ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರದ ದಿನದಂದು ಮಂಗಳೂರಿನ ಬೋಳಿಯಾರಿನಲ್ಲಿ ನಡೆದಿದ್ದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಯು ಟಿ ಖಾದರ್ ಹಾಗೂ ಮಂಗಳೂರು ಪೊಲೀಸ್ ಕಮಿಷನರ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಮುಖಂಡ ಸಿ ಟಿ ರವಿ, “ಯು ಟಿ ಖಾದರ್ ಸಾಮ್ರಾಜ್ಯದಲ್ಲಿ ಪಾಕ್ ಕುನ್ನಿಗಳು ಇನ್ನೂ ಇದ್ದಾರೆ. ಹಾಗಾಗಿ, ಪಾಕಿಸ್ತಾನದ ಕುನ್ನಿಗಳೇ ದೇಶ ಬಿಟ್ಟು ತೊಲಗಿ ಅಂತ ನಾನು ಸಾವಿರ ಬಾರಿ ಹೇಳುತ್ತೇನೆ” ಎಂದು ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಇಂದು ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಪಾಕಿಸ್ತಾನದ ಕುನ್ನಿಗಳೆ ಎಂದು ಫೋಷಣೆ ಕೂಗಿದರೆ ಪಾಕ್ ಕುನ್ನಿಗಳು ಪ್ರಚೋದನೆಗೆ ಒಳಗಾಗಬೇಕು. ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಸಾಮ್ರಾಜ್ಯ ಉಳ್ಳಾಲದಲ್ಲಿ ಪಾಕ್ ಕುನ್ನಿಗಳು ಇನ್ನೂ ಇದ್ದಾರೆ ಅಂದ ಹಾಗಾಯಿತು” ಎಂದು ಹೇಳಿದರು.
“ಮಂಗಳೂರು ಕಮಿಷನರ್ ಹೇಳಿಕೆ ಸಮರ್ಥನೀಯವಲ್ಲ. ಅದನ್ನು ವಾಪಸ್ ಪಡೆಯಬೇಕು. ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆಂಬ ಕುರಿತು ಮಸೀದಿ ವತಿಯಿಂದ ದೂರು ನೀಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕು. ಮಂಗಳೂರು ಪೊಲೀಸ್ ಕಮಿಷನರ್ ಅವರು ಪಾಕಿಸ್ತಾನದ ಕುನ್ನಿಗಳನ್ನು ಗುರುತಿಸಿ, ಅವರ ಮೇಲೆ ಪ್ರಕರಣ ಹಾಕಿ ಅವರನ್ನ ಗಡೀಪಾರು ಮಾಡಬೇಕು. ಅಥವಾ ಖಾದರ್ ಅವರೇ ಗುರುತಿಸಿ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು” ಎಂದು ವಿಧಾನ ಪರಿಷತ್ ಸದಸ್ಯರಾದ ಸಿ ಟಿ ರವಿ ಕಿಡಿಕಾರಿದ್ದಾರೆ.
