ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ-ಜೆಡಿಎಸ್ ಷಡ್ಯಂತ್ರ‌, ಜನ ಜಾಗೃತರಾಗಲಿ: ಡಿ ಕೆ ಶಿವಕುಮಾರ್

Date:

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ ರೂಪಿಸುತ್ತಿದೆ. ಹೀಗಾಗಿ ಜನರು ಜಾಗೃತರಾಗಿರಬೇಕು ಎಂದು ದೇವೇಗೌಡರು ಸಂದೇಶ ನೀಡಿದ್ದಾರೆ ಎಂದು ಡಿ ಕೆ ಶಿವಕುಮಾರ್ ತಿರುಗೇಟು ನೀಡಿದರು.

- Advertisement -

ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರು ‘ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಯೋಜನೆ ನಿಲ್ಲಲಿದೆ’ ಎಂಬ ದೇವೇಗೌಡರ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ವಿರೋಧ ಪಕ್ಷದವರ ಹಣೆಯಲ್ಲಿ ಬರೆದಿಲ್ಲ. ನಮ್ಮ ತಾಯಂದಿರ ಬದುಕು ಹಾಗೂ ಸಂಸಾರ ಉತ್ತಮವಾಗಿ ಸಾಗಲಿ ಎಂದು ನಾವು ಗೃಹಲಕ್ಷ್ಮಿ ಹಣ ನೀಡುತ್ತಿದ್ದೇವೆ. ಇದನ್ನು ತಪ್ಪಿಸಲು ಬಿಜೆಪಿ ಹಾಗೂ ಜೆಡಿಎಸ್ ಹೊರಟಿದೆ. ಜನ ಹುಷಾರಾಗಿರಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮೂರಕ್ಕೆ ಮೂರು ಕ್ಷೇತ್ರ ಗೆಲ್ಲುತ್ತೇವೆ

ಉಪಚುನಾವಣೆ ತಯಾರಿ ಬಗ್ಗೆ ಕೇಳಿದಾಗ, “ರಾಜ್ಯದ ಜನ ನಮ್ಮ ಗ್ಯಾರಂಟಿ ಯೋಜನೆಗಳು ಹಾಗೂ ಆಡಳಿತವನ್ನು ಒಪ್ಪಿದ್ದು, ಈ ಬಾರಿ ಉಪಚುನಾವನೇಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಮೂರು ಕ್ಷೇತ್ರಗಲ್ಲಿ ಪ್ರಚಾರ ಮುಗಿಸಿದ್ದೇವೆ. ಬಿಜೆಪಿ ಏನೇ ತಂತ್ರ ಪ್ರಯೋಗಿಸಿದರೂ ಜನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದಂತೆ ಈ ಮೂರು ಕ್ಷೇತ್ರಗಳ ಚುನಾವಣೆಯಲ್ಲಿ ಮತ ಹಾಕಲಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಧಾನಿಗಳ ದಾರಿತಪ್ಪಿಸಿದ್ದಾರೆ

ಅಬಕಾರಿ ಇಲಾಖೆಯಲ್ಲಿ ₹700 ಕೋಟಿ ವಸೂಲಿ ಬಗ್ಗೆ ಪ್ರಧಾನಿಗಳ ಆರೋಪದ ಬಗ್ಗೆ ಕೇಳಿದಾಗ, “ಇದು ಸುಳ್ಳು ಆರೋಪ, ಅವರನ್ನು ಯಾರೋ ದಾರಿತಪ್ಪಿಸಿದ್ದಾರೆ. ಈ ವಿಚಾರವಾಗಿ ಆರೋಪ ಸಾಬೀತುಪಡಿಸಿದರೆ ರಾಜಕೀಯ ತ್ಯಜಿಸುವುದಾಗಿ ಮುಖ್ಯಮಂತ್ರಿಗಳು ಬಹಿರಂಗ ಸವಾಲು ಹಾಕಿದ್ದಾರೆ. ಇದಕ್ಕಿಂತ ಬೇರೇನು ಬೇಕು?” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೋವಿಡ್‌ ದುರಂತದಲ್ಲೂ ʼಹೆಣದ ಮೇಲೆ ಹಣʼ ಎತ್ತಿದವರ ಅಮಾನವೀಯತೆ

ದ್ವೇಷ ರಾಜಕಾರಣ ಮಾಡುತ್ತಿರುವುದು ಬಿಜೆಪಿ

ಕೋವಿಡ್ ಅಕ್ರಮ ವಿಚಾರದಲ್ಲಿ ನ್ಯಾ.ಕುನ್ಹಾ ಅವರ ಸಮಿತಿ ಸರ್ಕಾರದ ಏಜೆಂಟ್ ರಂತೆ ನಡೆದುಕೊಳ್ಳುತ್ತಿದೆ ಎಂಬ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರ ಪರವಾಗಿ ವರದಿ ಕೊಟ್ಟರೆ ಎಲ್ಲವೂ ನ್ಯಾಯಬದ್ಧವಾಗಿರುತ್ತವೆ. ಅವರ ವಿರುದ್ಧವಾಗಿ ನೀಡುವ ವರದಿ ಬಗ್ಗೆ ಹೀಗೆ ಆರೋಪ ಮಾಡುತ್ತಾರೆ. ದ್ವೇಷ ರಾಜಕಾರಣ ಮಾಡುತ್ತಿರುವವರು ಬಿಜೆಪಿಯವರು. ಅವರು ಯಾವುದೇ ಆರೋಪ ಮಾಡಿಕೊಳ್ಳಲಿ” ಎಂದು ಕಿಡಿಕಾರಿದರು.

ವಯನಾಡಿನಲ್ಲಿ ಪ್ರಿಯಾಂಕಾ ಗೆಲವು

ವಯನಾಡಿನ ಉಪಚುನಾವಣೆ ಬಗ್ಗೆ ಕೇಳಿದಾಗ, “ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ಅವರು ಗೆಲ್ಲುವುದು ನಿಶ್ಚಿತ. ಅಲ್ಲಿ ಬೇರೆ ಪಕ್ಷಗಳ ನಾಯಕರು ಕೂಡ ಪ್ರಿಯಾಂಕಾ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದು, ಪ್ರಿಯಾಂಕಾ ಅವರನ್ನು ಸಂಸತ್ ಸದಸ್ಯೆಯಾಗಿ ನೋಡಲು ಬಯಸಿದ್ದಾರೆ. ಅವರು ಹಾಗೂ ರಾಹುಲ್ ಗಾಂಧಿ ಅವರು ಕ್ಷೇತ್ರದ ಅಭಿವೃದ್ಧಿ ಮಾಡಲಿದ್ದಾರೆ. ಅಲ್ಲಿನ ಉಪಚುನಾವಣೆ ಏಕಪಕ್ಷೀಯ ಸ್ಪರ್ಧೆಯಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...