ಮಾಜಿ ಕೇಂದ್ರ ಸಚಿವ ಚೌದರಿ ಬಿರೇಂದರ್ ಸಿಂಗ್‌ನ ಪುತ್ರ, ಹರಿಯಾಣದ ಹಿಸ್ಸಾರ್‌ನ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್ ಭಾನುವಾರ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿಯಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಎಕ್ಸ್‌ನಲ್ಲಿ (ಟ್ವಿಟ್ಟರ್) ತಾನು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ ಬಗ್ಗೆ ಪೋಸ್ಟ್ ಮಾಡಿದ ಕೆಲವೇ ನಿಮಿಷಗಳಲ್ಲಿ ನವದೆಹಲಿಯಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರ ನಿವಾಸಕ್ಕೆ ಭೇಟಿ ನೀಡಿದ್ದು ಕಾಂಗ್ರೆಸ್ ಸೇರಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ನಾಯಕರಾದ ಅಜಯ್ ಮಾಕನ್, ಮುಕುಲ್ ವಾಸ್ನಿಕ್ ಮತ್ತು ದೀಪಕ್ ಬಬಾರಿಯಾ ಕೂಡಾ ಉಪಸ್ಥಿತರಿದ್ದರು.
#WATCH | Haryana’s Hisar BJP MP Brijendra Singh joins the Congress Party in the presence of party president Mallikarjun Kharge. https://t.co/M2MiDj7zlf pic.twitter.com/e7a97oqQWM
— ANI (@ANI) March 10, 2024
“ಬಲವಾದ ರಾಜಕೀಯ ಕಾರಣಗಳಿಂದಾಗಿ ನಾನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಹಿಸ್ಸಾರ್‌ನ ಸಂಸತ್ ಸದಸ್ಯನಾಗಿ ಸೇವೆ ಸಲ್ಲಿಸಲು ನನಗೆ ಅವಕಾಶ ನೀಡಿದ ಪಕ್ಷಕ್ಕೆ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ” ಎಂದು ಬ್ರಿಜೇಂದ್ರ ಸಿಂಗ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಲೋಕಸಭೆ ಚುನಾವಣೆಯ ಹಿಸ್ಸಾರ್‌ನಿಂದಲೇ ಬ್ರಿಜೇಂದ್ರ ಸಿಂಗ್ ಸ್ಪರ್ಧಿಸುವ ನಿರೀಕ್ಷೆಯಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೇಂದ್ರ ಸಿಂಗ್ ಜೆಜೆಪಿಯ ದುಷ್ಯಂತ್ ಚೌಟಾಲಾ ಮತ್ತು ಆಗ ಕಾಂಗ್ರೆಸ್‌ನಲ್ಲಿದ್ದ ಭವ್ಯಾ ಬಿಷ್ಣೋಯ್‌ರನ್ನು ಸೋಲಿಸಿ ಹಿಸ್ಸಾರ್ ಲೋಕಸಭಾ ಸ್ಥಾನವನ್ನು ಗೆದ್ದಿದ್ದರು.
ಇನ್ನು ಬ್ರಿಜೇಂದ್ರ ಸಿಂಗ್‌ರ ತಂದೆ ಬಿರೇಂದರ್ ಸಿಂಗ್ ಕೂಡಾ ಕಾಂಗ್ರೆಸ್‌ಗೆ ಸೇರ್ಪಡೆ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಬಿರೇಂದರ್ ಸಿಂಗ್ 2014ರ ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ತೊರೆದು ಬಿಜೆಪಿಯನ್ನು ಸೇರ್ಪಡೆಯಾಗಿದ್ದು, ಬಳಿಕ ರಾಜ್ಯಸಭೆ ಸದಸ್ಯರಾದರು ಮತ್ತು ಕೇಂದ್ರ ಸಚಿವರೂ ಆದರು.