ಬಿಹಾರದ ಬಿಜೆಪಿ ನಾಯಕರು ಲಾಲು ಪ್ರಸಾದ್‌ಗಿಂತ ಹೆಚ್ಚು ಭ್ರಷ್ಟರು: ಪ್ರಶಾಂತ್ ಕಿಶೋರ್

Date:

ಬಿಹಾರದ ಆರೋಗ್ಯ ಇಲಾಖೆಯಲ್ಲಿ ಗಂಭೀರ ಅಕ್ರಮಗಳು ನಡೆದಿದೆ. ಬಿಹಾರದ ಬಿಜೆಪಿ ನಾಯಕರು ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್‌ಗಿಂತ ಅಧಿಕ ಭಷ್ಟರು ಎಂದು ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಶುಕ್ರವಾರ ಆರೋಪಿಸಿದ್ದಾರೆ.

- Advertisement -

ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಕಿಶೋರ್ ಬಿಹಾರದ ಮಾಜಿ ಬಿಜೆಪಿ ಅಧ್ಯಕ್ಷರೂ ಆಗಿರುವ ರಾಜ್ಯ ಆರೋಗ್ಯ ಸಚಿವ ಮಂಗಲ್ ಪಾಂಡೆ ಅವರ ಮೇಲೆ ನೇರ ವಾಗ್ದಾಳಿ ನಡೆಸಿದರು. ಹಾಗೆಯೇ ಬಿಜೆಪಿ ನಾಯಕ ದಿಲೀಪ್ ಜೈಸ್ವಾಲ್ ಮೇಲೆಯೂ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಇದನ್ನು ಓದಿದ್ದೀರಾ? ಜೆಡಿಯು ನೂತನ ಅಧ್ಯಕ್ಷರಾಗಿ ನಿತೀಶ್ ಕುಮಾರ್ ನೇಮಕ ಸಾಧ್ಯತೆ

“ರಾಜ್ಯ ಆರೋಗ್ಯ ಇಲಾಖೆಯು ಸುಮಾರು 28 ಲಕ್ಷ ರೂ. ಬೆಲೆಯ ‘1,200 ಆಂಬ್ಯುಲೆನ್ಸ್‌ಗಳಿಗೆ ಆರ್ಡರ್ ಮಾಡಿದೆ. ಆದರೆ ಇದರ ಬೆಲೆಯು ಒಡಿಶಾ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳು ಪಾವತಿಸುವ ಮೊತ್ತಕ್ಕಿಂತ ಎರಡು ಪಟ್ಟು ಅಧಿಕವಾಗಿದೆ. ಕೋವಿಡ್ ಸಾಂಕ್ರಾಮಿಕ ರೋಗದ ಮಧ್ಯೆ, ಪಾಂಡೆ ದೆಹಲಿಯಲ್ಲಿ ತನ್ನ ಪತ್ನಿಯ ಹೆಸರಿನಲ್ಲಿ ಫ್ಲಾಟ್ ಖರೀದಿಸಿದ್ದರು. ಜೈಸ್ವಾಲ್ ಈ ವ್ಯವಹಾರದಲ್ಲಿ ಅವರಿಗೆ ಸಹಾಯ ಮಾಡಿದ್ದರು” ಎಂದು ಪ್ರಶಾಂತ್ ಕಿಶೋರ್ ದೂರಿದ್ದಾರೆ.

