಲೇ ಜಿಟಿ ದೇವೇಗೌಡ ನೇತೃತ್ವದಲ್ಲಿ‌ ಕೋರ್ ಕಮಿಟಿ ರಚಿಸಲಾಗಿದೆ. ಕೋರ್​ ಕಮಿಟಿಯ 13 ಸದಸ್ಯರು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಕಾರ್ಯಕರ್ತರು ನಮ್ಮ ಪಕ್ಷ ಬಿಟ್ಟುಹೋಗಲು ಅವಕಾಶ ನೀಡಲ್ಲ. ಜೆಡಿಎಸ್​ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ಮೂಡಿಸುತ್ತಿದ್ದೇವೆ. ನನ್ನ ಶಕ್ತಿಯನ್ನು ಪಕ್ಷಕ್ಕಾಗಿ ಧಾರೆ ಎರೆಯುತ್ತೇನೆ” ಎಂದರು.

“ಕಳೆದ ಮೂರು ತಿಂಗಳಿನಿಂದ ಬಿಜೆಪಿಯವರು ಮಾಡಿರುವ ಎಲ್ಲ ಅಕ್ರಮಗಳ ಬಗ್ಗೆ ತನಿಖೆ ಮಾಡುತ್ತೇವೆ ಎಂದು ಕಾಂಗ್ರೆಸ್‌ನವರು ದಿನಾ ತಮಟೆ ಹೊಡೆಯುತ್ತಿದ್ದಾರೆ. ಅವರನ್ನು ತನಿಖೆ ಮಾಡಬೇಡಿ ಎಂದು ಹಿಡಿದುಕೊಂಡಿರುವವರು ಯಾರು? ಬಿಟ್ ಕಾಯಿನ್ ಬಗ್ಗೆಯೂ ತನಿಖೆ ನಡೆಸಲಿ” ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಗುಡುಗಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಝುಬಿನ್ ಗರ್ಗ್‌ಗೆ ನ್ಯಾಯಕ್ಕಾಗಿ ಆಗ್ರಹ: ನೂರಕ್ಕೂ ಹೆಚ್ಚು ಪ್ರತಿಭಟನಾಕಾರರು ಅಸ್ಸಾಂ ಪೊಲೀಸ್ ವಶಕ್ಕೆ

ಅಸ್ಸಾಂನ ಪ್ರಸಿದ್ಧ ಸಾಂಸ್ಕೃತಿಕ ಪ್ರತಿಭೆ, ಗಾಯಕ ಝುಬಿನ್ ಗರ್ಗ್ ಅವರ ಸಾವಿಗೆ...

ಯುಪಿ ಚುನಾವಣೆ | ಎಸ್‌ಪಿ ಜೊತೆ ಸೀಟು ಹಂಚಿಕೆಗೆ ಕಾಂಗ್ರೆಸ್ ಸಿದ್ಧತೆ; 125 ಸ್ಥಾನಗಳಿಗೆ ಪ್ರಿಯಾಂಕಾ ಪಡೆ ಬೇಡಿಕೆ!

ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜಕೀಯ ಚಟುವಟಿಕೆಗಳು ಗರಿಗೆದರಿವೆ....

ಉತ್ತರ ಕನ್ನಡ: ಹಾಲಕ್ಕಿಗಳ ಹಾಡು-ಪಾಡು ಮತ್ತು ಮರೀಚಿಕೆಯಾದ ಮೀಸಲಾತಿ

ಹಾಲಕ್ಕಿಗಳಿಗೆ ಪರಿಶಿಷ್ಟ ಪಂಗಡ ಮೀಸಲಾತಿ ಮರೀಚಿಕೆ ಆಗುತ್ತಿದೆ. ಮೀಲಾತಿ ಕೊಡಿಸುವ ಬಣ್ಣ-ಬಣ್ಣದ...

ರಸ್ತೆ ತಡೆದು ಪೂಜಾ ಪೆಂಡಾಲ್ ಹಾಕುವಂತಿಲ್ಲ: ಒಡಿಶಾ ಹೈಕೋರ್ಟ್ ಆದೇಶ

ಸಾರ್ವಜನಿಕ ರಸ್ತೆಗಳಲ್ಲಿ ಹಬ್ಬದ ಪೂಜಾ ಪೆಂಡಾಲ್‌ಗಳ ನಿರ್ಮಾಣ ಮತ್ತು ರಸ್ತೆ ಬಂದ್...