ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ | ದೇವೇಗೌಡರ ಆಶೀರ್ವಾದ ಆನೆ ಬಲ ತಂದಿದೆ: ಬಿ ವೈ ವಿಜಯೇಂದ್ರ

Date:

Advertisements

ಬಿಜೆಪಿ ಮತ್ತು ಜೆಡಿಎಸ್ ನಡುವಿನ ಸಮ್ಮಿಲನದಿಂದ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡತಕ್ಕ ಫಲಿತಾಂಶವನ್ನು ನೀಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ ವೈ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಶುಕ್ರವಾರ ನಡೆದ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, 2006ರಲ್ಲಿ ಸಹ ಬಿಜೆಪಿ ಮತ್ತು ಜೆಡಿಎಸ್ ನಡುವೆ ಹೊಂದಾಣಿಕೆ ಆಗಿತ್ತು. ಆದರೆ, ಸೈದ್ಧಾಂತಿಕ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಜೀ ಅವರ ಸಮ್ಮತಿ ಇರಲಿಲ್ಲ” ಎಂದು ನೆನಪಿಸಿದರು.

“ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಜೊತೆಗೇ ದೇವೇಗೌಡ ಅವರೂ ಈ ಬಾರಿ ಮೈತ್ರಿಗೆ ಆಶೀರ್ವಾದ ಮಾಡಿದ್ದಾರೆ. ಮೋದಿ ಅವರ ದೇಶದ ಅಭಿವೃದ್ಧಿ, ಭದ್ರತೆ ದೃಷ್ಟಿಯಿಂದ ನಮಗೆ ದೇವೇಗೌಡರು ಆಶೀರ್ವಾದ ಮಾಡಿದ್ದು, ಇದರಿಂದ ಆನೆ ಬಲ ಬಂದಂತಾಗಿದೆ. ರಾಜ್ಯಕ್ಕೂ ಮುಂದಿನ ದಿನಗಳಲ್ಲಿ ಒಳಿತಾಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisements

“ಬಿಜೆಪಿ ಮತ್ತು ಜೆಡಿಎಸ್ ಜೊತೆಗೂಡಿ ಕೆಲಸ ಮಾಡಲು ಒಪ್ಪಿಕೊಂಡು ಹಲವು ತಿಂಗಳೇ ಕಳೆದಿದೆ. ನಾನು ಕೂಡ ಎಚ್.ಡಿ.ಕುಮಾರಸ್ವಾಮಿ ಅವರ ಜೊತೆಗೆ ಮೈಸೂರು- ಕೊಡಗು, ಮಂಡ್ಯ ಲೋಕಸಭಾ ಕ್ಷೇತ್ರಗಳಲ್ಲಿ ಜಂಟಿ ಪ್ರವಾಸ ಮಾಡಿದ್ದೇನೆ. ಇದರ ಪರಿಣಾಮವಾಗಿ ರಾಜ್ಯದ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರಿಗೆ ಸ್ಪಷ್ಟ ಸಂದೇಶ ತಲುಪಿದೆ. ಕರ್ನಾಟಕದಲ್ಲಿ ಸಾಕಷ್ಟು ಹೊಂದಾಣಿಕೆ ರಾಜಕಾರಣ ನಡೆದಿದೆ. ಬಿಜೆಪಿ ಮತ್ತು ಜೆಡಿಎಸ್, ಜೆಡಿಎಸ್-ಕಾಂಗ್ರೆಸ್ ನಡುವೆ ಹಲವಾರು ಬಾರಿ ಹೊಂದಾಣಿಕೆ ಆಗಿದೆ. ಆದರೆ, ಈಗ ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆಗೆ ರಾಜ್ಯದ ಪ್ರಜ್ಞಾವಂತ ಮತದಾರರು ಸಂಪೂರ್ಣ ಆಶೀರ್ವಾದ ಕೊಡುತ್ತಿದ್ದಾರೆ” ಎಂದರು.