“ಜೈಸ್ವಾಲ್ ದೊಡ್ಡ ಪಾಲನ್ನು ಹೊಂದಿರುವ ಕಿಶನ್‌ಗಂಜ್‌ನಲ್ಲಿರುವ ವೈದ್ಯಕೀಯ ಕಾಲೇಜಿಗೆ ಡೀಮ್ಡ್ ವಿಶ್ವವಿದ್ಯಾಲಯದ ಸ್ಥಾನಮಾನವನ್ನು ನೀಡುವ ಮೂಲಕ ಪಾಂಡೆ ತಮ್ಮ ಕೃತಜ್ಞತೆಯನ್ನು ತೋರಿಸಿದ್ದಾರೆ. ಜೈಸ್ವಾಲ್ 2019ರ ಆಗಸ್ಟ್ 6ರಂದು ಪಾಂಡೆ ಅವರ ತಂದೆಯ ಖಾತೆಗೆ 25 ಲಕ್ಷ ರೂ.ಗಳನ್ನು ವರ್ಗಾಯಿಸಿದ್ದಾರೆ. ಆ ಹಣವನ್ನು ಆಗಿನ ಆರೋಗ್ಯ ಸಚಿವರ ಪತ್ನಿಯ ಹೆಸರಿನಲ್ಲಿ ಫ್ಲಾಟ್ ಖರೀದಿಸಲು ಬಳಸಲಾಗಿದೆ. ದೆಹಲಿಯ ದ್ವಾರಕಾದಲ್ಲಿ ಖರೀದಿಸಿದ ಫ್ಲಾಟ್‌ನ ದಾಖಲೆಯಲ್ಲಿ ಜೈಸ್ವಾಲ್ ಸಾಕ್ಷಿಯಾಗಿ ಸಹಿ ಮಾಡಿದ್ದಾರೆ” ಎಂದು ಕಿಶೋರ್ ಆರೋಪಿಸಿದ್ದಾರೆ.

ಪಾಂಡೆ ಜೈಸ್ವಾಲ್ ಅವರಿಂದ ಈ ಮೊತ್ತವನ್ನು ಸಾಲವಾಗಿ ಪಡೆದಿದ್ದರೂ ಸಹ, 2020ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ಇದರ ಉಲ್ಲೇಖ ಏಕೆ ಮಾಡಿಲ್ಲ ಎಂದು ಕಿಶೋರ್ ಪ್ರಶ್ನಿಸಿದರು.

“ಬಿಜೆಪಿಗರು ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರಿಗೆ ಮೇವು ಹಗರಣ, ಹೋಟೆಲ್‌ಗಳಿಗೆ ಭೂಮಿ ಮತ್ತು ಉದ್ಯೋಗಗಳಿಗೆ ಭೂಮಿ ಮುಂತಾದ ರೈಲ್ವೆ ಹಗರಣಗಳಲ್ಲಿ ಭಾಗಿಯಾದ ಆರೋಪದ ಮೇಲೆ ದಾಳಿ ನಡೆಸಲು ಹೆಚ್ಚು ಇಷ್ಟಪಡುವ ಬಿಹಾರದ ಬಿಜೆಪಿ ನಾಯಕರು ತಾವು ಕಳಂಕರಹಿತರು ಎಂದು ಹೇಳಿಕೊಳ್ಳುತ್ತಾರೆ. ಆದರೆ ವಾಸ್ತವದಲ್ಲಿ ಅವರು ಲಾಲು ಪ್ರಸಾದ್‌ಗಿಂತ ಹೆಚ್ಚು ಭ್ರಷ್ಟರು” ಎಂದು ದೂರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಶಕ್ತಿಯಿಂದ ಶೀಘ್ರದಲ್ಲೇ ದೊಡ್ಡ ಬದಲಾವಣೆಯಾಗಲಿದೆ: ಅಂಬೇಡ್ಕರ್‌ ಮರಿಮೊಮ್ಮಗ ಅಮನ್‌

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯಲ್ಲಿ ನಡೆಯುತ್ತಿರುವ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಅಘೋಷಿತ ತುರ್ತು ಪರಿಸ್ಥಿತಿ: ಪ್ರತಿಭಟನಾಕಾರರ ಬಿಡುಗಡೆ ಮಾಡದಿದ್ದರೆ ಉಪವಾಸ; ವಾಂಗ್‌ಚುಕ್ ಎಚ್ಚರಿಕೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವಿವಿಧ ನಾಯಕರು...