ತೆಲಂಗಾಣ | ಅಕ್ಬರುದ್ದೀನ್ ಓವೈಸಿ ಹಂಗಾಮಿ ಸ್ಪೀಕರ್ ಆಗಿದ್ದಕ್ಕೆ ಪ್ರಮಾಣ ವಚನ ಬಹಿಷ್ಕರಿಸಿದ ಬಿಜೆಪಿ ಶಾಸಕರು!

Date:

ಸಂಸದ ಅಸಾದುದ್ದೀನ್ ಓವೈಸಿಯವರ ಸಹೋದರ ಹಾಗೂ ಎಐಎಂಐಎಂ ಪಕ್ಷದ ಶಾಸಕ ಅಕ್ಬರುದ್ದೀನ್ ಓವೈಸಿ ಅವರನ್ನು ತೆಲಂಗಾಣ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಿಸಲಾಗಿತ್ತು. ಈ ನೇಮಕಕ್ಕೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಶಾಸಕರು ಪ್ರಮಾಣವಚನ ಕಾರ್ಯಕ್ರಮದಿಂದ ದೂರವುಳಿದ ಪ್ರಸಂಗ ನಡೆದಿದೆ.

ಅಕ್ಬರುದ್ದೀನ್ ಓವೈಸಿ ಅವರು ಇತ್ತೀಚೆಗೆ ನಡೆದ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಚಂದ್ರಾಯಾನಗುಟ್ಟ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಸದ್ಯ ಅವರನ್ನು ತೆಲಂಗಾಣ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಿಸಲಾಗಿದೆ. ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸುವ ಕಾರ್ಯಕ್ರಮ ಇಂದು(ಡಿ.9) ಏರ್ಪಡಿಸಲಾಗಿತ್ತು. ಇದನ್ನು ವಿರೋಧಿಸಿರುವ ತೆಲಂಗಾಣ ಬಿಜೆಪಿಯ ನೂತನ ಶಾಸಕರು ಪ್ರಮಾಣ ವಚನ ಕಾರ್ಯಕ್ರಮ ಬಹಿಷ್ಕರಿಸಿದ್ದಾರೆ.

ಕಾಂಗ್ರೆಸ್ ಮತ್ತು ಬಿಆರ್‌ಎಸ್‌ ಪಕ್ಷದ ಶಾಸಕರು ಇಂದು ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ, ಹೈದರಾಬಾದ್‌ನ ಗೋಶಮಹಲ್ ಕ್ಷೇತ್ರದ ಶಾಸಕ ಟಿ. ರಾಜಾಸಿಂಗ್, “ನನ್ನ ಉಸಿರು ಇರುವವರೆಗೆ ಎಂಐಎಂ ನಾಯಕನ ಮುಂದೆ ಪ್ರಮಾಣ ವಚನ ಸ್ವೀಕರಿಸುವುದಿಲ್ಲ. ಪೂರ್ಣಾವಧಿ ಸ್ಪೀಕರ್ ನೇಮಕವಾದ ಬಳಿಕವಷ್ಟೇ ಪ್ರಮಾಣ ವಚನ ಸ್ವೀಕರಿಸುವುದಾಗಿ” ವಿಡಿಯೋ ಮೂಲಕ ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಹಿಂದೂ ವಿರೋಧಿ ಹೇಳಿಕೆ ನೀಡಿರುವ ವ್ಯಕ್ತಿ ಅಕ್ಬರುದ್ದೀನ್ ಓವೈಸಿ. ಆತನ ಮುಂದೆ ನಾನು ಪ್ರಮಾಣ ವಚನ ಸ್ವೀಕರಿಸಬಹುದೇ?” ಎಂದು ಟಿ. ರಾಜಾಸಿಂಗ್ ಪ್ರಶ್ನಿಸಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ಹಿರಿಯ ಶಾಸಕರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸುವ ಸಂಪ್ರದಾಯಕ್ಕೆ ವಿರುದ್ಧವಾದ ಓವೈಸಿ ನೇಮಕವನ್ನು ಬಿಜೆಪಿ ವಿರೋಧಿಸುತ್ತದೆ. ಹಂಗಾಮಿ ಸ್ಪೀಕರ್ ಮುಂದೆ ಬಿಜೆಪಿ ಶಾಸಕರು ಪ್ರಮಾಣ ಸ್ವೀಕರಿಸುವುದಿಲ್ಲ. ಪೂರ್ಣಾವಧಿ ಸ್ಪೀಕರ್ ನೇಮಕವಾದ ನಂತರವಷ್ಟೇ ನಮ್ಮ ಶಾಸಕರು ಪ್ರಮಾಣ ವಚನ ಸ್ವೀಕರಿಸುತ್ತಾರೆ. ಎಐಎಂಐಎಂ ಪಕ್ಷದೊಂದಿಗೆ ನಾವು ಎಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಈ ಬಗ್ಗೆ ನಾವು ರಾಜ್ಯಪಾಲರ ಬಳಿ ಹೋಗುತ್ತೇವೆ” ಎಂದು ತಿಳಿಸಿದ್ದಾರೆ.

