ಬ್ರೇಕಿಂಗ್ ನ್ಯೂಸ್‌ | ಕೇಂದ್ರ ಸಚಿವ ಜೋಶಿ ಕುಟುಂಬದ ವಿರುದ್ಧ ಬಿಜೆಪಿ ಮುಖಂಡೆಯಿಂದ ದೂರು; FIRನಲ್ಲಿ ಅಮಿತ್ ಶಾ ಹೆಸರು ಉಲ್ಲೇಖ

Date:

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ, ಹಣ ಪಡೆದು ವಂಚಿಸಿದ್ದಾರೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಕುಟುಂಬದ ವಿರುದ್ಧ ಬಿಜೆಪಿ ಮುಖಂಡೆ ಸುನೀತಾ ಚೌಹಾಣ್ ಅವರು ದೂರು ದಾಖಲಿಸಿದ್ದಾರೆ. ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೆಸರನ್ನೂ ಉಲ್ಲೇಖಿಸಲಾಗಿದೆ.

- Advertisement -

ಬಿಜೆಪಿ ಮಾಜಿ ಶಾಸಕ ದೇವಾನಂದ್ ಸಿಂಗ್ ಚೌಹಾಣ್ ಅವರ ಪತ್ನಿ ಸುನೀತಾ ಚೌಹಾಣ್ ಅವರು ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ”ಪ್ರಲ್ಹಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯಲಕ್ಷ್ಮಿ ಜೋಶಿ ಹಾಗೂ ಗೋಪಾಲ್ ಜೋಶಿ ಅವರ ಪುತ್ರ ಅಜಯ್ ಜೋಶಿ ತಮಗೆ ವಂಚಿಸಿದ್ದಾರೆ. ಜಾತಿ ನಿಂದನೆ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

”ಗೋಪಾಲ್ ಜೋಶಿ ಅವರು ಬಿಜಾಪುರ ಜಿಲ್ಲೆಯ ಅಥಣಿಯಲ್ಲಿ ಇಂಜಿನಿಯರ್ ಆಗಿರುವ ಶೇಖರ್ ನಾಯಕ್ ಅವರ ಮೂಲಕ ತಮ್ಮನ್ನು ಸಂಪರ್ಕಿಸಿದ್ದರು. ತಮ್ಮ ಸಹೋದರ ಪ್ರಲ್ಹಾದ್ ಜೋಶಿ ಅವರು ಮೋದಿ ಮತ್ತು ಅಮಿತ್‌ ಶಾ ಅವರಿಗೆ ಆಪ್ತರಾಗಿದ್ದಾರೆ. ಹಣ ಕೊಟ್ಟರೆ, ಅಮಿತ್ ಶಾ ಅವರೊಂದಿಗೆ ಮಾತನಾಡಿ, 2024ರ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಕೊಡಿಸುತ್ತೇನೆಂದು ಗೋಪಾಲ್ ಜೋಶಿ ಹೇಳಿದ್ದರು. ಮುಂಗಡವಾಗಿ 25 ಲಕ್ಷ ರೂ. ಹಣ ಮತ್ತು 5 ಕೋಟಿ ರೂ.ಗಳ ಚೆಕ್ ಪಡೆದುಕೊಂಡಿದ್ದರು. ಆದರೆ, ಟಿಕೆಟ್ ಕೊಡಿಸದೆ ವಂಚಿಸಿದ್ದಾರೆ” ಎಂದು ದೂರುದಾರೆ ಸುನೀತಾ ಚೌಹಾಣ್ ಆರೋಪಿಸಿದ್ದಾರೆ.

”ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಹಣ ಮತ್ತು ಚೆಕ್‌ಅನ್ನು ವಾಪಸ್ ಕೇಳಲು ಹೋದಾಗ, ಚೆಕ್‌ಅನ್ನು ಮಾತ್ರವೇ ಹಿಂದಿರುಗಿಸಿದರು. ಅಲ್ಲದೆ, ಸರ್ಕಾರದಿಂದ 200 ಕೋಟಿ ರೂ. ಮೌಲ್ಯದ ಪ್ರಾಜೆಕ್ಟ್‌ ಸಿಗಲಿದೆ. ಆಗ ಎಲ್ಲ ಹಣವನ್ನೂ ಹಿಂದಿರುಗಿಸುತ್ತೇನೆ. ಅದಕ್ಕಾಗಿ, 1.75 ಕೋಟಿ ರೂ. ಹಣದ ಅಗತ್ಯವಿದೆ. ಸಹಾಯ ಮಾಡಿ – 25 ದಿನಗಳೊಳಗೆ ಹಿಂದಿರುಗಿಸುತ್ತೇನೆಂದು ಗೋಪಾಲ್ ಜೋಶಿ ಕೇಳಿದ್ದರು. ಆ ಹಣವನ್ನು ನಾವು ಹೊಂದಿಸಿ ಕೊಟ್ಟೆವು. ಆದರೆ, ಹಲವಾರು ದಿನಗಳು ಕಳೆದರೂ ಹಣವನ್ನು ಹಿಂದಿರುಗಿಸಲಿಲ್ಲ. ಅದನ್ನು ಕೇಳಲು ಹೋಗಿದ್ದಕ್ಕೆ, ಗೋಪಾಲ್ ಜೋಶಿ ಅವರ ಸಹೋದರಿ ವಿಜಯಲಕ್ಷ್ಮಿ ಜೋಶಿ ಅವರು ನಮ್ಮನ್ನು ಜಾತಿ ನಿಂದನೆ ಮಾಡಿದ್ದಾರೆ. ಅಲ್ಲದೆ, ಗೂಂಡಾಗಳನ್ನು ಕರೆಸಿ, ಬೆದರಿಕೆ ಹಾಕಿದ್ದಾರೆ” ಎಂದು ದೂರಿದ್ದಾರೆ.

ಅವರ ದೂರಿನ ಆಧಾರದ ಮೇಲೆ, ಗೋಪಾಲ್ ಜೋಶಿ, ವಿಜಯಲಕ್ಷ್ಮಿ ಜೋಶಿ ಹಾಗೂ ಅಜಯ್ ಜೋಶಿ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಈ ಮೂವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಸೆಕ್ಷನ್ 126(2), 118(1), 316(2), 318(4), 61-3(5) ಹಾಗೂ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...