ಒಬ್ಬರಿಗೆ ಹಲ್ಲಿಲ್ಲ, ಮತ್ತೊಬ್ಬರಿಗೆ ಕಡಲೆ ಇಲ್ಲ ಎಂಬ ಸ್ಥಿತಿಯಲ್ಲಿ ವಿಪಕ್ಷಗಳು: ಕಾಂಗ್ರೆಸ್‌ ಲೇವಡಿ

Date:

”ಒಬ್ಬರಿಗೆ ಹಲ್ಲಿಲ್ಲ, ಮತ್ತೊಬ್ಬರಿಗೆ ಕಡಲೆ ಇಲ್ಲ ಎಂಬಂತಹ ಸ್ಥಿತಿಯಲ್ಲಿರುವ ವಿಪಕ್ಷಗಳು ಕಾಂಗ್ರೆಸ್ ಸರ್ಕಾರವನ್ನು ಬೀಳಿಸುತ್ತೇವೆ ಎನ್ನುವುದು ನರಿಯೊಂದು ದ್ರಾಕ್ಷಿಗೆ ಆಸೆ ಪಟ್ಟಂತೆ” ಎಂದು ಪ್ರತಿಪಕ್ಷಗಳ ವಿರುದ್ಧ ಆಡಳಿತಾರೂಢ ಕಾಂಗ್ರೆಸ್ ವ್ಯಂಗ್ಯವಾಡಿದೆ.

- Advertisement -

ಬಿಜೆಪಿ ಮತ್ತು ಜೆಡಿಎಸ್​ ವಿರುದ್ಧ ಕಾಂಗ್ರೆಸ್​ ಟ್ವೀಟ್ ಮಾಡಿದ್ದು, “ಕನ್ನಡಿಗರು ಭರವಸೆಯಿಟ್ಟು ಗೆಲ್ಲಿಸಿದ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸಿದರೆ ಜನರೇ ದಂಗೆ ಏಳಲಿದ್ದಾರೆ” ಎಂದು ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

“ಕನ್ನಡಿಗರು ಅತೀವ ಭರವಸೆಯನ್ನಿಟ್ಟು ಗೆಲ್ಲಿಸಿದ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸಿದರೆ ಜನರೇ ದಂಗೆ ಏಳುತ್ತಾರೆ. ಈಗ ಸಿಂಗಾಪುರಕ್ಕೆ ಹೋದವರು ನಂತರ ಮಂಗಾಪುರಕ್ಕೆ ಓಡುವ ಸ್ಥಿತಿ ಉಂಟಾಗಲಿದೆ. ಪದೇಪದೆ ಪ್ರಜಾಪ್ರಭುತ್ವದ ಆಶಯಗಳ ವಿರುದ್ಧ ಕೆಲಸ ಮಾಡುವ ಬಿಜೆಪಿ ಈಗಲಾದರೂ ಜನರ ತೀರ್ಪನ್ನು ಗೌರವಿಸುವುದನ್ನು ಕಲಿಯಲಿ” ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

“ಜೆಡಿಎಸ್ ನಾಯಕರು ಬಿಜೆಪಿಯ ಲೆಟರ್ ಹೆಡ್ ಮೇಲೆ ಸಹಿ ಮಾಡಿ ತಮ್ಮದು ಅಡ್ರೆಸ್ ಇಲ್ಲದ ಪಕ್ಷ ಎಂದು ಸಾಬೀತು ಮಾಡಿದ್ದರು. ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿಯವರು ಜೆಡಿಎಸ್ ಕಚೇರಿಗೆ ತೆರಳಿ, ಪತ್ರಿಕಾಗೋಷ್ಠಿಗೆ ಜೆಡಿಎಸ್ ನೆರವು ಪಡೆದು ತಮಗೆ ದಮ್ಮು, ತಾಕತ್ತು ಇಲ್ಲ ಎಂದು ಸಾಬೀತು ಮಾಡಿದ್ದರು. ಒಬ್ಬರಿಗೆ ಹಲ್ಲಿಲ್ಲ, ಮತ್ತೊಬ್ಬರಿಗೆ ಕಡಲೆ ಇಲ್ಲ ಎಂಬಂತಹ ಸ್ಥಿತಿಯಲ್ಲಿರುವ ವಿಪಕ್ಷಗಳು ಕಾಂಗ್ರೆಸ್ ಸರ್ಕಾರವನ್ನು ಬೀಳಿಸುತ್ತೇವೆ ಎನ್ನುವುದು ನರಿಯೊಂದು ದ್ರಾಕ್ಷಿಗೆ ಆಸೆ ಪಟ್ಟಂತೆ” ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

“ಜೆಡಿಎಸ್​ ನಾಯಕ ಎಚ್​​ಡಿ ಕುಮಾರಸ್ವಾಮಿ ಅವರು ಸಿಂಗಾಪುರಕ್ಕೆ ತೆರಳಿದ್ದು, ಸರ್ಕಾರ ಅಸ್ಥಿರಗೊಳಿಸಲು ಸಂಚು ಹೂಡುತ್ತಿದ್ದಾರೆ” ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇತ್ತೀಚೆಗೆ ದೂರಿದ್ದರು. ಈ ಮಧ್ಯೆ, ಕಾಂಗ್ರೆಸ್​ ಎಂಎಲ್​ಸಿ ಬಿ ಕೆ ಹರಿಪ್ರಸಾದ್ ಅವರು ಪಕ್ಷದ ನಾಯಕತ್ವದ ಬಗ್ಗೆ ಅಸಮಾಧಾನದ ಧಾಟಿಯಲ್ಲಿ ಮಾತನಾಡಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು.

ಈ ಸುದ್ದಿ ಓದಿದ್ದೀರಾ? ಸಿ ಟಿ ರವಿ ರಾಜ್ಯಾಧ್ಯಕ್ಷ, ಯತ್ನಾಳ್‌ ವಿಪಕ್ಷ ನಾಯಕ ಎಂದು ಸುಳಿವು ನೀಡಿದ ಎಚ್‌ ಡಿ ದೇವೇಗೌಡ

ಕಾಂಗ್ರೆಸ್​​ ಟೀಕೆಗೆ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದು, ಬಿ ಕೆ ಹರಿಪ್ರಸಾದ್ ಅವರ ಹೇಳಿಕೆಯಿಂದ ಜನರ ಗಮನ ಬೇರೆಡೆ ಸೆಳೆಯುವ ಸಲುವಾಗಿ ಡಿ ಕೆ ಶಿವಕುಮಾರ್ ಅವರು ಸಿಂಗಾಪುರದ ಕಥೆಕಟ್ಟಿದ್ದಾರೆ ಎಂದು ಹೇಳಿದ್ದರು. ಜೆಡಿಎಸ್‌ ಶಾಸಕ ಜಿ ಟಿ ದೇವೇಗೌಡ ಅವರು, ಕಾಂಗ್ರೆಸ್‌ನಲ್ಲಿ ಮೂಲ ಮತ್ತು ವಲಸಿಗರ ನಡುವೆ ಅಸಮಾಧಾನ ಸ್ಫೋಟಗೊಂಡಿದೆ. ರಾಜ್ಯ ಸರ್ಕಾರವನ್ನು ನಾವ್ಯಾರು ಕಡವುವ ಅಗತ್ಯವಿಲ್ಲ. ತಾನಾಗಿಯೇ ಬೀಳಲಿದೆ ಎಂಬ ದಾಟಿಯಲ್ಲಿ ಹೇಳಿಕೆ ನೀಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...