ಬಿಜೆಪಿ, ಜೆಡಿಎಸ್‌ನವರು ಹಿಂದೂ ದೇವಾಲಯಗಳ ದೊಡ್ಡ ವಿರೋಧಿಗಳು: ಡಿ ಕೆ ಶಿವಕುಮಾರ್‌

Date:

“ಬಿಜೆಪಿಯವರದ್ದು ಮಾತೇ ಬೇರೆ, ಕೃತಿಯೇ ಬೇರೆ. ಅವರೇ ಹಿಂದೂ ದೇವಾಲಯಗಳ ದೊಡ್ಡ ವಿರೋಧಿಗಳು ಎನ್ನುವುದನ್ನು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ತಿದ್ದುಪಡಿ ಮಸೂದೆ ವಿರೋಧಿಸುವ ಮೂಲಕ ಸಾಬೀತು ಮಾಡಿದ್ದಾರೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಭಾರೀ ಚರ್ಚೆಗೆ ಗ್ರಾಸವಾಗಿದ್ದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ತಿದ್ದುಪಡಿ ಮಸೂದೆ ಮೇಲ್ಮನೆಯಲ್ಲಿ ಬಿದ್ದು ಹೋಗಿರುವ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ” ಬಿಜೆಪಿಯವರು ರಾಜಕಾರಣ ಮಾಡಲಿ, ಮೂರು ತಿಂಗಳಲ್ಲಿ ನಮಗೆ ಮೆಜಾರಿಟಿ ಬರುತ್ತೆ, ಆವಾಗ ಈ ಬಿಲ್ ಅನ್ನು ವಿಧಾನ ಪರಿಷತ್ ನಲ್ಲಿ ಧ್ವನಿಮತದಿಂದ ಅಂಗೀಕರಿಸುತ್ತೇವೆ” ಎಂದರು.

“ನಮ್ಮ ಮುಜರಾಯಿ ಇಲಾಖೆಯ ಸಚಿವರಾಗಿದ್ದ ರಾಮಲಿಂಗಾ ರೆಡ್ಡಿಯವರು ದೂರದೃಷ್ಟಿಯಿಂದ ಜಾರಿಗೆ ತರಲು ಉದ್ದೇಶಿಸಲಾಗಿದ್ದ ಮಸೂದೆಯಿದು. ಬಿಜೆಪಿ ಮತ್ತು ಜೆಡಿಎಸ್ ನವರು ಪೂರ್ವಯೋಜಿತವಾಗಿ ಪ್ಲ್ಯಾನ್ ಮಾಡಿಕೊಂಡು ಮಸೂದೆಯನ್ನು ವಿಧಾನ ಪರಿಷತ್ ನಲ್ಲಿ ಸೋಲಿಸಿದ್ದಾರೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಪಕ್ಷ ನಾಯಕ ಅಶೋಕ್ ಮತ್ತು ಸಾರ್ವಜನಿಕ ಸಭ್ಯತೆ

“ನಮ್ಮ ಎರಡು ಗ್ಯಾರಂಟಿಯಿಂದಾಗಿ ಧಾರ್ಮಿಕ ಕೇಂದ್ರಗಳಲ್ಲಿ ಹಣ ಸಂಗ್ರಹ ಹೆಚ್ಚಾಗುತ್ತಿದೆ. ಹಳ್ಳಿಗಳಲ್ಲಿ ಇರುವ ದೇವಾಲಯಗಳಿಗೂ ಸಹಾಯ ಮಾಡಬೇಕು ಎನ್ನುವ ಉದ್ದೇಶದಿಂದ ಇದನ್ನು ಜಾರಿಗೆ ತರಲು ಉದ್ದೇಶಿಸಿದ್ದೆವು. ಇದರಿಂದ ದೇವಾಲಯವೂ ಅಭಿವೃದ್ದಿಯೂ ಆಗುತ್ತದೆ, ಅರ್ಚಕ ವೃಂದಕ್ಕೂ ಲಾಭವಾಗುತ್ತಿತ್ತು” ಎಂದು ಶಿವಕುಮಾರ್ ತಿಳಿಸಿದರು.

“ಸದ್ಯಕ್ಕೆ ನಮ್ಮ ಪ್ರಯತ್ನ ವಿಫಲವಾಗಬಹುದು, ಆದರೆ ಪ್ರಾರ್ಥನೆ ವಿಫಲವಾಗುವುದಿಲ್ಲ. ಈ ಮಸೂದೆಯನ್ನು ಎರಡು ಪಾರ್ಟಿಯವರು ವಿರೋಧ ಮಾಡಿ ಬೀಳಿಸಿದ್ದಾರೆ. ಆದರೆ ಮಸೂದೆಯ ಭಾವನೆಯನ್ನು ಅರ್ಥವಾಗುತ್ತದೆ. ಹಳ್ಳಿಯಲ್ಲಿರುವ ದೇವರು ದೇವರಲ್ಲವೇ” ಎಂದು ಪ್ರಶ್ನಿಸಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸುಳ್ಳುಗಳು: ಭಾಗ-1 | ಕಳೆದ 10 ವರ್ಷಗಳಲ್ಲಿ ವಿಶ್ವಾದ್ಯಂತ ಭಾರತದ ವಿಶ್ವಾಸಾರ್ಹತೆ ಹೆಚ್ಚಾಗಿದೆಯೇ? ವಾಸ್ತವ ಏನು?

ಮುಸಲ್ಮಾನರಿಗೆ ಕಳೆದ 30 ವರ್ಷದಿಂದ ಮೀಸಲಾತಿ ಜಾರಿಯಲ್ಲಿದೆ. ನಂತರ ಬಸವರಾಜ ಬೊಮ್ಮಾಯಿ...

ಛಲಬಿಡದೆ ಬರಪರಿಹಾರ ತಂದ ಕಾಂಗ್ರೆಸ್‌ಗೆ ಜನ ಮೆಚ್ಚುಗೆ; ಯಾರು ಏನಂದರು?

ಬಿಜೆಪಿ ನಾಯಕರು ಎಷ್ಟೇ ಸುಳ್ಳು ಹೇಳಿದರೂ ಕುಗ್ಗದೆ, ಸುಪ್ರೀಂ ಕೋರ್ಟ್ ಮೆಟ್ಟಿಲನ್ನೂ...

26/11 ದಾಳಿಯ ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಮುಂಬೈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಮುಂಬೈನ 26/11ರ ಭಯೋತ್ಪಾದನಾ ದಾಳಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ವಕೀಲ ಉಜ್ವಲ್...

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...