“ನರೇಂದ್ರ ಮೋದಿಯವರು ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದು ದೇವೇಗೌಡರು ಹೇಳಿದ್ದರು. ಅದು ಈಗ ಮರೆತುಹೋಯಿಯೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಪ್ರಧಾನಿಯವರನ್ನು ಪ್ರಶ್ನಿಸಿದ್ದಾರೆ.
ಅವರು ಇಂದು ಕರ್ನಾಟಕ ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಪುಟ್ಟಣ್ಣ ಜಯಗಳಿಸಿರುವ ಹಿನ್ನೆಲೆಯಲ್ಲಿ ಕೆಂಗೇರಿಯ ಸೂಲಿಕೇರಿ ಮೈದಾನದಲ್ಲಿ ಆಯೋಜಿಸಿದ್ದ ಶಿಕ್ಷಕರ ಕೃತಜ್ಞತಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
“ಮಾಜಿ ಪ್ರಧಾನಿ ದೇವೇಗೌಡರು ಈಗ ಬಿಜೆಪಿ ಜತೆ ಸೇರಿರುವುದು, ಮೋದಿಯವರನ್ನು ವಿಪರೀತ ಹೊಗಳುತ್ತಿರುವುದು ನನಗೆ ತುಂಬಾ ಆಶ್ಚರ್ಯ ಆಗಿದೆ. ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟಲು ಬಯಸುತ್ತೇನೆ. ಬಿಜೆಪಿಗೆ ಯಾವತ್ತೂ ವಿರುದ್ಧವಾಗಿರುತ್ತೇವೆ ಎಂದಿದ್ದರು. ಈಗ ತಮ್ಮಪಕ್ಷದ ಉಳಿವಿಗಾಗಿ ಬಿಜೆಪಿ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಇಂದು ನಾಡಿನ ಜನತೆ ನಿಮ್ಮ ಹಾಗೆ ಪ್ರಜ್ಞಾವಂತರಾಗಿದ್ದಾರೆ. ಇವರ ಹೇಳಿಕೆಗಳನ್ನು ಪರಿಶೀಲಿಸಿ ತುಲನೆ ಮಾಡುವಷ್ಟು ತಿಳಿವಳಿಕೆ ನಾಡಿನ ಜನರಿಗೆ ಬಂದಿದೆ. ರಾಜಕೀಯವಾಗಿ ದೇವೇಗೌಡರು ತಮ್ಮ ಕುಟುಂಬದ ಉಳಿವಿಗಾಗಿ ಯಾವುದೇ ನಿರ್ಧಾರಕ್ಕೆ ಬಂದರೂ ಜನರು ಕಣ್ಣುಮುಚ್ಚಿಕೊಂಡು ಅವರನ್ನು ಬೆಂಬಲಿಸಬೇಕು ಎನ್ನುವ ಸಂದರ್ಭ ಈಗ ಇಲ್ಲ” ಎಂದರು.
ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಪುಟ್ಟಣ್ಣನವರು ಜಯಗಳಿಸಿದ ಹಿನ್ನೆಲೆಯಲ್ಲಿ ಕೆಂಗೇರಿಯಲ್ಲಿ ಆಯೋಜಿಸಿದ್ದ ಶಿಕ್ಷಕರ ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದೆ.
