- ‘ವರಿಷ್ಠರು ಏನು ತೀರ್ಮಾನ ಮಾಡುತ್ತಾರೋ ನೋಡಬೇಕು?’
- ‘ಮೈತ್ರಿಗೆ ರಾಜ್ಯ ಬಿಜೆಪಿ ನಾಯಕರ ಆಕ್ಷೇಪ ಏನೂ ಇಲ್ಲ’
ಜೆಡಿಎಸ್ ಜೊತೆ ಮೈತ್ರಿಗೆ ಹೈಕಮಾಂಡ್ ಒಲವು ತೋರಿಸಿದ್ದು ಮೈತ್ರಿ ಮಾಡಿಕೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ಈಗ ತಮ್ಮ ಮಾತನ್ನು ಅಲ್ಲಗಳೆದಿದ್ದಾರೆ.
ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತರಳಿದ್ದ ಯಡಿಯೂರಪ್ಪ ಗುರುವಾರ ಬೆಂಗಳೂರಿಗೆ ಆಗಮಿಸಿದ ವೇಳೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಈ ಕುರಿತು ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದರು.
“ರಾಜ್ಯದ ಯಾವ ವಿಚಾರವೂ ದೆಹಲಿ ಸಭೆಯಲ್ಲಿ ಚರ್ಚೆಯಾಗಿಲ್ಲ. ಮೈತ್ರಿ ಬಗ್ಗೆಯೂ ಚರ್ಚೆ ನಡೆದಿಲ್ಲ. ಸಭೆಯಲ್ಲಿ ಕೇವಲ ಜಿ20 ಶೃಂಗಸಭೆ, ಚಂದ್ರಯಾನ ಯಶಸ್ಸಿನ ಬಗ್ಗೆ ಚರ್ಚೆ ಆಗಿದೆ” ಎಂದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೈತರ ಆತ್ಮಹತ್ಯೆ ತೀವ್ರ ಹೆಚ್ಚಳ; ಅನ್ನದಾತರ ಬದುಕಿಗೆ ಬೇಕಿದೆ ಭರವಸೆ
“ವರಿಷ್ಠರ ಜೊತೆ ರಾಜ್ಯ ರಾಜಕೀಯ ವಿಚಾರದ ಬಗ್ಗೆ ಚರ್ಚೆಯಾಗಿಲ್ಲ. ನರೇಂದ್ರ ಮೋದಿ, ಅಮಿತ್ ಶಾ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ. ಮೈತ್ರಿಗೆ ರಾಜ್ಯ ಬಿಜೆಪಿ ನಾಯಕರ ಆಕ್ಷೇಪ ಏನೂ ಇಲ್ಲ. ಆದರೆ ವರಿಷ್ಠರು ಏನು ತೀರ್ಮಾನ ಮಾಡುತ್ತಾರೋ ನೋಡಬೇಕು. ಇದರಲ್ಲಿ ವೈಯಕ್ತಿಕ ಅಭಿಪ್ರಾಯ ಏನೂ ಇರುವುದಿಲ್ಲ. ಚರ್ಚೆ ಬಳಿಕ ವಾಸ್ತವಿಕ ಸಂಗತಿ ಗೊತ್ತಾಗಲಿದೆ” ಎಂದು ತಿಳಿಸಿದ್ದಾರೆ.