ಅಕ್ಕಿ ಕೊಡದಿರುವ ನೀಚ ಬುದ್ಧಿ ನಮಗಿಲ್ಲ: ಡಿ ವಿ ಸದಾಂದಗೌಡ ತಿರುಗೇಟು

Date:

  • ಸೋಲಿನ ನೋವಿನಿಂದ ವಿ ಸೋಮಣ್ಣ ಇನ್ನೂ ಹೊರಬಂದಿಲ್ಲ
  • ಸಿಎಂ, ಡಿಸಿಎಂಗೆ ಸವಾಲೊಡ್ಡುವ ವಿಪಕ್ಷ ನಾಯಕನ ನೇಮಕ

ಅಕ್ಕಿ ಕೊಡದಿರುವ ನೀಚ ಬುದ್ಧಿ ನಮಗಿಲ್ಲ, ಆ ರೀತಿ ಚೀಪ್ ಪಾಲಿಟಿಕ್ಸ್‌ನ್ನು ನಮ್ಮ ಮುಖಂಡರು, ಕಾರ್ಯಕರ್ತರು ಮಾಡುವುದಿಲ್ಲ. ಕರ್ನಾಟಕದ ಪ್ರತಿಯೊಬ್ಬರಿಗೂ ಅಕ್ಕಿ ಸಿಗಬೇಕೆಂಬುದು ನಾಯಕರ, ಕಾರ್ಯಕರ್ತರ ಆಶಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದಗೌಡ ತಿರುಗೇಟು ನೀಡಿದರು.

- Advertisement -

ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನನಗೆ ಬಿಜೆಪಿ ಸೋತಿದ್ದಕ್ಕೆ ಬೇಜಾರಿಲ್ಲ. ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು ಹೆಚ್ಚು ಬೇಸರವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕರ್ನಾಟಕದ ದುರ್ದೈವದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಎಂತೆಂತಹ ಮಂತ್ರಿಗಳಿದ್ದಾರೆ, ಸರ್ವರ್‌ನ್ನು ಕೇಂದ್ರ ಸರ್ಕಾರ ಹ್ಯಾಕ್ ಮಾಡಿದೆ ಎನ್ನುತ್ತಾರೆ ಕಾಂಗ್ರೆಸ್‌ ವಿರುದ್ಧ ಲೇವಡಿ ಮಾಡಿದರು.

ಕುಣಿಯಲಾರದವ ನೆಲ ಡೊಂಕು ಎಂದ ರೀತಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನವರು ಕೇಂದ್ರ ಸರ್ಕಾರ ಅಕ್ಕಿ ಕೊಟ್ಟಿಲ್ಲ ಎನ್ನುತ್ತಿದ್ದಾರೆ‌. ಘೋಷಣೆಗೂ ಮುನ್ನ ಕಾಂಗ್ರೆಸ್ ನವರಿಗೆ ಪರಿಜ್ಞಾನ ಇರಲಿಲ್ಲವೇ? ಮುಂದೆ ಯಾವ ರೀತಿ ತೊಂದರೆ ಉಂಟಾಗಬಹುದು ಎಂಬ ಚಿಂತನೆ ಇರಲಿಲ್ಲವೇ? 13 ಬಾರಿ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯಗೆ ಮುಂದಾಲೋಚನೆ ಇರಬೇಕಿತ್ತು ಎಂದು ಕಿಡಿಕಾರಿದರು.

ಸಿಎಂ, ಡಿಸಿಎಂಗೆ ಸವಾಲೊಡ್ಡುವ ವಿಪಕ್ಷ ನಾಯಕನ ನೇಮಕ

ವಿಪಕ್ಷ ನಾಯಕನನ್ನು ನೇಮಕ ಮಾಡುವುದು ನಮ್ಮ ಧರ್ಮ, ಅಧಿವೇಶನ ಆರಂಭಗೊಳ್ಳುವ ಮುನ್ನ ವಿಪಕ್ಷ ನಾಯಕನನ್ನು ನೇಮಕ ಮಾಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಜುಗಲ್ಬಂದಿಗೆ ಸವಾಲೊಡ್ಡುವ ನಾಯಕನನ್ನು ನೇಮಕ ಮಾಡಲಾಗುವುದು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಈ ಸುದ್ದಿ ಓದಿದ್ದೀರಾ? ಹ್ಯಾಕ್ ವಿಚಾರ | ಕಾಂಗ್ರೆಸ್‌ನವರು ಹುಚ್ಚುಚ್ಚು ಹೇಳಿಕೆ ನೀಡುತ್ತಿದ್ದಾರೆ: ಸಿ.ಟಿ ರವಿ

ಇದೇ ವೇಳೆ ಕೆಲವರು ಹೊಂದಾಣಿಕೆ ರಾಜಕಾರಣ ಮಾಡುತ್ತಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ನಮ್ಮ ಪಕ್ಷದಲ್ಲಿ ಹೊಂದಾಣಿಕೆ ರಾಜಕಾರಣ ಯಾರೂ ಮಾಡುವುದಿಲ್ಲ. ಆ ರೀತಿ ರಾಜಕಾರಣ ಮಾಡಿದ್ದರೆ ಹಲವು ಕ್ಷೇತ್ರಗಳಲ್ಲಿ ಗೆಲ್ಲಬಹುದಿತ್ತು. ಆದರೆ, ನಾವು ಸೋತರೂ ಪರವಾಗಿಲ್ಲ, ಹೊಂದಾಣಿಕೆ ರಾಜಕಾರಣ ಮಾಡುವುದಿಲ್ಲ ಎಂಬುದು ಮುಖಂಡರು ಮತ್ತು ಪಕ್ಷದ ನಿಲುವಾಗಿದೆ ಎಂದು ಸ್ಪಷ್ಟನೆ ನೀಡಿದರು.

ಇನ್ನು, ಸೋಲಿನ ಪರಾಮರ್ಶೆಯ ಕಾರ್ಯಕರ್ತರ ಸಭೆಗೆ ಮಾಜಿ ಸಚಿವ ವಿ ಸೋಮಣ್ಣ ಗೈರಾಗಿದ್ದರ ಸಂಬಂಧ ಪ್ರತಿಕ್ರಿಯಿಸಿ, ಸೋಮಣ್ಣ ತಾನು ಬರುವುದಿಲ್ಲ ಎಂದು ಹೇಳಿದರು. ಸೋಲಿನ ನೋವಿನಿಂದ ಅವರಿನ್ನೂ ಹೊರಬಂದಿಲ್ಲ. ಆದರೆ, ಅವರಿಗೆ ಯಾರಾ ಮೇಲೂ ಕೋಪ ಇಲ್ಲ ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...