ಮಹಾರಾಷ್ಟ್ರ | ಮತದಾರರಿಗೆ ಹಣ ಹಂಚುವಾಗ ಸಿಕ್ಕಿಬಿದ್ದ ಬಿಜೆಪಿ ನಾಯಕ; ವಿಡಿಯೋ ವೈರಲ್

Date:

ನವೆಂಬರ್ 20ರಂದು ಬುಧವಾರ ಮಹಾರಾಷ್ಟ್ರ ವಿಧಾನಸಭೆಗೆ ಮತದಾನ ನಡೆಯಲಿದೆ. ಅದಕ್ಕೂ ಒಂದು ದಿನ ಮುಂಚೆ (ಮಂಗಳವಾರ) ಮತದಾರರನ್ನು ಪಕ್ಷದತ್ತ ಸೆಳೆಯಲು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ, ಮತದಾರರಿಗೆ ಹಣ ಹಂಚಿದ್ದಾರೆ ಎಂದು ಬಹುಜನ ವಿಕಾಸ್ ಅಘಾಡಿ (ಬಿವಿಎ) ಆರೋಪಿಸಿದೆ. ಮತದಾರರಿಗೆ ಹಣ ಹಂಚುವಾಗ ವಿನೋದ್ ಅವರು ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಬಿವಿಎ ಕಾರ್ಯಕರ್ತರು ಆರೋಪಿಸಿದ್ದಾರೆ. ಆದರೆ, ವಿನೋದ್‌ ಆರೋಪವನ್ನು ನಿರಾಕರಿಸಿದ್ದಾರೆ. ಹಣ ಹಂಚಿಕೆಯ ವಿಡಿಯೋ ವೈರಲ್ ಆಗಿದೆ.

- Advertisement -

“ವಸಾಯಿ-ವಿರಾರ್ ಕ್ಷೇತ್ರದಲ್ಲಿ ತಾವ್ಡೆ ಹಣ ಹಂಚಿದ್ದಾರೆ. ತಾವ್ಡೆ ಅವರ ಬಳಿಯಿದ್ದ ಬ್ಯಾಗ್‌ನಲ್ಲಿ 15 ಕೋಟಿ ರೂಪಾಯಿ ಹಣವನ್ನು ಮತದಾರರಿಗೆ ವಿತರಿಸಿರುವ ಡೈರಿ ಇತ್ತು. ಅವರು ಕ್ಷೇತ್ರಕ್ಕೆ 5 ಕೋಟಿ ರೂಪಾಯಿ ನಗದು ಜೊತೆ ಬಂದಿದ್ದಾರೆ” ಎಂದು ಬಿವಿಎ ಶಾಸಕ ಹಿತೇಂದ್ರ ಠಾಕೂರ್ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಸೋಮವಾರ ಸಂಜೆ, ಅವರನ್ನು ಬಿವಿಎ ಕಾರ್ಯಕರ್ತರು ತಡೆದು, ಘೇರಾವ್ ಹಾಕಿದ್ದಾರೆ. ಡೈರಿಯನ್ನು ವಶಕ್ಕೆ ಪಡೆದುಕೊಳ್ಳಲು ಯತ್ನಿಸಿದ್ದಾರೆ. ಆದರೆ, ನಲಸೋಪಾರದ ಹಾಲಿ ಶಾಸಕ ಕ್ಷಿತಿಜ್ ಠಾಕೂರ್ ಅವರು ಡೈರಿಯನ್ನು ಕಿತ್ತುಕೊಂಡಿದ್ದಾರೆ. ಇದೆಲ್ಲವೂ ಹೋಟೆಲ್‌ನಲ್ಲಿ ನಡೆದಿದೆ. ಆದರೆ, ಹೋಟೆಲ್‌ ತನ್ನ ಸಿಸಿಟಿವಿ ಕ್ಯಾಮೆರಾಗಳು ಕೆಲಸ ಮಾಡುತ್ತಿಲ್ಲವೆಂದು ಹೇಳಿಕೊಂಡಿದೆ. ಹಣ ವಿತರಣೆಯ ಫೂಟೆಜ್‌ಗಳನ್ನು ಮುಚ್ಚಿಹಾಕಲು ಇಂತಹ ಹೇಳಿಕೆ ನೀಡಿದೆ. ಹೋಟೆಲ್ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಬಿವಿಎ ಒತ್ತಾಯಿಸಿದೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಶಿವಸೇನೆ (ಯುಬಿಟಿ ಬಣ) ಅಧ್ಯಕ್ಷ ಉದ್ಧವ್ ಠಾಕ್ರೆ, ”ನಾನು ತುಳಜಾ ಭವಾನಿ ದೇವಿಯ ದರ್ಶನಕ್ಕಾಗಿ ವಸಾಯಿ-ವಿರಾರ್‌ಗೆ ಬಂದಿದ್ದೆ. ಆಗ ನನ್ನ ಬ್ಯಾಗ್‌ಗಳನ್ನು ಪರಿಶೀಲಿಸಲಾಯಿತು. ಆದರೆ, ಅವುಗಳಲ್ಲಿ ಏನೂ ಸಿಗಲಿಲ್ಲ. ವಿನೋದ್ ತಾವ್ಡೆ ಅವರ ಬ್ಯಾಗ್‌ಗಳಲ್ಲಿ ನಗದು ಪತ್ತೆಯಾಗಿರುವುದು ಮಾಧ್ಯಮಗಳಿಂದ ತಿಳಿದುಬಂದಿದೆ. ಇದನ್ನೆಲ್ಲ ಯಾರು ಪರಿಶೀಲಿಸಬೇಕಿತ್ತು? ಹಾಗಾಗಿ ಈ ಭ್ರಷ್ಟ ಸರ್ಕಾರ ಬೇಗ ತೊಲಗಬೇಕೆಂದು ದೇವಿಯಲ್ಲಿ ಪ್ರಾರ್ಥಿಸಿದ್ದೇನೆ” ಎಂದು ಹೇಳಿದ್ದಾರೆ.

