ಶಿವಮೊಗ್ಗ | ಕೆ ಎಸ್ ಈಶ್ವರಪ್ಪ ಮನವೊಲಿಸಲು ಬಿಜೆಪಿ ನಾಯಕರ ಹರಸಾಹಸ: ಸಂಧಾನ ವಿಫಲ

Date:

ತನ್ನ ಪುತ್ರ ಕೆ ಇ ಕಾಂತೇಶ್​ಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಬಳಿಕ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಂಡಾಯ ಸ್ಪರ್ಧೆ ಮಾಡುವುದಾಗಿ ಹೇಳಿರುವ ಮಾಜಿ ಉಪಮುಖ್ಯಮಂತ್ರಿ ಕೆ ಎಸ್‌ ಈಶ್ವರಪ್ಪ ಅವರ ಮನವೊಲಿಸಲು ಬಿಜೆಪಿ ನಾಯಕರು ನಿರಂತರ ಪ್ರಯತ್ನಿಸುತ್ತಿದ್ದು, ವಿಫಲರಾಗಿದ್ದಾರೆ.

- Advertisement -

“ನನ್ನ ಮಗನಿಗೆ ಟಿಕೆಟ್ ನೀಡುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ” ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಆರೋಪಿಸಿರುವ ಈಶ್ವರಪ್ಪ, ಈಗ ಯಡಿಯೂರಪ್ಪರ ಪುತ್ರ ಬಿ ವೈ ರಾಘವೇಂದ್ರ ವಿರುದ್ಧ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಸ್ಪರ್ಧೆಗೆ ಸಜ್ಜಾಗಿದ್ದಾರೆ. ರಾಘವೇಂದ್ರ ಅವರ ಸೋಲಿನ ಭೀತಿ ಈಗ ಬಿಜೆಪಿಗೆ ಎದುರಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ? ಲೋಕಸಭೆ ಚುನಾವಣೆ | ಬಿಎಸ್‌ವೈ ಕುಟುಂಬದ ವಿರುದ್ಧ ಅಖಾಡಕ್ಕಿಳಿದ ಈಶ್ವರಪ್ಪ

ಭಾನುವಾರ ಬೆಳಗ್ಗೆಯೇ ಬಿಜೆಪಿ ನಾಯಕರುಗಳು ಈಶ್ವರಪ್ಪ ಮನೆಗೆ ಧಾವಿಸಿದ್ದಾರೆ. ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್, ಡಿಎಸ್‌ ಅರುಣ್ ಹೈಕಮಾಂಡ್ ಸೂಚನೆಯ ಮೇರೆಗೆ ಈಶ್ವರಪ್ಪ ಮನೆಗೆ ಆಗಮಿಸಿದ್ದು, ಮನವೊಲಿಸಲು ಸಾಧ್ಯವಾಗದೆ ವಾಪಸ್ ಹೊರಟಿದ್ದಾರೆ.

ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ನಿವಾಸದಲ್ಲಿ ಬಿಜೆಪಿ ನಾಯಕರುಗಳು ಈಶ್ವರಪ್ಪರ ಜೊತೆ ಸುಮಾರು ಒಂದು ಗಂಟೆಗಳ ಕಾಲ ಮಾತುಕತೆ ನಡೆಸಿ ಮನವೊಲಿಸುವ ಯತ್ನವನ್ನು ಮಾಡಿದ್ದಾರೆ. ಜೊತೆಗೆ ಪ್ರಧಾನಿ ಮೋದಿ ಆಗಮಿಸಲಿರುವ ಸಮಾವೇಶಕ್ಕೆ ಆಹ್ವಾನವನ್ನೂ ನೀಡಿದ್ದಾರೆ. ಆದರೆ ಈಶ್ವರಪ್ಪ ಮಾತ್ರ ಸಂಧಾನಕ್ಕೆ ಮಣಿಯದ ಕಾರಣ ಬಿಜೆಪಿ ನಾಯಕರು ವಾಪಸ್ ಮರಳಿರುವುದಾಗಿ ತಿಳಿದುಬಂದಿದೆ.

ಈಶ್ವರಪ್ಪ ಶನಿವಾರ ಸಾಗರ ಬಳಿಯ ವರದಾಪುರದ ಶ್ರೀಧರ ಆಶ್ರಮಕ್ಕೆ ಭೇಟಿ ನೀಡಿದ್ದು ಬಳಿಕ ಲೋಕಸಭೆ ಚುನಾವಣೆಗೆ ಪ್ರಚಾರ ಶುರು ಮಾಡಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಚುನಾವಣಾ ಪ್ರಚಾರಕ್ಕಾಗಿ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಈ ನಡುವೆ ಭಾನುವಾರ ಬಿಜೆಪಿ ನಾಯಕರುಗಳು ಈಶ್ವರಪ್ಪರ ಮನವೊಲಿಸುವ ಯತ್ನ ಮಾಡಿದರು.

ಇದನ್ನು ಓದಿದ್ದೀರಾ? ಗುಜರಾತ್ | ಹಾಸ್ಟೆಲ್‌ನಲ್ಲಿ ನಮಾಝ್ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳ ಮೇಲೆ ಗುಂಪಿನಿಂದ ಹಲ್ಲೆ; ನೋಡುತ್ತಾ ನಿಂತ ಪೊಲೀಸರು!

ಇನ್ನೊಂದೆಡೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಭೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಇನ್ನು “ಈಶ್ವರಪ್ಪ ತನ್ನ ಪುತ್ರನಿಗೆ ಟಿಕೆಟ್ ನೀಡಿಲ್ಲ ಎಂಬ ಸಿಟ್ಟಲ್ಲಿದ್ದಾರೆ. ಚುನಾವಣೆಗೆ ಇನ್ನೂ ತುಂಬಾ ದಿನ ಇದೆ. ಅಷ್ಟರೊಳಗೆ ಬಂಡಾಯ ಶಮನವಾಗಲಿದೆ. ಎಲ್ಲವೂ ಸರಿಯಾಗಲಿದೆ” ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...