ಕಾವೇರಿ ವಿವಾದ | ಜನರ ಹಿತದೃಷ್ಟಿಯಿಂದ ಬಿಜೆಪಿ, ಜೆಡಿಎಸ್ ಹೋರಾಡುತ್ತಿಲ್ಲ: ಸಿದ್ದರಾಮಯ್ಯ

Date:

  • ರಾಜ್ಯ ಸರ್ಕಾರ ವಿಫಲವಾಗಿದೆ ಎನ್ನುವುದು ರಾಜಕಾರಣ
  • ಇತರರ ಮೂಲಭೂತ ಹಕ್ಕುಗಳ ರಕ್ಷಣೆ ಕೂಡ ಮುಖ್ಯ: ಸಿಎಂ

ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾವೇರಿ ವಿಷಯವನ್ನು ರಾಜಕೀಯಗೊಳಿಸುತ್ತಿರುವುದು ರಾಜಕಾರಣಕ್ಕೆ ಹೊರತು ಜನರ ಹಾಗೂ ನಾಡಿನ ಹಿತದೃಷ್ಟಿಯಿಂದ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಮಂಗಳವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಬಂದ್ ಮಾಡಲು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಅವಕಾಶವಿದೆ. ಆದರೆ ನ್ಯಾಯಾಲಯ ಯಾವುದೇ ಸಭೆ, ಮೆರವಣಿಗೆಯನ್ನು ನಡೆಸಬಾರದು, ಪ್ರತಿಭಟನೆ ಮಾಡಬಾರದು ಎಂದು ಹೇಳಿದೆ. ನಾವು ನಮ್ಮ ಮೂಲಭೂತ ಹಕ್ಕುಗಳನ್ನು ಚಲಾಯಿಸುವಾಗ ಇತರರ ಮೂಲಭೂತ ಹಕ್ಕುಗಳನ್ನು ಕೂಡ ಗಮನದಲ್ಲಿರಿಸಿಕೊಳ್ಳಬೇಕು” ಎಂದರು.

144 ಸೆಕ್ಷನ್ ಜಾರಿ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಜನರು ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು, ಜನರಿಗೆ ತೊಂದರೆಯಾಗಬಾರದೆಂದು 144 ಸೆಕ್ಷನ್ ಜಾರಿ ಮಾಡಲಾಗಿದೆ. ರಾಜ್ಯದ ಹಾಗೂ ಜನತೆಯ ಹಿತದೃಷ್ಟಿಯಿಂದ ಆದೇಶ ಮಾಡಲಾಗಿದೆ. ಪ್ರತಿಭಟನೆಗೆ ನಮ್ಮ ತಕರಾರಿಲ್ಲ. ಆದರೆ ರಾಜಕೀಯ ಲಾಭಕ್ಕಾಗಿ ವಿಷಯವನ್ನು ರಾಜಕಾರಣ ಮಾಡಬಾರದು. ಆದರೆ ಬಿಜೆಪಿಯವರು ಚಡ್ಡಿ ಮೆರವಣಿಗೆ ಮಾಡಿದ್ದಾರೆ. ಬಿಜೆಪಿಯವರನ್ನು ಮೊದಲು ಚಡ್ಡಿಗಳು ಎಂದೇ ಕರೆಯಲಾಗುತ್ತಿತ್ತು” ಎಂದು ಅವರು ಲೇವಡಿ ಮಾಡಿದರು.

ರಾಜ್ಯ ಕಾಂಗ್ರೆಸ್ ಡಿಎಂಕೆ ಬಿ ಟೀಮ್ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಡಿಎಂಕೆ ತಮಿಳುನಾಡಿನವರು. ಬಿಜೆಪಿ ಎಐಎಡಿಎಂಕೆ ಜೊತೆಗಿತ್ತು. ಅವರನ್ನು ಏನೆಂದು ಹೇಳಬೇಕು? ರಾಜಕಾರಣಕ್ಕೆ ಏನೇನೋ ಹೇಳಬಾರದು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರಧಾನಿಗಳಿಗೆ ಪತ್ರ ಬರೆದಿರುವುದು ಸಂತೋಷದ ವಿಷಯ. ಅದನ್ನು ನಾವು ಸ್ವಾಗತಿಸುತ್ತೇವೆ. ಆದರೆ ರಾಜ್ಯ ಸರ್ಕಾರ ವಿಫಲವಾಗಿದೆ ಎನ್ನುವುದು ರಾಜಕಾರಣ” ಎಂದರು.

“ರಾಜ್ಯ ಸರ್ಕಾರ ಈ ರಾಜ್ಯದ ರೈತರ ಹಾಗೂ ರಾಜ್ಯದ ಹಿತರಕ್ಷಣೆಗೆ ಯಾವತ್ತೂ ಹಿಂದೆ ಬಿದ್ದಿಲ್ಲ, ಬೀಳುವುದೂ ಇಲ್ಲ. ನಮಗೆ ಅಧಿಕಾರ ಮುಖ್ಯವಲ್ಲ. ರಾಜ್ಯದ ಜನರ ಹಿತ ಮುಖ್ಯ. ಇದರಲ್ಲಿ ನಾವು ಬಲವಾದ ನಂಬಿಕೆ ಇಟ್ಟುಕೊಂಡಿರುವವರು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯಾರು ಹಸಿದಿದ್ದರು, ಯಾವುದು ಹಳಸಿತ್ತು?

