ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ‘ಪಾಕಿಸ್ತಾನಿ’ಗಳು ಎಂದ ಬಿಜೆಪಿ ಸಂಸದ

Date:

ಬಿಜೆಪಿ ಸಂಸದ ನಾಗೇಂದ್ರ ರಾಯ್ ಅವರು ತಮ್ಮದೇ ಪಕ್ಷ ನಾಯಕ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ ಆನಂದ ಬೋಸ್ ಅವರನ್ನು ‘ಪಾಕಿಸ್ತಾನಿ’ ಮತ್ತು ‘ಬಾಂಗ್ಲಾದೇಶಿ’ ಎಂದು ಕರೆದಿದ್ದಾರೆ. ಅವರ ಹೇಳಿಕೆಯು ಬಿಜೆಪಿಯನ್ನು ಮುಜುಗರಕ್ಕೆ ದೂಡಿದೆ. ಅಲ್ಲದೆ, ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ.

- Advertisement -

ಪಶ್ಚಿಮ ಬಂಗಾಳದ ಕೂಚ್‌ಬೆಹಾರ್ ಜಿಲ್ಲೆಯ ಸೀತೈನಲ್ಲಿ ಬಿಜೆಪಿ ಸಭೆಯಲ್ಲಿ ಭಾಗವಹಿಸಿದ್ದ ಸಂಸದ ನಾಗೇಂದ್ರ ರಾಯ್ ವಿವಾದಾತ್ಮಕ ಭಾಷಣ ಮಾಡಿದ್ದಾರೆ. ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾಷಣದ ಆವೇಗದಲ್ಲಿ ಮೋದಿ, ಮುರ್ಮು ಅವರನ್ನು ‘ಪಾಕಿಸ್ತಾನಿ’ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಮತದಾರರ ಪಟ್ಟಿಯಿಂದ ಜನರ ಹೆಸರುಗಳನ್ನು ಅಳಿಸಿದರೆ, ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲು ಮತ್ತು ಕಲ್ಯಾಣ ಸೇವೆಗಳನ್ನು ನಿರಾಕರಿಸಲು ಕಾರಣವಾಗುತ್ತದೆ. ಜನರನ್ನು ಬಂಧನ ಶಿಬಿರಗಳಲ್ಲಿ ಇರಿಸಿ, ಅವರ ಮೂಲ ಸ್ಥಳವನ್ನು ಪರಿಶೀಲಿಸಬಹುದು. ಆದರೆ, ಈ ಪ್ರಕ್ರಿಯೆಯನ್ನು ನಡೆಸುವವರು ಸ್ವತಃ ವಿದೇಶಿಯರೇ ಆಗಿದ್ದಾರೆ. ನಮ್ಮಿಂದ ದಾಖಲೆಗಳನ್ನು ಕೇಳುತ್ತಿರುವವರು ಸ್ವತಃ ಬಾಂಗ್ಲಾದೇಶಿ ಮತ್ತು ಪಾಕಿಸ್ತಾನಿಗಳು. ರಾಷ್ಟ್ರಪತಿ, ಪ್ರಧಾನಮಂತ್ರಿ ಹಾಗೂ ಬಂಗಾಳ ಗವರ್ನರ್ ಎಲ್ಲರೂ ಪಾಕಿಸ್ತಾನಿ ಮತ್ತು ಬಾಂಗ್ಲಾದೇಶಿಗಳು. ಆದರೆ, ಇದು ನಮ್ಮ ಭೂಮಿ, ನಮ್ಮಿಂದ ದಾಖಲೆಗಳನ್ನು ಹೇಗೆ ಕೇಳುತ್ತೀರಿ?” ಎಂದು ರಾಯ್ ಹೇಳಿದ್ದಾರೆ.

ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸಮೀಕ್ ಭಟ್ಟಾಚಾರ್ಯ ಅವರು ನಿರಾಕರಿಸಿದ್ದಾರೆ. ಆದಾಗ್ಯೂ, ಎಸ್‌ಐಆರ್ ಪ್ರಕ್ರಿಯೆಗೂ – ಬಂಧನ ಶಿಬಿರಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ರಕ್ಷಣಾ ಕ್ಷೇತ್ರಕ್ಕೂ ‘ಮೋದಿ ಮಿತ್ರ’ನ ಲಗ್ಗೆ: ದೇಶದ ಗಡಿ ಕಾಯುವ ಹೊಣೆ ಇನ್ನು ‘ಅದಾನಿ’ ಪಾಲು!

ಜಿಲ್ಲಾ ಮಟ್ಟದ ಬಿಜೆಪಿ ಉಪಾಧ್ಯಕ್ಷರೊಬ್ಬರು, “ಇದು ನಾಗೇಂದ್ರ ರಾಯ್ ಅವರ ವೈಯಕ್ತಿಕ ಅಭಿಪ್ರಾಯವೇ ಹೊರತು ಪಕ್ಷದ ಅಧಿಕೃತ ನಿಲುವಲ್ಲ” ಎಂದಿದ್ದಾರೆ.

ರಾಯ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಟಿಎಂಸಿ ವಕ್ತಾರ ಕುನಾಲ್ ಘೋಷ್, “ಎಸ್‌ಐಆರ್‌ನ ಭಾಗವಾಗಿ ಹೆಚ್ಚಿನ ಸಂಖ್ಯೆಯ ಮತದಾರರನ್ನು ಅಳಿಸಲು ಬಿಜೆಪಿ ಭಾರೀ ವಿವಾದವನ್ನು ಹುಟ್ಟುಹಾಕುತ್ತಿದೆ. ಯಾವುದೇ ನಾಗರಿಕರು ಮತಪಟ್ಟಿಯಿಂದ ಹೆಸರು ಕಳೆದುಕೊಳ್ಳದಂತೆ ಪ್ರಕ್ರಿಯೆ ನಡೆಸಬೇಕು” ಎಂದು ಹೇಳಿದ್ದಾರೆ.

2025ರ ಜೂನ್‌ನಲ್ಲಿ ಚುನಾವಣಾ ಆಯೋಗವು ಮೊದಲ ಬಾರಿಗೆ ಬಿಹಾರದಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ಆರಂಭಿಸಿತು. ಈಗ, 12 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ವಿಸ್ತರಿಸಿದೆ. ಎಸ್‌ಐಆರ್ ಪ್ರಕ್ರಿಯೆ ನಡೆದ ರಾಜ್ಯಗಳಲ್ಲಿ ಈವರೆಗೆ ಒಟ್ಟು 5.23 ಕೋಟಿ ಜನರನ್ನು ಮತಪಟ್ಟಿಯಿಂದ ಹೊರಹಾಕಲಾಗಿದೆ. ಕೇಂದ್ರ ಸರ್ಕಾರವು ಹಿಂಬಾಗಿಲಿನ ಮೂಲಕ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ)ಯನ್ನು ಜಾರಿಗೆ ತಂದಿದೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಈ ಪ್ರಕ್ರಿಯೆ ಆರಂಭವಾದಾಗಿನಿಂದ ಆರು ರಾಜ್ಯಗಳಲ್ಲಿ ಕನಿಷ್ಠ 33 ಬಿಎಲ್‌ಒಗಳು ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಎಸ್‌ಐಆರ್ ಕರ್ತವ್ಯಗಳಲ್ಲಿ ಭಾಗಿಯಾಗಿರುವ ಕನಿಷ್ಠ 40 ಸರ್ಕಾರಿ ಅಧಿಕಾರಿಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...