ಬಜೆಟ್​ ಬಹಿಷ್ಕರಿಸಿ ಸದನದಿಂದ ಹೊರ ನಡೆದ ಬಿಜೆಪಿ ನಾಯಕರು

Date:

Advertisements

ರಾಜ್ಯದ ಅಭಿವೃದ್ಧಿಗೆ ಮುನ್ನೋಟ ನೀಡುವ 2024-25ನೇ ಸಾಲಿನ ರಾಜ್ಯ ಬಜೆಟ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸುವ ವೇಳೆ ಕೇಂದ್ರ ಸರ್ಕಾರದ ಅನ್ಯಾಯವನ್ನು ಕಟುವಾಗಿ ಟೀಕಿಸಿದ್ದನ್ನು ಖಂಡಿಸಿ ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದರು.

ಕೂಡಲೇ ಎದ್ದು ನಿಂತು ಸಿದ್ದರಾಮಯ್ಯ ಅವರ ಬಜೆಟ್‌ ಭಾಷಣೆಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌, “ಬಜೆಟ್​ ಅನ್ನು ಕೇಂದ್ರದ ವಿರುದ್ಧ ಟೀಕೆ ಮಾಡಲು ವೇದಿಕೆಯಾಗಿ ಬಳಸಿಕೊಳ್ಳುತ್ತೀರಾ?” ಎಂದು ಕಿಡಿ ಕಾರಿದರು.

“ಸಿದ್ದರಾಮಯ್ಯ ಅವರು 15ನೇ ಬಜೆಟ್‌ ಮಂಡಿಸುತ್ತಿದ್ದಾರೆ. ಇದು ಅವರ ದಾಖಲೆ ಬಜೆಟ್‌ ಆಗಿದ್ದರೂ ಇಂತಹ ಸಣ್ಣತನ ಪ್ರದರ್ಶನ ನಾನು ಊಹಿಸಿರಲಿಲ್ಲ” ಎಂದು ವಾಗ್ದಾಳಿ ನಡೆಸಿದರು.

Advertisements

ಬಿಜೆಪಿಯ ಎಲ್ಲ ಸದಸ್ಯರು ಆರ್‌ ಅಶೋಕ್‌ ಮಾತಿಗೆ ಧ್ವನಿಗೂಡಿಸಿ, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಬಿಜೆಪಿ ನಾಯಕರು ಬಜೆಟ್​ಗೆ ಬಹಿಷ್ಕಾರ ಹಾಕಿ ಹೊರನಡೆದರು.

ಧಿಕ್ಕಾರ ಕೂಗುತ್ತಾ ಸದನದಿಂದ ಹೊರಬಂದ ಬಿಜೆಪಿ ಶಾಸಕರು, ‘ಏನಿಲ್ಲಾ ಏನಿಲ್ಲಾ, ಬುರುಡೆ ಬುರುಡೆ’ ಎಂದು ಕೂಗಿದರು. ವಿಧಾನಸಭೆ ಪ್ರವೇಶದ್ವಾರದ ಬಾಗಿಲಿಗೆ ಬಿಜೆಪಿ ಶಾಸಕರು ಪೋಸ್ಟರ್ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಗದ್ದಲದ ವಾತಾವರಣ ಸೃಷ್ಟಿಯಾಯಿತು. ಸ್ಪೀಕರ್ ಯುಟಿ ಖಾದರ್ ಪರಿಪರಿಯಾಗಿ ಬೇಡಿಕೊಂಡರೂ ಪ್ರತಿಪಕ್ಷ ನಾಯಕರು ಆಕ್ರೋಶದ ಮಾತುಗಳನ್ನು ಕಡಿಮೆ ಮಾಡಲಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X