“ಮೈಸೂರು, ಮಂಡ್ಯದಲ್ಲಿ ಕಾರ್ಯಕರ್ತರ ಉತ್ಸಾಹ ಗಮನಿಸಿದ್ದೇನೆ. ತಳಮಟ್ಟದಲ್ಲೂ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಾಗಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ನುಡಿದ ಅವರು, ಈ ಚುನಾವಣೆಯಲ್ಲಿ ಎರಡೂ ಪಕ್ಷಗಳ ಮುಖಂಡರ ಜವಾಬ್ದಾರಿ ಹೆಚ್ಚಾಗಿದೆ. ಈ ಸಮ್ಮಿಲನವನ್ನು ಜನರು ಗಂಭೀರವಾಗಿ ಪರಿಗಣಿಸಿದ್ದಾರೆ. ಎರಡೂ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟ್ಟಾಗಿ ವಿಶ್ವಾಸದಿಂದ ದುಡಿದು ಬಿಜೆಪಿ- ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಿದೆ” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪೌರತ್ವ ಪ್ರಮಾಣಪತ್ರ ಪೂಜಾರಿ ಕೊಡುವುದಾದರೆ ಪ್ರಜಾಪ್ರಭುತ್ವಕ್ಕೆ ಅರ್ಥವಿದೆಯೇ?

ನಮ್ಮಲ್ಲಿನ ಒಳಜಗಳದಿಂದ ಕಾಂಗ್ರೆಸ್ ಅಧಿಕಾರಕ್ಕೆ: ಎಚ್‍ಡಿಕೆ

“ಬಿಜೆಪಿ ಸ್ನೇಹಿತರು ನಮ್ಮನ್ನು ಆತ್ಮೀಯವಾಗಿ ಕಂಡಿದ್ದಾರೆ. 2006ರಲ್ಲಿ ಅನಿವಾರ್ಯ ಕಾರಣಗಳಿಂದ ಮೈತ್ರಿ ಸರಕಾರ ದೀರ್ಘ ಕಾಲ ಮುಂದುವರೆಯಲಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಬಳಿಕ 2018ರಲ್ಲಿ ನಾವು- ನೀವು ಮೈತ್ರಿ ಸರಕಾರ ಮಾಡಿದ್ದರೆ ಇವತ್ತು ಸಹ ನಮ್ಮ ಸರಕಾರವೇ ಇರುತ್ತಿತ್ತೇನೋ? ಈ ಹಿಂದೆ ನಡೆದುದೆಲ್ಲ ವಿಧಿಯ ಆಟಗಳು ಎಂದು ತಿಳಿಯೋಣ. ಇವತ್ತು ಕಳೆದ ವಿಧಾನಸಭೆ ಚುನಾವಣೆ ಬಳಿಕ ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಸ್ವಲ್ಪ ನಿರಾಶೆ ಉಂಟಾಗಿದೆ. ಯಾಕೆ ಹೀಗಾಗಿದೆ? ನಮ್ಮಲ್ಲಿನ ಒಳಜಗಳ, ವಿಶ್ವಾಸದ ಕೊರತೆಯಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂತು” ಎಂದರು.

“ಬಿಜೆಪಿ ಶಕ್ತಿ ವೃದ್ಧಿ, ಪ್ರಧಾನಿಯವರ ನಿಸ್ವಾರ್ಥ ಸೇವೆ, ದೇಶದ ಅಭಿವೃದ್ಧಿಗೆ ಭದ್ರ ಬುನಾದಿಯನ್ನು ಹಾಕುವ ದೃಷ್ಟಿಯಿಂದ ಹಿರಿಯ ನಾಯಕ ಅಮಿತ್ ಶಾ ಅವರ ಆಹ್ವಾನದ ಮೇರೆಗೆ ಅವರನ್ನು ಭೇಟಿ ಮಾಡಿದೆ. ಬಳಿಕ ಪರಸ್ಪರ ಮೈತ್ರಿಯ ಹೊಂದಾಣಿಕೆ ಆಗಿದೆ” ಎಂದು ತಿಳಿಸಿದರು.

“ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಲೋಕಸಭಾ ಚುನಾವಣೆಯ ರಾಜ್ಯ ಉಸ್ತುವಾರಿ ರಾಧಾಮೋಹನ್‍ದಾಸ್ ಅಗರವಾಲ್, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ರಾಜ್ಯದ ಮಾಜಿ ಸಚಿವ ಜಿ.ಟಿ. ದೇವೇಗೌಡ, ಎರಡೂ ಪಕ್ಷಗಳ ಆಹ್ವಾನಿತ ಮುಖಂಡರು ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

Download Eedina App Android / iOS

X