‘ದಲಿತ ಅಧಿಕಾರಿ’ಯನ್ನು ಬದಲಿಸಿ ಎಂದು ಚುನಾವಣಾಧಿಕಾರಿಗೆ ಅಧಿಕೃತ ಪತ್ರ ಬರೆಯುವ ಮೂಲಕ ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ದಲಿತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
“ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬೆಂಗಳೂರಿನ ನಂದಿನಿ ಲೇಔಟ್‌ನ ಪೊಲೀಸ್ ಇನ್ಸ್‌ಪೆಕ್ಟರ್ ಲಕ್ಷ್ಮಣ್ ಅವರು ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೇ ಇವರು ಪರಿಶಿಷ್ಟ ಜಾತಿಯ ಸಮುದಾಯಕ್ಕೆ ಸೇರಿದವರು. ಕಾಂಗ್ರೆಸ್ ಪಕ್ಷದ ಬಗ್ಗೆ ‘ಸಾಫ್ಟ್ ಕಾರ್ನರ್’ ಹೊಂದಿದ್ದು, ಇತರರನ್ನು ಗುರಿಯಾಗಿಸಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ, ಅವರ ವಿರುದ್ಧ ಅಗತ್ಯ ಕ್ರಮ ಜರುಗಿಸಿ” ಎಂದು ಆರೋಪಿಸಿ ಚುನಾವಣಾಧಿಕಾರಿಗೆ ಅಧಿಕೃತ ಪತ್ರ ಬರೆದಿದ್ದಾರೆ.

ದಲಿತ ಸಮುದಾಯದ ಅಧಿಕಾರಿ ಎಂದು ಉಲ್ಲೇಖಿಸಿ ಮುನಿರತ್ನ ಬರೆದಿರುವ ಪತ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ದಲಿತ ಮುಖಂಡ ಹಾಗೂ ಒಳಮೀಸಲಾತಿ ಹೋರಾಟಗಾರ ಅಂಬಣ್ಣ ಅರೋಳಿಕರ್, “ಬಿಜೆಪಿ ಶಾಸಕ ಮುನಿರತ್ನ ಅವರದ್ದು ಮನುವಾದ ಹಾಗೂ ಜಾತಿವಾದದ ಮನಸ್ಥಿತಿಯ ಪ್ರತಿರೂಪ ಇದು. ಆಯಕಟ್ಟಿನ ಹುದ್ದೆಯಲ್ಲಿರುವ ಎಸ್‌ಸಿ, ಎಸ್‌ಟಿ ಅಧಿಕಾರಿಗಳನ್ನು ಎತ್ತಂಗಡಿ ಮಾಡಲು ನೀಡಿರುವ ದೂರು ಇದಕ್ಕೆ ಸಾಕ್ಷಿ. ಈ ರೀತಿಯ ಜಾತಿವಾದಿ ಮನಸ್ಥಿತಿಯನ್ನು ಹೊಂದಿರುವ ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.
ಶಾಸಕ ಮುನಿರತ್ನ ವಿರುದ್ಧ ಕಿಡ್ನಾಪ್ ಆರೋಪ: ಎಫ್‌ಐಆರ್ ದಾಖಲು
ಕಾಂಗ್ರೆಸ್ ಕಾರ್ಯಕರ್ತನನ್ನು ಬಿಜೆಪಿಗೆ ಬೆದರಿಸಿ ಸೇರ್ಪಡೆಗೊಳಿಸಿದ್ದಾರೆ ಎಂದು ಆರೋಪಿಸಿ ಆರ್ ಆರ್ ನಗರ ಬಿಜೆಪಿ ಶಾಸಕ ಎಂ.ಮುನಿರತ್ನ ಹಾಗೂ ಇತರರ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಲಕ್ಷ್ಮಿ ದೇವಿನಗರದ ಪೇಂಟರ್ ಸ್ಯಾಮ್ಯುಯೆಲ್ ಎಂಬವರು ಆರೋಪಿಸಿದ್ದು, ಸಂತ್ರಸ್ತ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಮುನಿರತ್ನ ಮತ್ತು ಆತನ ಬೆಂಬಲಿಗರಾದ ಸುರೇಶ್, ವಸಂತ್, ವಾಸಿಂ ಮತ್ತು ಸೀನಾ ವಿರುದ್ಧ ಅಪಹರಣ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ.
ಎರಡು ದಿನ ಮಾತನಾಡುವ ನೆಪದಲ್ಲಿ ಶಾಸಕರನ್ನು ಶಾಸಕ ಮುನಿರತ್ನ ಅವರ ಕಚೇರಿಗೆ ಬಲವಂತವಾಗಿ ಶಾಸಕರ ಹಿಂಬಾಲಕರು ಕರೆದುಕೊಂಡು ಹೋಗಿ ಬೆದರಿಕೆ ಹಾಕಿ ಬಿಜೆಪಿ ಸೇರಿಸಿದ್ದಾರೆ ಎಂದು ಸಂತ್ರಸ್ಥ ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ಶಾಸಕ ಮುನಿರತ್ನ ನಿರಾಕರಿಸಿದ್ದಾರೆ.
ಇದನ್ನು ಓದಿದ್ದೀರಾ? GST ಅನ್ಯಾಯ | ‘ಬಹಿರಂಗ ಚರ್ಚೆಗೆ ನಾನು ಸಿದ್ದ’ ಎಂದ ಸಚಿವ ಕೃಷ್ಣಬೈರೇಗೌಡ; ನಿರ್ಮಲಾ ಸೀತಾರಾಮನ್‌ಗೂ ಆಹ್ವಾನ
“ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿದ್ದೇನೆ. ಏ.1ರಂದು ಶಾಸಕ ಮುನಿರತ್ನ ಅವರು ಮಾತನಾಡಲು ಕರೆಯುತ್ತಿದ್ದಾರೆ ಎಂದು ಹೇಳಿ ಡಾ. ರಾಜ್ ಕುಮಾರ್‌ಸಮಾಧಿ ಬಳಿಗೆ ಸುರೇಶ್, ವಸಂತ್, ವಾಸೀಂ ಹಾಗೂ ಸೀನ ಕರೆಸಿಕೊಂಡರು. ಬಳಿಕ ಅಲ್ಲಿಂದ ವೈಯಾಲಿಕಾವಲ್‌ನಲ್ಲಿರುವ ಶಾಸಕರ ಕಚೇರಿಗೆ ನನ್ನನ್ನು ಕರೆದುಕೊಂಡು ಹೋದರು. ಅಲ್ಲಿ ನನಗೆ ಶಾಸಕ ಮುನಿರತ್ನ ಜೀವ ಬೆದರಿಕೆ ಹಾಕಿದರು” ಎಂದು ಸಾಮ್ಯುಯೆಲ್ ದೂರಿದ್ದಾರೆ.