“ಭಾರತ್ ಮಾತಾಕೀ ಜೈ ಎಂದಾಗ ಹಾಗೂ ಪಾಕಿಸ್ತಾನಕ್ಕೆ ಬೈದಾಗ ನಮಕ್ ಹರಾಮ್ ಗಳು ಮಾತ್ರ ಪ್ರಚೋದನೆಗೆ ಒಳಗಾಗುತ್ತಾರೆ. ಆದರೆ, ‘ಪಾಕಿಸ್ತಾನದ ಕುನ್ನಿಗಳೇ ಎಂದಿದ್ದಕ್ಕೆ ಮಸೀದಿಯ ಎರಡೂ ಬದಿ ನಿಂತಿದ್ದವರು ಪ್ರಚೋದನೆಗೊಳಗಾಗಿ ಚೂರಿಯಿಂದ ಇರಿದಿದ್ದಾರೆ” ಎಂದು ಮಂಗಳೂರಿನ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೇಳಿಕೆ ನೀಡಿದ್ದಾರೆ. ಅವರು ಏಕೆ ಪಾಕಿಸ್ತಾನದ ಕಮಿಷನರ್ ಥರ ವರ್ತಿಸುತ್ತಾರೋ ತಿಳಿಯದು. ಅವರು ಪಾಕಿಸ್ತಾನದ ಅಧಿಕಾರಿಯಲ್ಲ, ಭಾರತದ ಪೊಲೀಸ್ ಅಧಿಕಾರಿ. ಅವರ ಹೇಳಿಕೆ ಸಮರ್ಥನೀಯವಲ್ಲ. ಅದನ್ನು ವಾಪಸ್ ಪಡೆಯಬೇಕು. ಮಸೀದಿಯವರು ಕೊಟ್ಟ ದೂರಿಗೆ ತಕ್ಷಣ ಬಿ ವರದಿ ಸಲ್ಲಿಸಬೇಕು” ಎಂದು ಒತ್ತಾಯಿಸಿದರು.
ಇದನ್ನು ಓದಿದ್ದೀರಾ? ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ | ‘ಬಿಜೆಪಿಗೆ ಮತ ಹಾಕಿದ್ದಕ್ಕೆ ಸೇಡು’ ಎಂದ ವಿಪಕ್ಷ ನಾಯಕ ಅಶೋಕ್!
“ಇರಿತಕ್ಕೆ ಒಳಗಾದ ಹರೀಶ್, ನಂದ ಕುಮಾರ್ ಕುಟುಂಬಗಳಿಗೆ ಸರ್ಕಾರ ತಕ್ಷಣ ಪರಿಹಾರ ನೀಡಬೇಕು. ರಾಜಧರ್ಮದ ಬಗ್ಗೆ ಮಾತನಾಡುವ ವಿಧಾನ ಸಭಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಗಾಯಾಳುಗಳು ದಾಖಲಾಗಿರುವ ಆಸ್ಪತ್ರೆಗೆ ತೆರಳಿದ್ದಾಗ ಗಾಯಾಳುಗಳನ್ನು ಭೇಟಿಯಾಗಿ ಸಾಂತ್ವನ ಹೇಳಿಲ್ಲ. ಗಾಯಾಳುಗಳು ಪಾಕಿಸ್ತಾನದ ಕುನ್ನಿಗಳಾಗಿದ್ದರೆ ಅವರು ಆಸ್ಪತ್ರೆಯಲ್ಲೇ ಇರುತ್ತಿದ್ದರು. ಆದರೆ ಗಾಯಾಳುಗಳು ಭಾರತ ಮಾತೆಯ ಸುಪುತ್ರರಾದ ಕಾರಣ ಅವರು ಆಸ್ಪತ್ರೆಗೆ ಬಂದರೂ ಅವರನ್ನು ಭೇಟಿಯಾಗಿಲ್ಲ” ಎಂದು ಸಿ ಟಿ ರವಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಮುಖಂಡರಾದ ಪ್ರತಾಪ್ ಸಿಂಹ ನಾಯಕ್, ಸತೀಶ್ ಕುಂಪಲ ಮತ್ತಿತರರು ಉಪಸ್ಥಿತರಿದ್ದರು.

ಬಿಜೆಪಿ ಸೋತಿದ್ದು ಇಂಥಾ ಮಹಾನುಭಾವರ ಮಹಾನ್ ನುಡಿಗಳಿಂದ,, ಅಲ್ಲದೆ ಈತನನ್ನು ಪಕ್ಷ ಸೈಡ್ ಲೈನ್ ಮಾಡಿದ್ದೂ ಸಹ ಇಂಥಹ ವರ್ತನೆಗಳಿಂದ ,,ಇಂಥವರಿಂದಲೇ ಪಕ್ಷ ಒಂದು ಗತಿ ಕಾಣುವುದರಲ್ಲಿ ಸಂಶಯವಿಲ್ಲ