‘ಆಪರೇಷನ್ ಪಶ್ಚಿಮ ಬಂಗಾಳ’ಕ್ಕೆ ಕರೆ ನೀಡಿ ‘ಸಿಂಧೂರ’ ವಿವಾದ ಸೃಷ್ಟಿಸಿದ ಕೇಂದ್ರ ಸಚಿವ, ಬಿಜೆಪಿ ಅಧ್ಯಕ್ಷ

Date:

ಬಿಜೆಪಿ ಸಚಿವ ಸುಕಾಂತ ಮಜುಂದಾರ್ ‘ಆಪರೇಷನ್ ಪಶ್ಚಿಮ ಬಂಗಾಳ’ಕ್ಕೆ ಕರೆ ನೀಡುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. “ಆಪರೇಷನ್ ಸಿಂಧೂರದಂತೆಯೇ, ನಾವು ಬಿಜೆಪಿ ಸೈನಿಕರು ಈಗ ಆಪರೇಷನ್ ಪಶ್ಚಿಮ ಬಂಗಾಳವನ್ನು ನಡೆಸಿ ಟಿಎಂಸಿಯನ್ನು ಹೊಡೆದುರುಳಿಸುತ್ತೇವೆ” ಎಂದು ಹೇಳಿಕೊಂಡಿದ್ದಾರೆ.

- Advertisement -

ಪಶ್ಚಿಮ ಬಂಗಾಳದ ಅಲಿಪುರ್ದೂರ್‌ನಲ್ಲಿ ನಡೆದ ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣಕ್ಕೂ ಮುನ್ನ ಸುಕಾಂತ ಮಜುಂದಾರ್ ಆಡಳಿತಾರೂಢ ತೃಣಮೂಲ ಕಾಂಗ್ರೆಸ್(ಟಿಎಂಸಿ) ಅನ್ನು ಅಧಿಕಾರದಿಂದ ಕಿತ್ತೊಗೆಯುವ ಗುರಿಯನ್ನು ಹೊಂದಿರುವ ಆಪರೇಷನ್ ಪಶ್ಚಿಮ ಬಂಗಾಳಕ್ಕೆ ಕರೆ ನೀಡಿದ್ದಾರೆ. ಈ ಹೇಳಿಕೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯ ಯಶಸ್ಸು ಭಾರತೀಯ ಸೈನ್ಯಕ್ಕೆ ಸಲ್ಲಬೇಕು: ಸಿಎಂ ಸಿದ್ದರಾಮಯ್ಯ

“ಪ್ರಧಾನಿ ಮೋದಿ ನಾಯಕತ್ವದಲ್ಲಿ ಬಿಜೆಪಿ ಕಾರ್ಯಕರ್ತರು ‘ಆಪರೇಷನ್ ಸಿಂಧೂರ’ದಂತೆಯೇ ‘ಆಪರೇಷನ್ ಪಶ್ಚಿಮ ಬಂಗಾಳ’ವನ್ನು ನಡೆಸುತ್ತಾರೆ” ಎಂದು ಹೇಳಿದ್ದಾರೆ. ಟಿಎಂಸಿ ಗೂಂಡಾಗಳ ಕೈಯಲ್ಲಿ ಹಲವು ಬಿಜೆಪಿ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎನ್ನಲಾದ ಈ ಹಿಂದಿನ ಘಟನೆಗಳನ್ನು ಉಲ್ಲೇಖಿಸಿ ಈ ಹೇಳಿಕೆ ನೀಡಿದ್ದಾರೆ.

“ಕಾಶ್ಮೀರದಲ್ಲಿ, ಪಾಕಿಸ್ತಾನವು ತಾಯಂದಿರು ಮತ್ತು ಸಹೋದರಿಯರ ಹಣೆಯ ಮೇಲಿನ ಸಿಂಧೂರವನ್ನು ಅಳಿಸಿಹಾಕಿತು. ನರೇಂದ್ರ ಮೋದಿ ಅದಕ್ಕೆ ಪ್ರತೀಕಾರ ತೀರಿಸಿಕೊಂಡರು. ಆಪರೇಷನ್ ಸಿಂಧೂರದಂತೆಯೇ, ನಾವು ಬಿಜೆಪಿ ಸೈನಿಕರು ಈಗ ಆಪರೇಷನ್ ಪಶ್ಚಿಮ ಬಂಗಾಳವನ್ನು ನಡೆಸಿ ಟಿಎಂಸಿಯನ್ನು ಉರುಳಿಸುತ್ತೇವೆ. ಟಿಎಂಸಿಯನ್ನು ಗುಡಿಸಿ ಬಂಗಾಳ ಕೊಲ್ಲಿಗೆ ಎಸೆಯಲು ಬಿಜೆಪಿ ಸಿದ್ದ” ಎಂದು ಹಿಂಸಾಚಾರಕ್ಕೆ ಕರೆ ನೀಡಿದ್ದಾರೆ.