ಸಂಕಷ್ಟ ಪರಿಹಾರ ಸೂತ್ರ ರೂಪಿಸಲು ಒತ್ತಡ

“ಕಾವೇರಿ ನೀರು ನಿಯಂತ್ರಣ ಮಂಡಳಿ ಹಾಗೂ ಸರ್ವೋಚ್ಚ ನ್ಯಾಯಾಲಯದ ಮುಂದೆ ಸಂಕಷ್ಟ ಸೂತ್ರ ರೂಪಿಸಲು ನಾವು ಒತ್ತಡ ಹೇರುತ್ತಿದ್ದೇವೆ. ಏಕೆಂದರೆ ಮಳೆ ಕೈಕೊಟ್ಟ ಸಂದರ್ಭದಲ್ಲಿ ಎರಡೂ ಕಡೆ ಸಂಕಷ್ಟ ಶುರುವಾಗುತ್ತದೆ. ಅಂತಹ ಸಂದರ್ಭದಲ್ಲಿ ನಾವು ಸಂಕಷ್ಟ ಹಂಚಿಕೊಳ್ಳಬೇಕು” ಎಂದರು

ಮೇಕೆದಾಟು ಜಲಾಶಯದಿಂದ ಪರಿಹಾರ

“ಇಂತಹ ಸನ್ನಿವೇಶದಲ್ಲಿ ನೀರು ಹಂಚಿಕೆಯ ವಿಚಾರದಲ್ಲಿ ಸಂಕಷ್ಟ ಸೂತ್ರವಿರಬೇಕು. ಮತ್ತೊಂದು ಪರಿಹಾರವೆಂದರೆ, ಮೇಕೆದಾಟು ಜಲಾಶಯವಿದ್ದಿದ್ದರೆ 67 ಟಿಎಂಸಿ ನೀರು ಇರುತ್ತಿದ್ದು, ಅಲ್ಲಿ ನೀರಿದ್ದರೆ ತಮಿಳುನಾಡಿಗೆ ನೀರು ಬಿಡಲು ಅನುಕೂಲವಾಗುತ್ತಿತ್ತು. ಈ ಜಲಾಶಯದಿಂದ ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳಿಗೆ ಅನುಕೂಲವಾಗುತ್ತಿತ್ತು” ಎಂದು ಅಭಿಪ್ರಾಯಪಟ್ಟರು.

ದೇಶದಲ್ಲಿ ಬಿಜೆಪಿ ವಿರುದ್ಧವಾದ ಶಕ್ತಿಗಳು ಒಂದುಗೂಡುತ್ತಿವೆ

ಎನ್‌ಡಿಎಯಿಂದ ಎಐಎಡಿಎಂಕೆ ಹೊರಗೆ ಬಂದಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಇಡೀ ದೇಶದಲ್ಲಿ ಬಿಜೆಪಿ ವಿರುದ್ಧವಾದ ಶಕ್ತಿಗಳು ಒಂದುಗೂಡುವ ಕೆಲಸವಾಗುತ್ತಿದೆ. ಏಕೆಂದರೆ ಬಿಜೆಪಿ ಕಳೆದ 9 ವರ್ಷಗಳಲ್ಲಿ ನುಡಿದಂತೆ ನಡೆದಿಲ್ಲ. ಭಾವನಾತ್ಮಕ ವಿಷಯಾಗಳನ್ನು ಮುಂದಿಟ್ಟು ಸಮಾಜವನ್ನು ಒಡೆಯುವ ಕೆಲಸ ಮಾಡಿದ್ದಾರೆ. ಈ ಸತ್ಯ ಗೊತ್ತಾದ ಮೇಲೆ ಅನೇಕ ಶಕ್ತಿಗಳು ಒಂದಾಗಿ ಬಿಜೆಪಿಯೇತರ ಗುಂಪಿನಲ್ಲಿ ಗುರುತಿಸಿಕೊಳ್ಳುತ್ತಿವೆ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಈ ದಿನ’ ಸಮೀಕ್ಷೆ | ಬೆಲೆ ಏರಿಕೆಗೆ ಬಿಜೆಪಿಯೇ ಕಾರಣ ಅಂತಾರೆ ಮತದಾರರು!

2014ರಲ್ಲಿ ಚುನಾವಣಾ ಪ್ರಚಾರಕ್ಕೆ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಪ್ರಮುಖ ವಿಚಾರವಾಗಿದ್ದು...

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...

ಮಲ್ಲಿಕಾರ್ಜುನ ಖರ್ಗೆ ಸೋಲು ರಾಜ್ಯಕ್ಕೆ ದೊಡ್ಡ ನಷ್ಟವಾಗಿದೆ, ಈ ಬಾರಿ ಹಾಗೇ ಆಗಬಾರದು: ಸಿದ್ದರಾಮಯ್ಯ

ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ಹೆಚ್ಚು...

ಹಾಸನ, ಮಂಡ್ಯದಲ್ಲಿ ಬಿಜೆಪಿ ನಾಯಕರ ಸಹಕಾರ ದೊರೆತಿಲ್ಲ: ಹೆಚ್‌ ಡಿ ದೇವೇಗೌಡ

ಹಾಸನದಲ್ಲಿ ಬಿಜೆಪಿಯ ಕೆಲವರು ವಿರೋಧ ಮಾಡುತ್ತಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಶ್‌ ಅವರು...