ಬಿಹಾರ | ಬಿಜೆಪಿ ನಾಯಕ, ಉದ್ಯಮಿ ಗೋಪಾಲ್ ಖೇಮ್ಕಾಗೆ ಗುಂಡಿಕ್ಕಿ ಹತ್ಯೆ

Date:

ಬಿಹಾರದ ಪ್ರಸಿದ್ಧ ಉದ್ಯಮಿ ಮತ್ತು ಭಾರತೀಯ ಜನತಾ ಪಕ್ಷದ(ಬಿಜೆಪಿ) ನಾಯಕ ಗೋಪಾಲ್ ಖೇಮ್ಕಾ ಅವರನ್ನು ಶುಕ್ರವಾರ ರಾತ್ರಿ ಪಟನಾದ ಅವರ ಮನೆಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

- Advertisement -

ಗಾಂಧಿ ಮೈದಾನ ಪೊಲೀಸ್ ಠಾಣೆ ಪ್ರದೇಶದ ‘ಪನಾಚೆ’ ಹೋಟೆಲ್ ಬಳಿ ಈ ಘಟನೆ ನಡೆದಿದ್ದು, ಖೇಮ್ಕಾ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೋಟೆಲ್ ಪಕ್ಕದಲ್ಲಿರುವ ‘ಟ್ವಿನ್ ಟವರ್’ ಸೊಸೈಟಿಯಲ್ಲಿ ಖೇಮ್ಕಾ ವಾಸಿಸುತ್ತಿದ್ದರು. ಅಪರಾಧದ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಇದನ್ನು ಓದಿದ್ದೀರಾ? ಪಂಜಾಬಿನ ಯುವಕ ಕೆನಡಾದಲ್ಲಿ ಗುಂಡಿಕ್ಕಿ ಹತ್ಯೆ

ಖೇಮ್ಕಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆರೋಪಿಗಳು ಪರಾರಿಯಾಗಿದ್ದಾರೆ. ಅಪರಾಧ ನಡೆದ ಸ್ಥಳದಿಂದ ಒಂದು ಗುಂಡು ಮತ್ತು ಶೆಲ್ ಕೇಸಿಂಗ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ನಗರ ಕೇಂದ್ರ ಎಸ್‌ಪಿ ದೀಕ್ಷಾ, “ಜುಲೈ 4ರ ರಾತ್ರಿ 11 ಗಂಟೆ ಸುಮಾರಿಗೆ, ಗಾಂಧಿ ಮೈದಾನ ದಕ್ಷಿಣ ಪ್ರದೇಶದಿಂದ ಉದ್ಯಮಿ ಗೋಪಾಲ್ ಖೇಮ್ಕಾ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ನಮಗೆ ಮಾಹಿತಿ ಬಂದಿತ್ತು. ಮಾಹಿತಿ ಬಂದ ತಕ್ಷಣ, ಪೊಲೀಸರು ಆಸ್ಪತ್ರೆ ಮತ್ತು ಅಪರಾಧ ಸ್ಥಳಕ್ಕೆ ತಲುಪಿದರು. ಪ್ರದೇಶವನ್ನು ಸುತ್ತುವರೆದಿದ್ದು, ತನಿಖೆ ನಡೆಯುತ್ತಿದೆ. ಸಿಸಿಟಿವಿ ಪರಿಶೀಲಿಸಲಾಗುತ್ತಿದೆ. ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಬಿಜೆಪಿ ನಾಯಕ ಖೇಮ್ಕಾ ಉದ್ಯಮಿಯಾಗಿದ್ದರು. ಅವರ ಮಗ ಗುಂಜನ್ ಖೇಮ್ಕಾ ಅವರನ್ನೂ ಮೂರು ವರ್ಷಗಳ ಹಿಂದೆ ಕೊಲೆ ಮಾಡಲಾಗಿತ್ತು.

ಇನ್ನು ಪೂರ್ಣಿಯದ ಸ್ವತಂತ್ರ ಸಂಸದ ಪಪ್ಪು ಯಾದವ್ ಅಲಿಯಾಸ್ ರಾಜೇಶ್ ರಂಜನ್ ನಿನ್ನೆ ರಾತ್ರಿ ಸ್ಥಳಕ್ಕೆ ಧಾವಿಸಿದರು. ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. “ಬಿಹಾರದಲ್ಲಿ ಯಾರೂ ಸುರಕ್ಷಿತವಾಗಿಲ್ಲ. ಬಿಹಾರ ಅಪರಾಧಿಗಳಿಗೆ ಆಶ್ರಯ ತಾಣವಾಗಿದೆ. ನಿತೀಶ್ ಅವರೇ ದಯವಿಟ್ಟು ಬಿಹಾರವನ್ನು ಉಳಿಸಿ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅವಧಿ ಮೀರಿದ ಆಹಾರ ಮರುಮಾರಾಟ ಆರೋಪ: ರಿಲಯನ್ಸ್‌, ಬ್ಲಿಂಕಿಟ್‌ ಘಟಕಗಳ ವಿರುದ್ಧ ತನಿಖೆ

ಅವಧಿ ಮೀರಿದ, ಹಾಳಾದ ಹಾಗೂ ಗ್ರಾಹಕರು ತಿರಸ್ಕರಿಸಿದ ಆಹಾರ ಪದಾರ್ಥಗಳನ್ನು ನಾಶಪಡಿಸುವ...

CJPಯ ತಿರಂಗಾ ಯಾತ್ರೆಗೆ ಮುನ್ನ ಬಂಧನ; ಅಭಿಜೀತ್ ದೀಪ್ಕೆಗೆ ಷರತ್ತುಬದ್ಧ ಜಾಮೀನು

ಕನ್ನಾಟ್ ಪ್ಲೇಸ್‌ನಲ್ಲಿ ಆಯೋಜಿಸಲಾಗಿದ್ದ ‘ಲೇಹ್ರಾ ದೋ ತಿರಂಗಾ’ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ...

ಲೈಂಗಿಕ ದೌರ್ಜನ್ಯ ಖಂಡಿಸಿ ದೆಹಲಿ ಪೊಲೀಸ್ ಕೇಂದ್ರ ಕಚೇರಿಗೆ ಮಹಿಳಾ ಸಂಘಟನೆಗಳ ಮುತ್ತಿಗೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ಮುಖ್ಯ ಚುನಾವಣಾ...

ಪ್ರಜಾಪ್ರಭುತ್ವದ ಗಟ್ಟಿತನವಿರುವುದು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯ ಇರುವಲ್ಲಿ: ಸಿಎಂ ಡಿ.ಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಹೊಣೆಗಾರಿಕೆಯೇ ಬುನಾದಿಯಾಗಿದೆ. ಎಲ್ಲರೂ ಸರ್ಕಾರಕ್ಕೆ ಕುರುಡಾಗಿ ತಲೆಬಾಗುವುದೇ...