ಇನ್ನು ಇದೇ ಸಂದರ್ಭದಲ್ಲಿ ಕಾಶ್ಮೀರ ಮತ್ತು ಮುರ್ಷಿದಾಬಾದ್ ಈಗ ಒಂದಾಗಿವೆ ಎಂಬ ವಿವಾದಾತ್ಮಕ ಹೇಳಿಕೆಯನ್ನೂ ನೀಡಿದ್ದಾರೆ. “ನಾನು ಇತ್ತೀಚೆಗೆ ಮುರ್ಷಿದಾಬಾದ್‌ಗೆ ಭೇಟಿ ನೀಡಿದಾಗ ಮನೆಗಳು ಸುಟ್ಟುಹೋಗಿರುವುದನ್ನು ನೋಡಿದೆ. ಸಿಂಧೂರ ಮತ್ತು ತುಳಸಿ ಮಾಲೆ ಧರಿಸಿರುವುದು ಅವರ ತಪ್ಪಾಗಿದೆ. ಕಾಶ್ಮೀರ ಮತ್ತು ಮುರ್ಷಿದಾಬಾದ್ ಈಗ ಒಂದಾಗಿವೆ” ಎಂದಿದ್ದಾರೆ.

ಇದನ್ನು ಓದಿದ್ದೀರಾ? ಪಾಕಿಸ್ತಾನಿ ಸೇನೆಯ ಪ್ರಧಾನ ಕಚೇರಿವರೆಗೂ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಮುಟ್ಟಿದೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್

“2026ರಲ್ಲಿ ಮಮತಾ ಬ್ಯಾನರ್ಜಿ ಸರ್ಕಾರವನ್ನು ಬೇರುಸಹಿತ ಕಿತ್ತು ಬಂಗಾಳಕೊಲ್ಲಿಯಲ್ಲಿ ಎಸೆಯಲು ನಾವು ಸಿದ್ಧರಾಗಿರಬೇಕು. ಅಂತಿಮ ಯುದ್ಧಕ್ಕೆ ಸಜ್ಜಾಗಿ” ಎಂದು ಕಾರ್ಯಕರ್ತರಿಗೆ ತಿಳಿಸಿದ್ದಾರೆ.

ಈ ಹೇಳಿಕೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟೀಕಿಸಿದ್ದಾರೆ. “ಆಪರೇಷನ್ ಬಂಗಾಳದ ಬಗ್ಗೆ ಮಾತನಾಡುವುದಾದರೆ ನಾಳೆಯೇ ಚುನಾವಣೆ ನಡೆಸುವ ಸವಾಲು ನಾನು ಅವರಿಗೆ ಹಾಕುತ್ತೇನೆ. ಎಲ್ಲಾ ಕೇಂದ್ರ ಸಂಸ್ಥೆಗಳು ನಿಮ್ಮ ಕೈಯಲ್ಲೇ ಇದೆ. ನಾವು ಚುನಾವಣೆಗೆ ಸಿದ್ಧರಿದ್ದೇವೆ” ಎಂದು ಮಮತಾ ಬ್ಯಾನರ್ಜಿ ಸುದ್ದಿಗಾರರಿಗೆ ತಿಳಿಸಿದರು.

ಮುರ್ಷಿದಾಬಾದ್‌ನಲ್ಲಿ ಇತ್ತೀಚೆಗೆ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧವಾಗಿ ನಡೆದ ಪ್ರತಿಭಟನೆ ವೇಳೆ ಕೋಮು ಗಲಭೆ ನಡೆದಿದೆ. ಈ ಹಿಂಸಾಚಾರದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 150ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...