ಬಿಜೆಪಿ ನಾಯಕಿ ತೇಜಸ್ವಿನಿ ಗೌಡ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮತ್ತೆ ಕಾಂಗ್ರೆಸ್‌ಗೆ ಸೇರುವ ಸಾಧ್ಯತೆ ಇದೆ.
ಬುಧವಾರ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಕೆ ಮಾಡಿದ್ದು, ರಾಜೀನಾಮೆಯನ್ನು ಹೊರಟ್ಟಿ ಅಂಗೀಕರಿಸಿದ್ದಾರೆ. ಜೂನ್‌ನಲ್ಲಿ ಪರಿಷತ್ ಸದಸ್ಯ ಸ್ಥಾನದ ಅವಧಿ ಮುಗಿಯಲಿದ್ದು, ಮೂರು ತಿಂಗಳು ಮುಂಚೆಯೇ ರಾಜೀನಾಮೆ ನೀಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಮತ್ತು ಮೈಸೂರು – ಕೊಡಗು ಟಿಕೆಟ್ ಕೈತಪ್ಪಿದ ಬೆನ್ನಲ್ಲಿಯೇ ಮುನಿಸಿಕೊಂಡು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದ ತೇಜಸ್ವಿನಿ ಅವರು ಆ ಬಳಿಕ ರಾಜಕೀಯ ಪ್ರವೇಶ ಮಾಡಿ ಜನಪ್ರತಿನಿಧಿಯಾಗಿದ್ದರು. ಕನಕಪುರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಗೆ ಸೋಲುಣಿಸಿದ್ದ ತೇಜಸ್ವಿನಿ ಗೌಡ ಮತ್ತೆ ಕಾಂಗ್ರೆಸ್‌ಗೆ ಸೇರಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.