ವಿರೋಧ ಪಕ್ಷವು ವಿಫಲವಾಗಿರುವ ಕಾರಣ ಬಿಜೆಪಿ ಗೆಲ್ಲುತ್ತಲೇ ಇದೆ: ಅಸಾದುದ್ದೀನ್ ಓವೈಸಿ

Date:

ವಿರೋಧ ಪಕ್ಷವು ವಿಫಲವಾಗಿದೆ. ಹೀಗಾಗಿ ಹಿಂದೂ ಮತಗಳನ್ನು ಕ್ರೋಢೀಕರಿಸಿಕೊಂಡು ಬಿಜೆಪಿ ನಿರಂತರವಾಗಿ ಚುನಾವಣೆಗಳನ್ನು ಗೆಲ್ಲುತ್ತಿದೆ ಎಂದು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಹಾಗೆಯೇ ಓವೈಸಿ ಅವರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಪಕ್ಷ ಮೋದಿ ವಿರೋಧಿ ಮತಗಳನ್ನು ವಿಭಜಿಸುತ್ತದೆ ಎಂಬ ವಾದವನ್ನು ತಿರಸ್ಕರಿಸಿದರು.

- Advertisement -

ಈ ಬಗ್ಗೆ ಪಿಟಿಐ ಸಂದರ್ಶನದಲ್ಲಿ ಮಾತನಾಡಿದ ಅವರು, “ನೀವು ನನ್ನ ಮೇಲೆ ಹೇಗೆ ಆರೋಪ ಹೊರಿಸಬಹುದು ಎಂದು ಹೇಳಿ? ನಾನು 2024ರ ಸಂಸತ್ ಚುನಾವಣೆಯಲ್ಲಿ ಹೈದರಾಬಾದ್, ಔರಂಗಾಬಾದ್, ಕಿಶನ್‌ಗಂಜ್ ಮತ್ತು ಇತರ ಕೆಲವು ಸ್ಥಾನಗಳಲ್ಲಿ ಸ್ಪರ್ಧಿಸಿದೆ. ಬಿಜೆಪಿ 240 ಸ್ಥಾನಗಳನ್ನು ಪಡೆದಿದೆ. ಇದಕ್ಕೆ ನಾನು ಜವಾಬ್ದಾರನಾಗುತ್ತೇನೆಯೇ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಇದನ್ನು ಓದಿದ್ದೀರಾ? ದೆಹಲಿ | ಅಸಾದುದ್ದೀನ್ ಒವೈಸಿ ಮನೆ ಮೇಲೆ ಕಪ್ಪು ಮಸಿ ಎಸೆದ ದುಷ್ಕರ್ಮಿಗಳು; ‘ಹೆದರಲ್ಲ’ ಎಂದ ಸಂಸದ

“ವಿರೋಧ ಪಕ್ಷವು ವಿಫಲವಾಗಿರುವ ಕಾರಣದಿಂದಾಗಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ. ಬಿಜೆಪಿ ಸುಮಾರು ಶೇಕಡ 50ರಷ್ಟು ಹಿಂದೂ ಮತಗಳನ್ನು ಕ್ರೋಢೀಕರಿಸಿಕೊಂಡು ಚುನಾವಣೆಗಳಲ್ಲಿ ಗೆಲ್ಲುತ್ತಿದೆ. ಬಿಜೆಪಿ ಗೆಲುವಿಗೆ ನಮ್ಮನ್ನು ದೂಷಿಸುವುದು. ನಮ್ಮನ್ನು ಬಿಜೆಪಿಯ ಬಿ-ಟೀಮ್ ಎಂದು ಕರೆಯುವುದು ವಿಪಕ್ಷದ ದ್ವೇಷದ ಪ್ರತೀಕವೇ ಹೊರತು ಬೇರೇನಿಲ್ಲ. ನಮಗೆ ಹೆಚ್ಚಾಗಿ ಮುಸ್ಲಿಮರ ಮತ ಸಿಗುತ್ತದೆ ಎಂಬ ಸಿಟ್ಟು ಅವರಲ್ಲಿದೆ” ಎಂದು ಓವೈಸಿ ದೂರಿದರು.

AIMIM ಅನ್ನು ಭದ್ರಕೋಟೆಯಾದ ಹೈದರಾಬಾದ್‌ ಮಾತ್ರವಲ್ಲದೇ ಇತರೆ ಕಡೆಯೂ ಬೆಳೆಸಲು ಪ್ರಯತ್ನ ಮಾಡಲಾಗುತ್ತಿದೆ. ಇದನ್ನು ಕಾಂಗ್ರೆಸ್ ಸೇರಿದಂತೆ ಹಲವು ವಿರೋಧ ಪಕ್ಷಗಳು ಅಪಹಾಸ್ಯ ಮಾಡಿವೆ. ಓವೈಸಿ ಬಿಜೆಪಿ ವಿರೋಧಿ ಮುಸ್ಲಿಮರ ಮತಗಳನ್ನು ಕಸಿದು ಕೊನೆಗೆ ಬಿಜೆಪಿಗೆ ಲಾಭ ಮಾಡಿಕೊಡುತ್ತದೆ ಎಂಬುದು ವಿಪಕ್ಷಗಳ ಅಭಿಪ್ರಾಯವಾಗಿದೆ. ಈ ವಾದವನ್ನು ಓವೈಸಿ ತಿರಸ್ಕರಿಸಿದ್ದಾರೆ.

