ಹರಿಯಾಣ| ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರಿದ ಸಂಸದ ಬ್ರಿಜೇಂದ್ರ

Date:

ಮಾಜಿ ಕೇಂದ್ರ ಸಚಿವ ಚೌದರಿ ಬಿರೇಂದರ್ ಸಿಂಗ್‌ನ ಪುತ್ರ, ಹರಿಯಾಣದ ಹಿಸ್ಸಾರ್‌ನ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್‌ ಭಾನುವಾರ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿಯಾಗಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

- Advertisement -

ಎಕ್ಸ್‌ನಲ್ಲಿ (ಟ್ವಿಟ್ಟರ್) ತಾನು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ ಬಗ್ಗೆ ಪೋಸ್ಟ್ ಮಾಡಿದ ಕೆಲವೇ ನಿಮಿಷಗಳಲ್ಲಿ ನವದೆಹಲಿಯಲ್ಲಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರ ನಿವಾಸಕ್ಕೆ ಭೇಟಿ ನೀಡಿದ್ದು ಕಾಂಗ್ರೆಸ್ ಸೇರಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ನಾಯಕರಾದ ಅಜಯ್ ಮಾಕನ್, ಮುಕುಲ್ ವಾಸ್ನಿಕ್ ಮತ್ತು ದೀಪಕ್ ಬಬಾರಿಯಾ ಕೂಡಾ ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...


“ಬಲವಾದ ರಾಜಕೀಯ ಕಾರಣಗಳಿಂದಾಗಿ ನಾನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಹಿಸ್ಸಾರ್‌ನ ಸಂಸತ್ ಸದಸ್ಯನಾಗಿ ಸೇವೆ ಸಲ್ಲಿಸಲು ನನಗೆ ಅವಕಾಶ ನೀಡಿದ ಪಕ್ಷಕ್ಕೆ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ” ಎಂದು ಬ್ರಿಜೇಂದ್ರ ಸಿಂಗ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಲೋಕಸಭೆ ಚುನಾವಣೆಯ ಹಿಸ್ಸಾರ್‌ನಿಂದಲೇ ಬ್ರಿಜೇಂದ್ರ ಸಿಂಗ್ ಸ್ಪರ್ಧಿಸುವ ನಿರೀಕ್ಷೆಯಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೇಂದ್ರ ಸಿಂಗ್ ಜೆಜೆಪಿಯ ದುಷ್ಯಂತ್ ಚೌಟಾಲಾ ಮತ್ತು ಆಗ ಕಾಂಗ್ರೆಸ್‌ನಲ್ಲಿದ್ದ ಭವ್ಯಾ ಬಿಷ್ಣೋಯ್‌ರನ್ನು ಸೋಲಿಸಿ ಹಿಸ್ಸಾರ್ ಲೋಕಸಭಾ ಸ್ಥಾನವನ್ನು ಗೆದ್ದಿದ್ದರು.

ಇನ್ನು ಬ್ರಿಜೇಂದ್ರ ಸಿಂಗ್‌ರ ತಂದೆ ಬಿರೇಂದರ್ ಸಿಂಗ್‌ ಕೂಡಾ ಕಾಂಗ್ರೆಸ್‌ಗೆ ಸೇರ್ಪಡೆ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಬಿರೇಂದರ್ ಸಿಂಗ್ 2014ರ ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ತೊರೆದು ಬಿಜೆಪಿಯನ್ನು ಸೇರ್ಪಡೆಯಾಗಿದ್ದು, ಬಳಿಕ ರಾಜ್ಯಸಭೆ ಸದಸ್ಯರಾದರು ಮತ್ತು ಕೇಂದ್ರ ಸಚಿವರೂ ಆದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದ | ಚುನಾವಣಾ ಆಯೋಗಕ್ಕೆ INDIA ವಿಪಕ್ಷಗಳ ಘೇರಾವ್; ರಾಹುಲ್‌, ಪ್ರಿಯಾಂಕಾ ಸೇರಿ ಹಲವರು ವಶಕ್ಕೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಚುನಾವಣಾ ಅಕ್ರಮಗಳ...

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...