2018ರಲ್ಲೂ ಬಿಆರ್‌ಎಸ್‌ ಪಕ್ಷ ಅಧಿಕಾರಕ್ಕೆ ಬಂದಿದ್ದ ಸಂದರ್ಭದಲ್ಲಿ ಎಂಐಎಂ ಶಾಸಕರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಲಾಗಿತ್ತು. ಆ ವೇಳೆ ಕೂಡ ದ್ವೇಷ ಭಾಷಣಕಾರನಾಗಿ ಗುರುತಿಸಿಕೊಂಡಿರುವ ಶಾಸಕ ರಾಜಾಸಿಂಗ್, ಪ್ರಮಾಣ ವಚನ ಸ್ವೀಕರಿಸಲು ನಿರಾಕರಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ ಒತ್ತಡದಿಂದ ಕಾಂಗ್ರೆಸ್‌ ಅಭ್ಯರ್ಥಿ ನಾಮಪತ್ರ ತಿರಸ್ಕಾರ; ಹೈಕೋರ್ಟ್‌ಗೆ ಹೋಗುತ್ತೇವೆಂದ ಕಾಂಗ್ರೆಸ್‌

ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರವನ್ನು...

‘ನಾವು ಮತ ಹಾಕುತ್ತೇವೆ, ಆದರೆ ಬಿಜೆಪಿಗಲ್ಲ’; 1,200 ಕುಟುಂಬಗಳು ಹೀಗೆ ಹೇಳಿದ್ದೇಕೆ?

ನಾವು ಒಡೆದ ಮನೆಯಲ್ಲಿ ಬದುಕುತ್ತಿದ್ದೇವೆ. ಬಿಜೆಪಿ ಸರ್ಕಾರ ನಮ್ಮ ಮನೆಗಳನ್ನು ಒಡೆದುರುಳಿಸಿದೆ....

‘ಇಂಡಿಯಾ’ ಒಕ್ಕೂಟ ತೊರೆಯಲು ನಿರಾಕರಿಸಿದ್ದಕ್ಕೆ ಮಾಜಿ ಸಿಎಂ ಹೇಮಂತ್ ಸೊರೆನ್‌ಗೆ ಜೈಲು’

'ಇಂಡಿಯಾ' ಮೈತ್ರಿಕೂಟವನ್ನು ತೊರೆಯಲು ನಿರಾಕರಿಸಿದ್ದಕ್ಕೆ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ, ಜೆಎಂಎಂ ನಾಯಕ...

ಮೋದಿಯವರ ದ್ವೇಷ ಭಾಷಣ ಜನರ ಗಮನವನ್ನು ಬೇರೆಡೆಗೆ ತಿರುಗಿಸುವ ಯತ್ನ: ರಾಹುಲ್ ಗಾಂಧಿ

"ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೊಂದಿರುವ ಮುಸ್ಲಿಮರಿಗೆ...