“ಸಮಾಜದ ಪ್ರತಿಯೊಂದು ವಿಭಾಗವು ರಾಜಕೀಯ ನಾಯಕತ್ವವನ್ನು ಹೊಂದಿರುವಾಗ ಅದು ನಿಮಗೆ ಒಪ್ಪಿಗೆಯಾಗುತ್ತದೆ. ಆದರೆ ಮುಸ್ಲಿಮರು ತಮ್ಮ ರಾಜಕೀಯ ಧ್ವನಿಯನ್ನು ಎತ್ತುವ, ರಾಜಕೀಯ ನಾಯಕತ್ವವನ್ನು ಹೊಂದಿರಬೇಕು ಎಂಬುದನ್ನು ನೀವು ಬಯಸುವುದಿಲ್ಲ” ಎಂದು ಓವೈಸಿ ಹೇಳಿದ್ದಾರೆ. ಕಾಂಗ್ರೆಸ್ ಅನ್ನು ಉಲ್ಲೇಖಿಸಿ ನೀವು ಈ ಹೇಳಿಕೆ ನೀಡುತ್ತಿದ್ದೀರಾ ಎಂಬ ಸಂದರ್ಶಕರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಓವೈಸಿ, ಬಿಎಸ್‌ಪಿ, ಎಸ್‌ಪಿ ಮತ್ತು ಬಿಜೆಪಿ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳನ್ನು ಉಲ್ಲೇಖಿಸುತ್ತಿರುವುದಾಗಿ ಹೇಳಿದ್ದಾರೆ.

“ಯಾದವ ಒಬ್ಬ ನಾಯಕನಾಗುತ್ತಾನೆ, ಮುಸಲ್ಮಾನ ಭಿಕ್ಷುಕನಾಗುತ್ತಾನೆ. ಮೇಲ್ಜಾತಿಯ ಒಬ್ಬ ನಾಯಕನಾಗುತ್ತಾನೆ, ಮುಸಲ್ಮಾನ ಭಿಕ್ಷುಕನಾಗುತ್ತಾನೆ. ಅದು ಎಷ್ಟು ನ್ಯಾಯ, ಹೇಳಿ” ಎಂದು ಓವೈಸಿ ಪ್ರಶ್ನಿಸಿದರು.

“ಭಾರತದ ಸಮಗ್ರತೆ ಮತ್ತು ಭದ್ರತೆಯ ಪ್ರಶ್ನೆ ಬಂದಾಗ ನಾವು ಮುಂದೆ ಬಂದು ಭಾರತೀಯ ಸೇನೆಯ ಬೆಂಬಲಕ್ಕೆ ನಿಲ್ಲುತ್ತೇವೆ. ಆದರೆ ನಾವು ನಮ್ಮ ಮನೆಯೊಳಗಿನ ಸಮಸ್ಯೆಗಳ ಬಗ್ಗೆ ಮಾತನಾಡಬೇಕಾಗಿದೆ, ಅಲ್ಲವೇ”ಎಂದು ಕೇಳಿದರು.

“ಸುಮಾರು ಶೇಕಡ 15ರಷ್ಟು ಜನಸಂಖ್ಯೆಯನ್ನು ಹೊಂದಿರುವ ದೇಶದ ಅತಿದೊಡ್ಡ ಅಲ್ಪಸಂಖ್ಯಾತ ಗುಂಪಾಗಿದ್ದರೂ, ಮುಸ್ಲಿಮರು ಶಾಸಕಾಂಗ ಮತ್ತು ಸಂಸತ್ತಿನಲ್ಲಿ ಕೇವಲ ಶೇಕಡ 4ರಷ್ಟು ಭಾಗಿತ್ವವನ್ನು ಹೊಂದಿದ್ದಾರೆ. ರಾಜಕೀಯ ಪಕ್ಷಗಳು ಮುಸ್ಲಿಮರಿಗೆ ಚುನಾವಣೆಗಳಲ್ಲಿ ಸ್ಪರ್ಧಿಸಲು ಟಿಕೆಟ್ ನೀಡುವುದಿಲ್ಲ. ಮತ್ತೆ ಜನರು ಮುಸ್ಲಿಮರಿಗೆ ಮತ ಹಾಕುವುದಿಲ್ಲ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್ ಕುಮಾರ್, ಮೋದಿ ಇಬ್ಬರೂ ಮನೆಗೆ ಹೋದ ಬಳಿಕ ಪ್ರಜಾಪ್ರಭುತ್ವದ ದುರಸ್ತಿ: ರಾಹುಲ್ ಗಾಂಧಿ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ಹುದ್ದೆಯಿಂದ ನಿರ್ಗಮಿಸಲಿದ್ದಾರೆ, ಪ್ರಧಾನಿ...

CJP ಪ್ರೊಟೆಸ್ಟ್‌ | ಮಮತಾ ಬ್ಯಾನರ್ಜಿ, ಕೇಜ್ರಿವಾಲ್‌, ಯೋಗೇಂದ್ರ ಯಾದವ್ ವಶಕ್ಕೆ; ಮಾರುಕಟ್ಟೆಗಳು ಬಂದ್‌

CJP ಕರೆ ನೀಡಿದ್ದ ದೆಹಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ತೃಣಮೂಲ ಕಾಂಗ್ರೆಸ್ (TMC)...

ಸಿಜೆಪಿಯ ಶಾಂತಿಯುತ ಪ್ರತಿಭಟನೆ ಹತೋಟಿಗೆ ಕೇಂದ್ರದ ಸರ್ವಾಧಿಕಾರ ಧೋರಣೆ: ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ಆಕ್ರೋಶ

ಶಾಂತಿಯುತವಾಗಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಹತೋಟಿಗೆ ತರಲು ಮತ್ತು ಜನರ ಧ್ವನಿಯನ್ನು ಅಡಗಿಸಲು...