ಬಿಜೆಪಿ-ಜೆಡಿಎಸ್ ಮೈತ್ರಿ ಸೀಟು ಹಂಚಿಕೆ ವಿಚಾರ: ಮೋದಿಯವರ ಜೊತೆ ಕುಮಾರಸ್ವಾಮಿ ಮಾತುಕತೆ; ಎಚ್ ಡಿ ದೇವೇಗೌಡ

Date:

Advertisements
  • ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯನ್ನು ಅಧಿಕೃತವಾಗಿ ಘೋಷಣೆ ಮಾಡಿದ ಎಚ್ ಡಿ ದೇವೇಗೌಡ
  • ಬೆಂಗಳೂರಿನಲ್ಲಿ ಜೆಡಿಎಸ್ ಮುಖಂಡರ ಹಾಗೂ ಕಾರ್ಯಕರ್ತರ ಸಭೆ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಮಾತನಾಡಿರುವ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ, ಬಿಜೆಪಿಯವರು ಎಷ್ಟು ಕ್ಷೇತ್ರ ಕೊಡುತ್ತಾರೋ ಗೊತ್ತಿಲ್ಲ. ಮೋದಿ ಅವರ ಜೊತೆ ಕುಮಾರಸ್ವಾಮಿ ಮಾತನಾಡಿ ಸೀಟು ಹಂಚಿಕೆ ಅಂತಿಮ ನಿರ್ಧಾರ ಮಾಡುತ್ತಾರೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ನಡೆದ ಜೆಡಿಎಸ್ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಅಮಿತ್ ಶಾ ನನಗೆ ಗೌರವ ಕೊಡುತ್ತಾರೆ. ಅವರಿಗೆ ನನ್ನ ನಡವಳಿಕೆ ಗೊತ್ತಿದೆ. ನಮಗೆ ಇಷ್ಟು ಸೀಟು ಕೊಡಿ ಅಂತ ನಾವು ಕೇಳಿಲ್ಲ. ಪ್ರತಿ ಕ್ಷೇತ್ರದ ಬಗ್ಗೆ ವಿವರಿಸಿದ್ದೇನೆ. ಸೀಟು ಹಂಚಿಕೆ ಬಗ್ಗೆ ಕುಮಾರಸ್ವಾಮಿ ಮಾತನಾಡುತ್ತಾರೆ. ಸೀಟು ಹಂಚಿಕೆ ಅಂತಿಮವಾದ ಬಳಿಕ ಎಲ್ಲ ಕ್ಷೇತ್ರಕ್ಕೂ ಹೋಗಿ ಪ್ರಚಾರ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯನ್ನು ಅಧಿಕೃತವಾಗಿ ಘೋಷಣೆ ಮಾಡಿರುವ ಎಚ್ ಡಿ ದೇವೇಗೌಡ, ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಮಾತುಕತೆಯನ್ನು ಕೂಡ ಸಭೆಯಲ್ಲಿ ವಿವರಿಸಿದ್ದಾರೆ.

Advertisements

ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಉಳಿಯುತ್ತದೆ, ಬೆಳೆಯುತ್ತದೆ. ಕುಮಾರಸ್ವಾಮಿ ನಾಯಕತ್ವದಲ್ಲಿ ಮತ್ತೆ ಪಕ್ಷ ಬೆಳೆಯುತ್ತದೆ. ನೀವು ಕಾರ್ಯಕರ್ತರು ನಮ್ಮ ಪಕ್ಷದ ಶಕ್ತಿ. ನೀವು ಪಕ್ಷ ಉಳಿಸಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಭಾವುಕರಾಗಿ ನುಡಿದರು.

ಜೆಡಿಎಸ್ ಪಕ್ಷ ಉಳಿಸುವುದಕ್ಕೆ ನಾನು ದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿಯಾಗಿದ್ದೆ. ಆದರೆ ನಾನು ದೆಹಲಿಯಲ್ಲಿ ಅನೈತಿಕವಾಗಿ ಸಂಪರ್ಕ ಮಾಡಿದೆ ಎಂದು ಹೇಳುತ್ತಿದ್ದಾರೆ. ಈ ರಾಜ್ಯದಲ್ಲಿ ಯಾರಿಗೆ ನೈತಿಕತೆ ಇದೆ? ಯಾರಿಗೆ ಇಲ್ಲ ಅಂತ ವಿಶ್ಲೇಷಣೆ ಮಾಡಬಲ್ಲೆ. ಆದರೆ ನಾನು ವ್ಯಕ್ತಿಗತ ಟೀಕೆ ಮಾಡಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ದೇವೇಗೌಡ ಪರೋಕ್ಷವಾಗಿ ಆಕ್ರೋಶ ಹೊರಹಾಕಿದರು.

ಕೆಲವರು ಕಾಂಗ್ರೆಸ್‌ಗೆ ಹೋಗುತ್ತೇನೆ ಎನ್ನುತ್ತಾರೆ. ಆದರೆ ನಾನು ದುಡುಕಬೇಡಿ ಎಂದು ಹೇಳಿದ್ದೇನೆ. ಬಿಜೆಪಿ ಅವರು ಎಷ್ಟು ಕ್ಷೇತ್ರ ಕೊಡುತ್ತಾರೆ ಎಂದು ಗೊತ್ತಿಲ್ಲ. ಸೀಟು ಹಂಚಿಕೆ ಅಂತಿಮವಾದ ಬಳಿಕ ಎಲ್ಲ ಕ್ಷೇತ್ರಕ್ಕೂ ವ್ಹೀಲ್‌ಚೇರ್‌ನಲ್ಲೇ ಹೋಗಿ ಪ್ರಚಾರ ಮಾಡುತ್ತೇನೆ. ಎಲ್ಲರೂ ಬೆಂಬಲ ಕೊಡಿ ಎಂದು ಎಚ್ ಡಿ ದೇವೇಗೌಡ ಮನವಿ ಮಾಡಿಕೊಂಡರು.

ಸಮಾವೇಶದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹೀಂ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, ಕೋರ್ ಕಮಿಟಿಯ ಅಧ್ಯಕ್ಷ ಜಿ ಟಿ ದೇವೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕಾಯಂ ಜನತಾ ನ್ಯಾಯಾಲಯದ ಬಗ್ಗೆ ಜಾಗೃತಿ ಅಭಿಯಾನ

ಕಲಬುರಗಿ ಜಿಲ್ಲೆಯ ಜೇವರ್ಗಿ ನಗರದ ನ್ಯಾಯಾಲಯದ ಆವರಣದಲ್ಲಿ ಕಾನೂನು ಸೇವೆಗಳ ಸಮಿತಿ...

ಇಂಡಿ | ಬಿಜೆಪಿ ಮತಗಳ್ಳತನದ ವಿರುದ್ಧ ಕಾಂಗ್ರೆಸ್ ಅಭಿಯಾನ; ತನಿಖೆಗೆ ಒತ್ತಾಯ

ವಿಜಯಪುರ ಜಿಲ್ಲೆ ಇಂಡಿ ತಾಲೂಕು ಯುವ ಕಾಂಗ್ರೆಸ್ ವತಿಯಿಂದ ಪಟ್ಟಣದ ಬಸವೇಶ್ವರ...

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

Download Eedina App Android / iOS

X