ಬಿಜೆಪಿ, ಜೆಡಿಎಸ್‌ ಪಾದಯಾತ್ರೆ, ಇದೇ ಅವರ ಕೊನೆ ಯಾತ್ರೆ: ಮಂಜುನಾಥ ಭಂಡಾರಿ ಲೇವಡಿ

Date:

ಬಿಜೆಪಿಯವರ ಯಾತ್ರೆ ಹಾದಿ ತಪ್ಪಿದೆ. ಅವರು, ರಾಜ್ಯದ ಜನರಿಗೆ ಸೌಲಭ್ಯ ಕಲ್ಪಿಸಲು ದೆಹಲಿಗೆ ಯಾತ್ರೆ ಮಾಡಬೇಕಿತ್ತು. ಅದು ಬಿಟ್ಟು ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್ ವಿರುದ್ಧ ಪಾದಯಾತ್ರೆ ಮಾಡಲು ಹೊರಟಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ತಮ್ಮ 21 ಹಗರಣಗಳು ಬಯಲಾಗುವ ಭಯದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಪಕ್ಷದವರು ಪಾದಯಾತ್ರೆಯ ನಾಟಕ ಆರಂಭಿಸಿ, ಜನರ ದಾರಿ ತಪ್ಪಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ಅನುದಾನ ಕೊಟ್ಟಿಲ್ಲ. ಬಜೆಟ್ ಮೇಲೆ ಭಾಷಣ ನಡೆಯುತ್ತಿದ್ದರೂ ರಾಜ್ಯದ ಮೈತ್ರಿ ನಾಯಕರು ಅಲ್ಲಿ ಈ ಬಗ್ಗೆ ಧ್ವನಿ ಎತ್ತಿಲ್ಲ. ಜಿಎಸ್‌ಟಿ ಪಾಲನ್ನು ಕೇಂದ್ರ ರಾಜ್ಯಕ್ಕೆ ಸಮರ್ಪಕವಾಗಿ ನೀಡಿಲ್ಲ. ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಪ್ರತಿಭಟನೆ ಮಾಡಬೇಕಿದ್ದವರು, ಅದಕ್ಕಾಗಿ ಕೊಡಿಸಲು ದೆಹಲಿ ಚಲೋ ಮಾಡಬೇಕಿದ್ದವರು, ಪ್ರಚಾರಕ್ಕಾಗಿ ಪಾದಯಾತ್ರೆ ನಡೆಸುತ್ತಿದ್ದಾರೆ” ಎಂದು ಮಂಜುನಾಥ ಭಂಡಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ರಾಜಕೀಕರಣಕ್ಕೋಸ್ಕರ ಮೈಸೂರು ಚಲೋ ಬದಲು, ಅದನ್ನು ರದ್ದು ಮಾಡಿ ರಾಜ್ಯದ ಜನರಿಗೋಸ್ಕರ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಲು ದೆಹಲಿ ಚಲೋ ಮಾಡಬೇಕು ಎಂದು ನಾವು ಒತ್ತಾಯಿಸುತ್ತೇವೆ” ಎಂದಿದ್ದಾರೆ.

ಕೊನೆಯ ಯಾತ್ರೆಯಾಗುತ್ತೆ

“ಈ ಹಿಂದೆ ಬಿಜೆಪಿಯವರು ವಿಪರೀತ ಭ್ರಷ್ಟಾಚಾರ ಮಾಡಿದ್ದಕ್ಕೆ, ರಾಜ್ಯದ ಜನರಿಗೆ ಅನ್ಯಾಯ ಮಾಡಿದ್ದಕ್ಕೆ, ಮತದಾರರಿಗೆ ಮೋಸ ಮಾಡಿದ್ದಕ್ಕೆ, ಸುಳ್ಳು ಹೇಳಿ ರಾಜ್ಯದ ಮಾನ ಹರಾಜು ಹಾಕಿದ್ದಕ್ಕೆ‌, ರಾಜ್ಯದ ಹೆಸರಿಗೆ ಕಪ್ಪು ಮಸಿ ಬಳಿಯಲು ಯತ್ನಿಸಿದ್ದಕ್ಕೆ ರಾಜ್ಯದ ಜನರು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಬೆಂಬಲಿಸಿದರು. 136 ಸೀಟುಗಳನ್ನು ಕಾಂಗ್ರೆಸ್ ಗೆ ನೀಡಿದರು. ಲೋಕಸಭಾ ಚುನಾವಣೆಯಲ್ಲಿ ಚಾರ್ ಸೌ ಪಾರ್ ಎನ್ನುತ್ತಿದ್ದವರಿಗೆ 240 ಕ್ಕೆ ಸೀಮಿತಗೊಳಿಸಿದರು. ಇದು ಇವರ ಕೊನೆಯ ಯಾತ್ರೆಯಾಗಲಿದೆ” ಎಂದು ಮಂಜುನಾಥ ಭಂಡಾರಿ ಭವಿಷ್ಯ ನುಡಿದಿದ್ದಾರೆ.

ಕಾವಲು ನಾಯಿಗಳಾಗಬೇಕಿದ್ದವರು ಕಚ್ಚಾಡುತ್ತಿದ್ದಾರೆ

“ಬಿಜೆಪಿಯವರಲ್ಲೇ ಸಾಮರಸ್ಯವಿಲ್ಲ. ವಿರೋಧ ಪಕ್ಷವಾಗಿ ಪ್ರಜಾಪ್ರಭುತ್ವದ ಕಾವಲು ನಾಯಿಯಾಗಬೇಕಿದ್ದವರು. ಕವಲು ದಾರಿಯಲ್ಲಿ ಹೋಗುತ್ತಿದ್ದಾರೆ. ಕಚ್ಚಾಡುತ್ತಿದ್ದಾರೆ. ಒಂದೆಡೆ ಮೈಸೂರಿಗೆ ಪಾದಯಾತ್ರೆ ಮಾಡುತ್ತೇವೆ ಎಂದಿದ್ದರೆ, ಬಸವಕಲ್ಯಾಣದಿಂದ ಬಳ್ಳಾರಿಗೆ ಪಾದಯಾತ್ರೆ ಮಾಡುತ್ತೇವೆ ಎಂದು ಇನ್ನೊಂದಿಷ್ಟು ನಾಯಕರು ಹೇಳುತ್ತಿದ್ದಾರೆ. ಇವರ ಅಸ್ತಿತ್ವ ನಾಯಕತ್ವ ಪೈಪೋಟಿಗಾಗಿ ನಡೆಯುತ್ತಿರುವ ಯಾತ್ರೆ ಇದಾಗಿದೆ. ಮೊನ್ನೆ ನಡೆದ ಪಾದಯಾತ್ರೆ ಪೂರ್ವಭಾವಿ ಸಭೆಯಲ್ಲಿ ಶಾಸಕರು ಪಾಲ್ಗೊಂಡಿಲ್ಲ.‌ ಜಿ.ಟಿ.ದೇವೆಗೌಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ” ಎಂದು ಲೇವಡಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....