ಆರೋಪಗಳನ್ನು ತಳ್ಳಿಹಾಕಿದ ಬಿಜೆಪಿ, “ಇದು ಆಧಾರರಹಿತ ಮತ್ತು ರಾಜಕೀಯ ಪ್ರೇರಿತ ಆರೋಪ. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿರುವ ವಿನೋದ್ ತಾವ್ಡೆ ವಾರ್ಡ್ ಮಟ್ಟದಲ್ಲಿ ಹಣ ಹಂಚುತ್ತಾರೆಯೇ? ಇಂತಹ ಆರೋಪಗಳು ಅಸಂಬದ್ಧವಾಗಿವೆ” ಎಂದು ಹೇಳಿದೆ.

ಬಿಜೆಪಿ ನಾಯಕ ಅತುಲ್ ಭಟ್ಕಳ್ಕರ್, “ಸನ್ನಿಹಿತ ಸೋಲನ್ನು ಎದುರಿಸುತ್ತಿರುವ ವಿರೋಧ ಪಕ್ಷಗಳು ಸೃಷ್ಟಿಸಿದ ಸುಳ್ಳು ಆರೋಪಗಳು ಇವು. ಇಂತಹ ಆರೋಪಗಳು ಬಿಜೆಪಿಯ ಪ್ರತಿಷ್ಠೆಯನ್ನು ಕೆಡಿಸುವ ಉದ್ದೇಶಪೂರ್ವಕ ಪ್ರಯತ್ನದ ಭಾಗವಾಗಿವೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿವಾದ: ಕುಂದಾಪುರದ ಲೇಖಕನ ಕೃತಿಗೆ ದೊರೆತ ಪ್ರಶಸ್ತಿಯ ಹಿಂದೆ ವಂಚನೆ, ಲಾಬಿ ಶಂಕೆ

ಕುಂದಾಪುರ ಮೂಲದ ಲೇಖಕ ಪ್ರದೀಪ್ ಕೆಂಚನೂರು ಅವರ ‘ನಾನಿರುವುದೆ ನಿಮಗಾಗಿ ನಾಡಿರುವುದೆ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...