ಮಮತಾ ಗಾಯದ ಬಗ್ಗೆ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಲೇವಡಿ; ಸ್ತ್ರೀದ್ವೇಷದ ಪ್ರತಿಬಿಂಬ ಎಂದ ಟಿಎಂಸಿ

Date:

Advertisements

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಗಾಯವಾಗಿರುವ ಬಗ್ಗೆ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅಪಹಾಸ್ಯ ಮಾಡಿದ್ದಾರೆ. ಅವರ ವಿರುದ್ಧ ಟಿಎಂಸಿ ಕಿಡಿಕಾರಿದೆ.

ಗುರುವಾರ ಸಂಜೆ ಬ್ಯಾನರ್ಜಿ ಅವರ ಹಣೆಗೆ ಪೆಟ್ಟಾಗಿತ್ತು. ಆಸ್ಪತ್ರೆಯಲ್ಲಿ ಗಾಯಕ್ಕೆ ಹೊಲಿಗೆ ಹಾಕಲಾಗಿತ್ತು. ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಅವರಿಗೆ ಗಾಯವಾಗಿರುವ ಚಿತ್ರ ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

ಮಮತಾ ಅವರಿಗೆ ಗಾಯವಾಗಿದ್ದ ಬಗ್ಗೆ ಪಶ್ಚಿಮ ಬಂಗಾಳದ ಖೇಜೂರಿಯಲ್ಲಿ ಮಾತನಾಡಿದ್ದ ಅಧಿಕಾರಿ, “ಟಿಎಂಸಿಯ ಪ್ರಾಬಲ್ಯ ಕಡಿಮೆಯಾಗಿದೆ ಮತ್ತು ಕುಸಿಯುತ್ತಿದೆ. ಟಿಎಂಸಿ ಪತನವು ಮೇಲಿನಿಂದ ಆರಂಭವಾಗಿದೆ. ತಳಮಟ್ಟಕ್ಕೂ ಹರಡುತ್ತದೆ” ಎಂದು ಯಾರನ್ನೂ ಹೆಸರಿಸದೆ ಲೇವಡಿ ಮಾಡಿದ್ದರು. ಅವರ ಹೇಳಿಕೆಗಳಿಗೆ ಆಡಳಿತಾರೂಢ ಟಿಎಂಸಿ ತೀವ್ರ ಖಂಡನೆಗೆ ವ್ಯಕ್ತಪಡಿಸಿದೆ. “ಈ ಹೇಳಿಕೆಗಳು ಬಿಜೆಪಿಯ ಮಹಿಳಾ ವಿರೋಧಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತವೆ” ಎಂದು ಕಿಡಿಕಾರಿದೆ.

Advertisements

“ದೇಶದ ಏಕೈಕ ಮಹಿಳಾ ಮುಖ್ಯಮಂತ್ರಿ ವಿರುದ್ಧದ ಇಂತಹ ಹೇಳಿಕೆಗಳು ಬಿಜೆಪಿಯ ಮಹಿಳಾ ವಿರೋಧಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತವೆ. ನಾವು ಅಂತಹ ಟೀಕೆಗಳನ್ನು ಖಂಡಿಸುತ್ತೇವೆ ಮತ್ತು ಕ್ಷಮೆಯಾಚಿಸಬೇಕೆಂದು ಒತ್ತಾಯಿಸುತ್ತೇವೆ” ಎಂದು ಪಶ್ಚಿಮ ಬಂಗಾಳದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಶಶಿ ಪಂಜಾ ಹೇಳಿದ್ದಾರೆ.

“ಬ್ಯಾನರ್ಜಿ ವಿರುದ್ಧದ ಮಾತಿನ ದಾಳಿಯು ಬಿಜೆಪಿಯ ಸ್ತ್ರೀದ್ವೇಷ ಮನೋಭಾವವನ್ನು ಪ್ರತಿಬಿಂಬಿಸುತ್ತದೆ” ಎಂದು ಪಶ್ಚಿಮ ಬಂಗಾಳದ ಹಣಕಾಸು ಸಚಿವ ಚಂದ್ರಿಮಾ ಭಟ್ಟಾಚಾರ್ಯ ಹೇಳಿದ್ದಾರೆ.

“ಮಹಿಳೆಯೊಬ್ಬರ ವಿರುದ್ಧ ಅಪಹಾಸ್ಯ ಮಾಡುವುದು ಕೇವಲ ಹೇಯವಲ್ಲ, ಇದು ತಿರಸ್ಕಾರದ ಸ್ತ್ರೀದ್ವೇಷವನ್ನು ಪ್ರದರ್ಶಿಸುತ್ತದೆ. ಸುವೇಂದು ಅಧಿಕಾರಿ ಅವರ ಮಾತುಗಳು ಹತಾಶೆಯಿಂದ ತುಂಬಿವೆ. ಮೂಲಭೂತ ಮಾನವ ಸಭ್ಯತೆಯೂ ಅವರಿಗಿಲ್ಲ. ಅವರು ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.

ಯಾರೋ ಹಿಂದಿನಿಂದ ತಳ್ಳಿದ್ದರಿಂದಾಗಿ ಮಮತಾ ಅವರು ಬಿದ್ದು, ಅವರಿಗೆ ಪೆಟ್ಟಾಗಿದೆ ಎಂದು ಹೇಳಲಾಗಿದೆ. ಈ ಆರೋಪದ ಬಗ್ಗೆ ತಿನಿಖೆ ನಡೆಸುವಂತೆ ಬಿಜೆಪಿ ಒತ್ತಾಯಿಸಿದೆ. ಗಾಯದ ವಿಚಾರವನ್ನು ರಾಜಕೀಯಗೊಳಿಸುವ ಅಗತ್ಯವಿಲ್ಲ ಎಂದು ಬಿಜೆಪಿಗೆ ಟಿಎಂಸಿ ತೀಕ್ಷ್ಣವಾಗಿ ಪ್ರತ್ಯುತ್ತರ ನೀಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X