ಶಾರುಖ್ ಖಾನ್ ನಾಲಿಗೆ ‘ಕತ್ತರಿಸಿದರೆ’ 1 ಲಕ್ಷ ರೂ. ಬಹುಮಾನ: ಹಿಂದೂ ಮಹಾಸಭಾ ನಾಯಕಿ ಘೋಷಣೆ!

Date:

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಆವೃತ್ತಿಗೆ ಬಾಂಗ್ಲಾದೇಶದ ಕ್ರಿಕೆಟಿಗನನ್ನು ಖರೀದಿಸಿದ್ದಕ್ಕಾಗಿ ಬಿಜೆಪಿ, ಹಿಂದುತ್ವ ನಾಯಕರು ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಗುರಿಯಾಗಿಸಿಕೊಂಡಿದ್ದಾರೆ. ಬಿಜೆಪಿಯ ಹಿರಿಯ ನಾಯಕ, ಶಾಸಕ ಸಂಗೀತ್ ಸೋಮ್ ಇತ್ತೀಚೆಗೆ ಶಾರುಖ್ ಖಾನ್ ಅವರನ್ನು ದೇಶದ್ರೋಹಿ ಎಂದು ಕರೆದಿದ್ದಾರೆ. ಈ ನಡುವೆ ಅಖಿಲ ಭಾರತ ಹಿಂದೂ ಮಹಾಸಭಾದ ಆಗ್ರಾ ಜಿಲ್ಲಾ ಘಟಕದ ಅಧ್ಯಕ್ಷೆ ಮೀರಾ ಠಾಕೂರ್‌ “ಶಾರುಖ್ ಖಾನ್ ನಾಲಿಗೆಯನ್ನು ಕತ್ತರಿಸಿದವರಿಗೆ ಒಂದು ಲಕ್ಷ ರೂ. ನಗದು ಬಹುಮಾನ” ನೀಡುವುದಾಗಿ ವಿವಾದಾತ್ಮಕ ಘೋಷಣೆಯನ್ನು ಮಾಡಿದ್ದಾರೆ.

- Advertisement -

ಕಳೆದ ವರ್ಷ ಡಿಸೆಂಬರ್ 16 ರಂದು ಅಬುಧಾಬಿಯಲ್ಲಿ ನಡೆದ ಐಪಿಎಲ್ ಮಿನಿ ಹರಾಜಿನಲ್ಲಿ, ಶಾರುಖ್ ಖಾನ್ ಸಹ-ಮಾಲೀಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ಬಾಂಗ್ಲಾದೇಶದ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು 2026ರ ಸಾಲಿನ ಐಪಿಎಲ್‌ಗೆ ಖರೀದಿಸಿತ್ತು. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ ಮತ್ತು ಪ್ರಕ್ಷುಬ್ಧ ವಾತಾವರಣದ ಹಿನ್ನೆಲೆಯಲ್ಲಿ, ಬಾಂಗ್ಲಾ ಆಟಗಾರನನ್ನು ಖರೀದಿಸಿದ್ದಕ್ಕೆ ಬಿಜೆಪಿ ನಾಯಕರುಗಳು ಶಾರುಖ್ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ಐಪಿಎಲ್‌ನಲ್ಲಿ ಬಾಂಗ್ಲಾ ಆಟಗಾರ | ಶಾರುಖ್ ಬದಲಿಗೆ ಅಮಿತ್ ಶಾರನ್ನು ಪ್ರಶ್ನಿಸಿ: ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು

“‘ಬಾಂಗ್ಲಾದೇಶದಲ್ಲಿ ನಮ್ಮ ಹಿಂದೂ ಸಹೋದರರನ್ನು ಜೀವಂತವಾಗಿ ಸುಡಲಾಗುತ್ತಿದೆ ಮತ್ತು ಅವರು (ಶಾರುಖ್) ಅಲ್ಲಿಂದ ಆಟಗಾರರನ್ನು ಖರೀದಿಸುತ್ತಿದ್ದಾರೆ. ನಾವು ಅದಕ್ಕೆ ಅವಕಾಶ ನೀಡುವುದಿಲ್ಲ” ಎಂದು ಮೀರಾ ಹೇಳಿಕೊಂಡಿದ್ದಾರೆ.

ಇನ್ನು ಅಯೋಧ್ಯೆ ಮತ್ತು ಇತರ ಸ್ಥಳಗಳ ಕೆಲವು ಸ್ವಾಮೀಜಿಗಳೂ ಟೀಕಿಸಿದ್ದಾರೆ. “ಬಿಸಿಸಿಐ ನಿರ್ಧಾರ ತೆಗೆದುಕೊಳ್ಳುತ್ತದೆ ಆದರೆ ಬಾಂಗ್ಲಾದೇಶದ ಕ್ರಿಕೆಟಿಗರು ಅಲ್ಲಿನ ಹಿಂದೂಗಳ ಭದ್ರತೆಯ ವಿಷಯವನ್ನು ಎತ್ತಬೇಕು” ಎಂದು ಸ್ವಾಮೀಜಿ ಧೀರೇಂದ್ರ ಶಾಸ್ತ್ರಿ ಹೇಳಿದ್ದಾರೆ.

ಈ ನಡುವೆ ಶಾರುಖ್ ಖಾನ್ ಅವರನ್ನು ಟೀಕಿಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಫ್ರಾಂಚೈಸಿ ಮಾಲೀಕರನ್ನು ದೂಷಿಸುವ ಬದಲು, ಬಿಸಿಸಿಐ ಮತ್ತು ಐಸಿಸಿ ಅಂತಹ ನಿಯಮಗಳನ್ನು ರೂಪಿಸಲು ಏಕೆ ಅವಕಾಶ ನೀಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬಿಜೆಪಿ ಪ್ರಶ್ನಿಸಬೇಕಿತ್ತು ಎಂದಿದ್ದಾರೆ.

​ಬಿಜೆಪಿಯ ಇಬ್ಬಗೆಯ ನೀತಿಯನ್ನು ಪ್ರಶ್ನಿಸಿದ ಖರ್ಗೆ, “ಪಹಲ್ಗಾಮ್ ದಾಳಿಯ ನಂತರವೂ ಭಾರತವು ಪಾಕಿಸ್ತಾನದೊಂದಿಗೆ ಕ್ರಿಕೆಟ್ ಆಡಿದಾಗ ಬಿಜೆಪಿ ನಾಯಕರಿಗೆ ಯಾವುದೇ ಸಮಸ್ಯೆಯಾಗಲಿಲ್ಲ. ಕೋವಿಡ್ ಸಮಯದಲ್ಲಿ ಐಪಿಎಲ್ ಪಂದ್ಯಗಳನ್ನು ಇಸ್ಲಾಮಿಕ್ ರಾಷ್ಟ್ರಗಳಿಗೆ ಸ್ಥಳಾಂತರಿಸಿದಾಗ ಮತ್ತು ಅಲ್ಲಿಯೇ ಹರಾಜು ಪ್ರಕ್ರಿಯೆ ನಡೆಸಿದಾಗಲೂ ಇವರಿಗೆ ತೊಂದರೆಯಾಗಲಿಲ್ಲ,” ಎಂದೂ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...