ಬಿಜೆಪಿ- ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳು: ಡಿ ಕೆ ಶಿವಕುಮಾರ್

Date:

Advertisements

ಈ ಹಿಂದೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿತ್ತು. ಈಗ ಟೋಲ್ ದರ ಏಕೆ ಹೆಚ್ಚಳವಾಗಿದೆ? ಇದರ ಬಗ್ಗೆ ಬಿಜೆಪಿಯವರು ಯಾಕೆ ಪ್ರತಿಭಟನೆ ಮಾಡುತ್ತಿಲ್ಲ? ಅವರು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕುಟುಕಿದರು.

ದೆಹಲಿಯಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳು ಬೆಲೆಏರಿಕೆ ಬಗ್ಗೆ ಬಿಜೆಪಿ ಧರಣಿ ಹಾಗೂ ರಸ್ತೆತಡೆ ಮಾಡುತ್ತಿರುವುದರ ಬಗ್ಗೆ ಕೇಳಿದಾಗ, “ನಾವು ಹಾಲಿನ ದರ ಹೆಚ್ಚಳ ಮಾಡಿರುವುದರಿಂದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ. ರೈತರ ಬದುಕನ್ನು ಸಹ ನಾವು ನೋಡಬೇಕಲ್ಲವೇ? ರೈತರ ಪಕ್ಷ ಎಂದು ಕೇವಲ ಹಸಿರು ಟವೆಲ್ ಹಾಕಿಕೊಂಡರೆ ಸಾಕೇ? ಊರುಗಳಿಗೆ ನಾವುಗಳು ಹೋದಾಗ ರೈತರು ನಮ್ಮನ್ನು ಹೊಡೆಯಲು ಬಂದಿಲ್ಲ ಅದೇ ನಮ್ಮ ಪುಣ್ಯ. ಅನೇಕ ರೈತರು ಹಸುಗಳನ್ನು ಮಾರಾಟ ಮಾಡಲು ಹೋಗುತ್ತಿದ್ದಾರೆ. ಈ ಹಿಂದೆ ಬೆಲೆ ಹೆಚ್ಚಳವಾದಾಗ ಅವರುಗಳೂ ಜನಪ್ರತಿನಿಧಿಗಳಾಗಿದ್ದರು ಅಲ್ಲವೇ?”ಎಂದು ಕುಟುಕಿದರು.

ಗ್ಯಾರಂಟಿ ವೆಚ್ಚ ಹೊರೆಯಾಗುತ್ತಿರುವ ಕಾರಣಕ್ಕೆ ಬೆಲೆ ಹೆಚ್ಚಳ ಮಾಡುತ್ತಿದ್ದಾರೆ ಎನ್ನುವ ಪ್ರತಿಪಕ್ಷಗಳ ಟೀಕೆಯ ಬಗ್ಗೆ ಕೇಳಿದಾಗ, “ಅವರುಗಳು ಮಾತನಾಡ ಬೇಕಲ್ಲ ಎಂದು ಮಾತನಾಡುತ್ತಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಹಾಲಿನ ದರ ಕಡಿಮೆಯಿದೆ” ಎಂದು ಹೇಳಿದರು.

Advertisements

ರಾಷ್ಟ್ರೀಯ ನಾಯಕರನ್ನು ಭೇಟಿಯಾಗುವುದು ಸಾಮಾನ್ಯ

ಮುಖ್ಯಮಂತ್ರಿ ಅವರು ರಾಹುಲ್ ಗಾಂಧಿ ಅವರನ್ನು ಭೇಟಿ‌ಮಾಡಿದ್ದರ ಬಗ್ಗೆ ಕೇಳಿದಾಗ, “ರಾಹುಲ್ ಗಾಂಧಿ ಅವರು ಪಕ್ಷದ ರಾಷ್ಟ್ರೀಯ ನಾಯಕರು ಅದಕ್ಕೆ ಬೇಟಿ ಮಾಡಿದ್ದಾರೆ. ನಾನು ಕೂಡ ಬಂದಾಗ ‌ಭೇಟಿ ಮಾಡಿದ್ದೇನೆ. ಹಲವಾರು ನಾಯಕರನ್ನು ಭೇಟಿಯಾಗುತ್ತೇವೆ. ಕಾಂಗ್ರೆಸ್ ಕಚೇರಿ ಪಕ್ಷದ ದೇವಸ್ಥಾನವಿದ್ದಂತೆ ಭೇಟಿ ಮಾಡಿದರೆ ತಪ್ಪೇನಿದೆ?. ವಿಧಾನ ಪರಿಷತ್ ಸ್ಥಾನಗಳ ಬಗ್ಗೆ ಇನ್ನೂ ಚರ್ಚೆಯಾಗಿಲ್ಲ. ಚರ್ಚೆಗೆ ಬಂದಾಗ ಮಾತನಾಡುತ್ತೇವೆ” ಎಂದರು.

“ದೆಹಲಿಯ ನೂತನ ಕರ್ನಾಟಕ ಭವನ ನಮ್ಮ ರಾಜ್ಯದ ಜನತೆಯ ರಾಯಭಾರಿಯಾಗಿ ಕೆಲಸ ಮಾಡಲಿದೆ. ಅಂದರೆ ಎಲ್ಲ ಪಕ್ಷಗಳ ಜನಪ್ರತಿನಿಧಿಗಳಿಗೆ, ಸರ್ಕಾರದ ಅಧಿಕಾರಿಗಳಿಗೆ ಸೇರಿದಂತೆ ಅನೇಕರಿಗೆ ಈ ಭವನ ಉಪಯೋಗವಾಗಲಿದೆ. ಇಲ್ಲಿ ನಡೆಯುವ ಚರ್ಚೆಗಳಿಂದ ರಾಜ್ಯಕ್ಕೆ ಉಪಯೋಗವಾಗಲಿ ಎಂದು ಆಶಿಸುತ್ತೇನೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಒಂದಷ್ಟು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಈ ಸೂಚನೆಗಳನ್ನು ಕಾರ್ಯಗತಗೊಳಿಸಲಾಗುವುದು, ಇದರ ಬಗ್ಗೆ ಮುಖ್ಯಮಂತ್ರಿಗಳು ಸಹ ಸಹಮತ ವ್ಯಕ್ತಪಡಿಸಿದ್ದಾರೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X