ಬಿಜೆಪಿ ಸಭೆ | ಶಾಸಕರಿಗೆ ಲೋಕಸಭೆ ಚುನಾವಣೆಯ ಗುರಿ; ಅಂತಿಮವಾಗದ ವಿಪಕ್ಷ ನಾಯಕ ಆಯ್ಕೆ

Date:

  • ಲೋಕಸಭೆ ಚುನಾವಣೆ ತಯಾರಿ; ಜನಪ್ರತಿನಿಧಿಗಳ ಸಭೆ ನಡೆಸಿದ ಬಿಜೆಪಿ
  • ನೂತನ ಶಾಸಕರುಗಳಿಗೆ ಜವಾಬ್ದಾರಿ ಹಂಚಿದ ರಾಜ್ಯ ಬಿಜೆಪಿ ಪ್ರಮುಖರು

ಲೋಕಸಭೆ ಚುನಾವಣೆಗೆ ಶಾಸಕರಿಗೆ ಗುರಿ ನೀಡುವ ಕುರಿತು ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ನೂತನ ಶಾಸಕರ ಅಭಿನಂದನಾ ಸಮಾರಂಭ ಹಾಗೂ ಸಭೆಯ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನೂತನ ಶಾಸಕರಿಗೆ ಅಭಿನಂದನೆ ಸಲ್ಲಿಸಿ ಹೊಸ ಜವಾಬ್ದಾರಿಗಳನ್ನು ಹೊರಿಸಲಾಗಿದೆ. ಹಾಗೆಯೇ ವಿಧಾನಾಸಭೆ ಚುನಾವಣಾ ಸಂದರ್ಭದಲ್ಲಿ ಏನೆಲ್ಲ ಮಾಡಬಹುದಿತ್ತು ಎನ್ನುವುದರ ಬಗೆಗೂ ಪರಾಮರ್ಶೆ ನಡೆಯಿತು ಎಂದು ಹೇಳಿದರು.

ಸಂಸತ್ ಚುನಾವಣೆಗೆ ಎದುರು ನೋಡುತ್ತಿರುವ ಹೊತ್ತಿನಲ್ಲಿ, 9 ವರ್ಷ ಪೂರೈಸಿರುವ ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಏನೆಲ್ಲ ಕ್ರಮ ಕೈಗೊಳ್ಳಬೇಕು ಎನ್ನುವುದರ ಕುರಿತಂತೆ ಚರ್ಚೆ ಮಾಡಲಾಗಿದೆ ಎಂದರು.ಬಿಜೆಪಿ ಸಭೆ

ಈ ಸುದ್ದಿ ಓದಿದ್ದೀರಾ?:ಈ ವರ್ಷವೇ ಪಠ್ಯ ಪರಿಷ್ಕರಣೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಇದೇ ವೇಳೆ ವಿಧಾನಸಭೆ ಪ್ರತಿ ಪಕ್ಷದ ನಾಯಕನ ಆಯ್ಕೆ ಕುರಿತಾಗಿನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ, ಇಂದಿನ ಸಭೆಯಲ್ಲಿ ಈ ವಿಚಾರ ಚರ್ಚೆಯಾಗಿಲ್ಲ, ಆದರೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಶಾಸಕರ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿತೀಶ್ ಪ್ರಯಾಣಕ್ಕೆ ಸಂಚಾರ ತಡೆ; ಟ್ರಾಫಿಕ್‌ನಲ್ಲಿ ಸಿಲುಕಿದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಮಗು

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಯಾಣಕ್ಕಾಗಿ ಪೊಲೀಸರು ರಸ್ತೆಯಲ್ಲಿ ಇತರ ವಾಹನ...

ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರುಪರಿಶೀಲನಾ ಅರ್ಜಿ ಸಲ್ಲಿಕೆ: ಸಿದ್ದರಾಮಯ್ಯ

ಕಾವೇರಿ ನೀರು ಬಿಡುವ ಆದೇಶಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ...

‘ಒದೆ ತಿಂದ ಕಳ್ಳನಿಗೆ ಕೊನೆಗೆ ಬುದ್ಧಿ ಬಂತಂತೆ’ ಇದು ರಾಜ್ಯ ಸರ್ಕಾರದ ಪರಿಸ್ಥಿತಿ: ಈಶ್ವರಪ್ಪ ಲೇವಡಿ

ಡಿಕೆ ಶಿವಕುಮಾರ್‌ ಅವರ ಕುತಂತ್ರದಿಂದ ರಾಜ್ಯದ ಜನರಿಗೆ ಸಮಸ್ಯೆ ನೀರು ಬಿಡುವುದಕ್ಕಿಂತ ಮೊದಲೇ...

ದಾವಣಗೆರೆ | ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ : ದೂರು ದಾಖಲು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು...