ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್‌ಗೆ ಅನುಕೂಲ; 20 ಸ್ಥಾನ ಗೆಲ್ತೇವೆ: ಸಿಎಂ ಸಿದ್ದರಾಮಯ್ಯ

Date:

ನುಡಿದಂತೆ ನಡೆದಿರುವ ಕಾಂಗ್ರೆಸ್‌, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ. ಜೊತೆಗೆ, ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದಲೂ ಕಾಂಗ್ರೆಸ್‌ಗೆ ಅನುಕೂಲವಾಗಲಿದೆ. ರಾಜ್ಯದಲ್ಲಿ ಕಾಂಗ್ರೆಸ್‌ 20 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಜ್ಯದ ಉಳಿದ 4 ಕ್ಷೇತ್ರಗಳಿಗೆ ಶೀಘ್ರದಲ್ಲೇ ಅಭ್ಯರ್ಥಿಗಳನ್ನು ಘೋಷಿಸಲಾಗುತ್ತದೆ. ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಯಾವುದೇ ಕಗ್ಗಂಟಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ನಾವು ಬಿಜೆಪಿಗರಂತೆ ಎಲ್ಲ 28 ಕ್ಷೇತ್ರಗಳನ್ನೂ ಗೆಲ್ತೀವಿ ಅಂತ ಸುಳ್ಳು ಹೇಳಲ್ಲ” ಎಂದಿದ್ದಾರೆ.

ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ನೆರವಿಗೆ ಬರಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, “ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಜನರಿಗೆ ನೀಡಿದ ಭರವಸೆಗಳನ್ನು ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೊಳಿಸಲಾಗಿದೆ. ಗ್ಯಾರಂಟಿಗಳಿಗೆ ಈ ವರ್ಷ 36,000 ಕೋಟಿ ರೂ. ಹಾಗೂ ಮುಂದಿನ ವರ್ಷ 52,009 ಕೋಟಿ ರೂ.ಗಳನ್ನು ವೆಚ್ಚ ಮಾಡಲಿದ್ದೇವೆ. ಬಿಜೆಪಿಯವರಂತೆ ಸುಳ್ಳು ಹೇಳದೇ, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕಾಂಗ್ರೆಸ್ ರಾಜ್ಯದಲ್ಲಿ ಮಾಡಿರುವ ಸಾಧನೆಗಳ ಆಧಾರದ ಮೇಲೆ ಚುನಾವಣೆಯನ್ನು ಎದುರಿಸಲಿದೆ. ಜನತೆ ವಿಧಾನಸಭಾ ಚುನಾವಣೆಯಂತೆ ನಮ್ಮ ಪಕ್ಷದ ಕೈ ಹಿಡಿಯಲಿದ್ದಾರೆ” ಎಂದಿದ್ದಾರೆ.

“2018ರಲ್ಲಿ ಬಿಜೆಪಿಗರು ನೀಡಿದ 600 ಭರವಸೆಗಳಲ್ಲಿ ಶೇ.10 ರಷ್ಟನ್ನೂ ಈಡೇರಿಸಲಿಲ್ಲ. ಪ್ರಧಾನಿ ಮೋದಿಯವರೂ ಕೂಡ ಜನರ ಖಾತೆಗಳಿಗೆ 15 ಲಕ್ಷ ರೂ. ಹಾಕಲಿಲ್ಲ. 20 ಕೋಟಿ ಉದ್ಯೋಗವನ್ನೂ ಸೃಷ್ಟಿಸಲಿಲ್ಲ. ರೈತರ ಆದಾಯ ದ್ವಿಗುಣಗೊಳಿಸುವ ಯಾವುದೇ ಭರವಸೆಗಳನ್ನು ಈಡೇರಿಸಲಿಲ್ಲ. ಅಚ್ಛೇ ದಿನ್ ತರುವ ಭರವಸೆಯನ್ನು ಹುಸಿಗೊಳಿಸಿದ ಮೋದಿಯವರನ್ನು ಜನರು ಯಾಕೆ ನಂಬುತ್ತಾರೆ” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರ ಪರಿಹಾರ | ಮನಮೋಹನ್ ಸಿಂಗ್ ಸರ್ಕಾರ ಎಷ್ಟು ಪರಿಹಾರ ನೀಡಿದೆ ಎಂದು ಲೆಕ್ಕ ಕೊಡಿ: ಆರ್. ಅಶೋಕ್

"ಬರಗಾಲದಿಂದ ಬಳಲಿದ ರಾಜ್ಯದ ಜನತೆಗೆ 3,454 ಕೋಟಿ ರೂ. ಪರಿಹಾರವನ್ನು ಪ್ರಧಾನಿ...

ಬರ ಪರಿಹಾರ | ಬಾಕಿ ಹಣ ಬಿಡುಗಡೆಯಾಗುವವರೆಗೆ ಕಾನೂನು ಹೋರಾಟ ನಿಲ್ಲಲ್ಲ : ಕೃಷ್ಣ ಬೈರೇಗೌಡ

ಎನ್‌ಡಿಆರ್‌ಎಫ್ ಮಾನದಂಡಗಳ ಪ್ರಕಾರ ರಾಜ್ಯಕ್ಕೆ ರೂ.18,172 ಕೋಟಿ ಬರ ಪರಿಹಾರ ಬಿಡುಗಡೆಯಾಗಬೇಕಿತ್ತು....

ಲೋಕಸಭೆ ಚುನಾವಣೆ | ಇನ್ನುಳಿದ ಹಂತಗಳಲ್ಲಿ ಬಿಜೆಪಿ ಸ್ಥಿತಿ ಮತ್ತಷ್ಟು ಹದಗೆಡಲಿದೆ: ಅಖಿಲೇಶ್ ಯಾದವ್

ಲೋಕಸಭೆ ಚುನಾವಣೆಯ ಉಳಿದ ಹಂತಗಳಲ್ಲಿ ಬಿಜೆಪಿಯ ಸ್ಥಿತಿ ಇನ್ನಷ್ಟು ಹದಗೆಡಲಿದೆ ಎಂದು...

14 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ನಿಂದ ಹೆಚ್ಚುವರಿ ಉಸ್ತುವಾರಿ ಸಚಿವರ ನೇಮಕ

ಕರ್ನಾಟಕದ ಎರಡನೇ ಹಂತದ ಚುನಾವಣೆ ನಡೆಯುವ ಲೋಕಸಭಾ ಕ್ಷೇತ್ರಗಳಿಗೆ ಸಚಿವರನ್ನು ಹೆಚ್ಚುವರಿ...