ಗೆದ್ದಾಗ ಅಬ್ಬರಿಸುವ, ಸೋತಾಗ ಗೋಳಾಡುವ ಬಿಜೆಪಿ: ಜೈರಾಮ್‌ ರಮೇಶ್

Date:

Advertisements
  • 1952ರಿಂದ ಮೊದಲ ಬಾರಿಗೆ ಕರ್ನಾಟಕದಲ್ಲಿ ಅಧಿವೇಶನದಲ್ಲಿ ಪ್ರತಿಪಕ್ಷದ ನಾಯಕನಿಲ್ಲ
  • ಜುಲೈ 20 ರಿಂದ ಸಂಸತ್ತಿನ ಲೋಕಸಭೆ ಮತ್ತು ರಾಜ್ಯಸಭೆ ಅಧಿವೇಶನ ಆರಂಭ

ಕರ್ನಾಟಕದಲ್ಲಿ ಚುನಾಯಿತ ಸರ್ಕಾರ ರಚನೆಯಾಗಿ ಒಂದು ತಿಂಗಳು ಕಳೆದರೂ ಪ್ರತಿಪಕ್ಷವಾಗಿರುವ ಬಿಜೆಪಿ ತನ್ನ ಶಾಸಕಾಂಗ ಪಕ್ಷದ ನಾಯಕನನ್ನು ಘೋಷಣೆ ಮಾಡದೇ ಇರುವ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್‌ ರಮೇಶ್‌ ಅವರು ಸೋಮವಾರ (ಜುಲೈ 3) ವ್ಯಂಗ್ಯವಾಡಿದ್ದು ಬಿಜೆಪಿಯನ್ನು ಟೀಕಿಸಿದ್ದಾರೆ.

ಕರ್ನಾಟಕದಲ್ಲಿ ಈಗಾಗಲೇ ವಿಧಾನ ಮಂಡಲ ಅಧಿವೇಶನ ಆರಂಭವಾಗಿದೆ. ಆದರೆ ಬಿಜೆಪಿ ಇನ್ನೂ ಶಾಸಕಾಂಗ ಪಕ್ಷದ ನಾಯಕನನ್ನು ಆರಿಸಿಲ್ಲ. ಇದನ್ನು ಜೈರಾಮ್‌ ರಮೇಶ್‌ ಅವರು ಪ್ರಶ್ನಿಸಿದ್ದಾರೆ.

ಜೈರಾಮ್‌ ರಮೇಶ್‌ ಅವರು ಈ ಕುರಿತು ಟ್ವೀಟ್‌ ಮಾಡಿದ್ದು, “ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನ ಇಂದಿನಿಂದ ಆರಂಭಗೊಂಡಿದ್ದು 1952ರ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ಮತ್ತು ರಾಷ್ಟ್ರದಲ್ಲಿ ಪ್ರಮುಖ ಪ್ರತಿಪಕ್ಷವಿಲ್ಲದೆ ಅಧಿವೇಶನ ಆರಂಭಗೊಂಡಿದೆ. ಈ ಹಿನ್ನೆಲೆ ಕರ್ನಾಟಕದಲ್ಲಿ ಬಿಜೆಪಿಯು ತನ್ನ ಶಾಸಕಾಂಗ ಪಕ್ಷದ ನಾಯಕನನ್ನು ಘೋಷಿಸಬೇಕಿದೆ. ಈ ಬಿಜೆಪಿಯು ಗೆದ್ದಾಗ ಅಬ್ಬರಿಸುತ್ತದೆ. ಸೋತಾಗ ಕುಸಿದು ಗೋಳಾಡುತ್ತದೆ” ಎಂದು ಕುಟುಕಿದ್ದಾರೆ.

Advertisements

ಕರ್ನಾಟಕ ವಿಧಾನ ಮಂಡಲದ ಜಂಟಿ ಅಧಿವೇಶನವು ಸೋಮವಾರ ಆರಂಭಗೊಂಡಿದ್ದು, 10 ದಿನಗಳವರೆಗೆ ನಡೆಯಲಿದೆ. ಸಂಸತ್ತಿನ ಮುಂಗಾರು ಅಧಿವೇಶನವು ಜುಲೈ 20 ರಿಂದ ಆರಂಭವಾಗಲಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ್ದ ಐದು ‘ಗ್ಯಾರಂಟಿ’ಗಳ ಅನುಷ್ಠಾನದಲ್ಲಿನ ಗೊಂದಲ, ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು (ಮತಾಂತರ ನಿಷೇಧ) ಕಾಯ್ದೆ ರದ್ದತಿಗೆ ಮಸೂದೆ ಮಂಡನೆ ಮತ್ತಿತರ ವಿಚಾರಗಳು ಉಭಯ ಸದನಗಳಲ್ಲಿ ಚರ್ಚೆಯಾಗಲಿವೆ ಎಂದು ವರದಿಯಾಗಿದೆ.

ಪ್ರತಿಪಕ್ಷದ ನಾಯಕನ ಆಯ್ಕೆ ಸಂಬಂಧ ಕೇಂದ್ರದ ವೀಕ್ಷಕರಾಗಿ ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವೆ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ನೇಮಕ ಮಾಡಿದ್ದಾರೆ. ಈ ಬೆನ್ನಲ್ಲೇ ಜೈರಾಮ್‌ ರಮೇಶ್‌ ಅವರು ಬಿಜೆಪಿಯನ್ನು ಟೀಕಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ ಏಕನಾಥ್‌ ಶಿಂಧೆಗೆ ಇಂದಿನಿಂದ ಕಷ್ಟದ ದಿನಗಳು ಶುರು: ಸಂಜಯ್ ರಾವುತ್

ಮೇ 10 ರಂದು ನಡೆದಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಹುಮತಗಳಿಂದ ಕಾಂಗ್ರೆಸ್ ಜಯಿಸಿ ಸರ್ಕಾರ ರಚಿಸಿದೆ. ಎರಡನೇ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದ್ದು ಪ್ರಮುಖ ಪ್ರತಿಪಕ್ಷವಾಗಿದೆ.

ಜೈರಾಮ್‌ ರಮೇಶ್‌ ಸೇರಿ ಅನೇಕ ನಾಯಕರು ಸಂಸತ್ತಿನ ಅಧಿವೇಶನದಲ್ಲಿ ಮಣಿಪುರ ಹಿಂಸಾಚಾರ ಸೇರಿ ಅನೇಕ ವಿಷಯಗಳಲ್ಲಿ ಬಿಜೆಪಿಯನ್ನು ಕಟ್ಟಿಹಾಕಲು ಸಿದ್ಧತೆ ನಡೆಸಿದ್ದಾರೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X