ಮಾಜಿ ಪ್ರಧಾನಿ ದೇವೇಗೌಡರು ಈಗ @BJP4India ಜತೆ ಸೇರಿರುವುದು, @narendramodi ಅವರನ್ನು ವಿಪರೀತ ಹೊಗಳುತ್ತಿರುವುದು ನನಗೆ ತುಂಬಾ ಆಶ್ಚರ್ಯ ಆಗಿದೆ. ಮುಂದಿನ ಜನ್ಮದಲ್ಲಿ… pic.twitter.com/daAKBuUi9D
— Siddaramaiah (@siddaramaiah) March 10, 2024
“ದೇವೇಗೌಡರು ನರೇಂದ್ರ ಮೋದಿಯವರನ್ನು ಈಗ ಹೊಗಳಿದ್ದೇ ಹೊಗಳಿದ್ದು. ನನಗೂ ಅವರಿಗೂ ಅವಿನಾಭಾವ ಸಂಬಂಧ ಇದೆ ಅಂತಲೂ ಎನ್ನುತ್ತಾರೆ. ಗೌಡರು ಹೀಗೇಕಾದರು ಎಂದು ಆಶ್ಚರ್ಯವಾಗಿದೆ. ಇದೇ ದೇವೇಗೌಡರು ನರೇಂದ್ರ ಮೋದಿಯವರು ಪುನಃ ಪ್ರಧಾನಿಯಾದರೆ ನಾನು ದೇಶ ಬಿಟ್ಟು ಹೋಗುತ್ತೇನೆ ಎಂದಿದ್ದರು. ಈಗ ಹೊಗಳುತ್ತಾರೆ. ಹೀಗೆ ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ. ಈ ದೇಶದ ಪ್ರಧಾನ ಮಂತ್ರಿಯಾಗಿದ್ದವರು ಈ ರೀತಿ ಹೇಳುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ” ಎಂದು ಮುಖ್ಯಮಂತ್ರಿ ತಿಳಿಸಿದರು.
“ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಈಗ ಜನರೇ ತೀರ್ಮಾನಿಸಬೇಕು. ಬೆಂಗಳೂರು ಗ್ರಾಮಾಂತರದಿಂದ ಡಿ.ಕೆ.ಸುರೇಶ್ ಅವರನ್ನು ಕಣಕ್ಕೆ 4 ಬಾರಿ ಇಳಿಸಲಾಗಿದೆ. ಈ ಕ್ಷೇತ್ರದಲ್ಲಿ ಅವರು ಖಂಡಿತ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವಿದೆ. ಬಿಜೆಪಿಯವರು ನರೇಂದ್ರ ಮೋದಿಯವರ ಹೆಸರಿನಲ್ಲಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆಯೇ ಹೊರತು ಬಿಜೆಪಿಯವರಿಗೆ ಜನರ ಬಳಿ ಹೋಗಲು ಕಾರಣಗಳೇ ಇಲ್ಲ” ಎಂದರು.
ಇದನ್ನು ಓದಿದ್ದೀರಾ? ಪನಾಮಾ | ಉತ್ಖನನದ ವೇಳೆ 32 ಅಸ್ತಿ ಪಂಜರದ ಜೊತೆಗೆ ಬೃಹತ್ ಚಿನ್ನದ ಖಜಾನೆ ಪತ್ತೆ!
“ನರೇಂದ್ರ ಮೋದಿಯವರ ಹೆಸರಿನ ಮೇಲೆಯೇ ಗೆಲ್ಲುತ್ತೇವೆ ಎನ್ನುವವರಷ್ಟು ಮೂರ್ಖರು ಯಾರೂ ಇಲ್ಲ
ನರೇಂದ್ರ ಮೋದಿಯವರ ಹೆಸರಿನ ಮೇಲೆ ಗೆಲ್ಲುತ್ತೇವೆ ಎಂದು ಬಿಜೆಪಿ ಭಾವಿಸಿದೆ. ನರೇಂದ್ರ ಮೋದಿಯವರು ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಕಿ ಪಾದಯಾತ್ರೆ ಮಾಡಿದ್ದರೂ ನಮಗೆ 136 ಸ್ಥಾನಗಳು ದೊರೆತವು. ಮೋದಿಯವರು ಪ್ರಚಾರ ಮಾಡಿದ್ದ ಯಾವ ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲಲೇ ಇಲ್ಲ. ಹೀಗಾಗಿ ನರೇಂದ್ರ ಮೋದಿಯವರ ಹೆಸರಿನ ಮೇಲೆಯೇ ಗೆಲ್ಲುತ್ತೇವೆ ಎನ್ನುವ ಇವರಷ್ಟು ಮೂರ್ಖರು ಯಾರೂ ಇಲ್ಲ” ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.
