ಜನರ ವಿಶ್ವಾಸ ಗಳಿಸದ ಬಿಜೆಪಿ ಆಪರೇಷನ್ ಕಮಲದಲ್ಲಿ ಶಾಸಕರನ್ನು ಲಪಟಾಯಿಸುತ್ತದೆ: ಸಿದ್ದರಾಮಯ್ಯ ವಾಗ್ದಾಳಿ

Date:

Advertisements

ಜನರ ವಿಶ್ವಾಸ, ನಂಬಿಕೆ ಗಳಿಸುವಲ್ಲಿ ವಿಫಲವಾದ ಬಿಜೆಪಿಗೆ ಆಪರೇಷನ್ ಬಿಟ್ಟರೆ ಬೇರೇನೂ ಗೊತ್ತಿಲ್ಲ. ಹಣಕೊಟ್ಟು ಶಾಸಕರನ್ನು ಕೊಂಡುಕೊಂಡು ಬಹುಮತ ಮಾಡಿಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಮುದ್ದೇಬಿಹಾಳ ಹೆಲಿಪ್ಯಾಡಿನಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿ, “ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ಸಿನಿಂದ ಹಲವಾರು ನಾಯಕರು ದುಂಬಾಲು ಬಿದ್ದಿದ್ದಾರೆ. ಅವರು ಹಿಂದೆಯೂ ಎರಡು ಬಾರಿ ಹಾಗೇ ಮಾಡಿದ್ದಾರೆ. 2008 ರಿಂದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಇದ್ದಾಗಲೂ ಇದನ್ನೇ ಮಾಡಿದ್ದು. ಎಲ್ಲಾ ಕಡೆ ಕೊಂಡುಕೊಳ್ಳಲು ಪ್ರಯತ್ನ ಮಾಡುತ್ತಾರೆ. ಕೊಂಡುಕೊಳ್ಳಲು ಜನ ಸಿಕ್ಕರೆ ಸರ್ಕಾರ ರಚನೆ ಮಾಡುತ್ತಾರೆ” ಎಂದರು.

ಬಿಜೆಪಿಗೆ ಜನ ಪೂರ್ಣ ಅಧಿಕಾರ ಕೊಟ್ಟೇ ಇಲ್ಲ

Advertisements

“ರಾಜ್ಯದಲ್ಲಿ ಜನರು ಬಿಜೆಪಿಗೆ ಜನ ಪೂರ್ಣ ಅಧಿಕಾರ ಕೊಟ್ಟೇ ಇಲ್ಲ. 2008, 2013, 2018 ರಲ್ಲಿ ಅವರು ಬಹುಮತದಿಂದ ಗೆದ್ದೇ ಇಲ್ಲ. ಕಾಂಗ್ರೆಸ್ ಪಕ್ಷ 2013ರಲ್ಲಿ ಗದ್ದಿದೆ. 2018 ರಲ್ಲಿ ಸೋತು ಪುನಃ 2023 ರಲ್ಲಿ 136 ಸ್ಥಾನಗಳನ್ನು ಪಡೆದು ಗೆದ್ದಿದ್ದೇವೆ. ಕಾಂಗ್ರೆಸ್ ಪಕ್ಷ ಜನರ ವಿಶ್ವಾಸ ಹಾಗೂ ತೀರ್ಪಿನಂತೆ ಅಧಿಕಾರಕ್ಕೆ ಬರುತ್ತದೆ. ಬಿಜೆಪಿಯವರು ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬರುತ್ತಾರೆ” ಎಂದು ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರವಾಹಕ್ಕೆದುರು ದಶಕ ಕಾಲದ ಈಜು-  Scroll.in ಗೆ ಅಭಿನಂದನೆ!

ರಾಷ್ಟ್ರಧ್ವಜ, ಭಾರತ ದೇಶದ 140 ಕೋಟಿ ಜನರ ಅಸ್ಮಿತೆಯ ಪ್ರತೀಕ

ಮಂಡ್ಯದಲ್ಲಿ ಹನುಮಧ್ವಜ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷರು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಯಿಸಿ, “ಮಂಡ್ಯದ ಪ್ರಕರಣದ ವಾಸ್ತವಾಂಶವೇ ಅವರಿಗೆ ತಿಳಿದಿಲ್ಲ. ಅಲ್ಲಿ ಕೇವಲ ರಾಷ್ಟ್ರಧ್ವಜ ಹಾಗೂ ಕನ್ನಡ ಧ್ವಜ ಹಾರಿಸುವುದಾಗಿ ಕೆರಗೋಡು ಗ್ರಾಮ ಪಂಚಾಯ್ತಿಯಲ್ಲಿ ಅನುಮತಿ ಪಡೆದುಕೊಂಡು ಕೇಸರಿ ಧ್ವಜ ಹಾರಿಸಲು ಮುಂದಾಗಿದ್ದರು. ಅವರಿಗೆ ರಾಷ್ಟ್ರಧ್ವಜದ ಬಗ್ಗೆ ಯಾವುದೇ ಗೌರವವಿಲ್ಲ. ರಾಷ್ಟ್ರಧ್ವಜ, ಭಾರತ ದೇಶದ 140 ಕೋಟಿ ಜನರ ಅಸ್ಮಿತೆಯ ಪ್ರತೀಕ. ಇಂತಹ ರಾಷ್ಟ್ರಧ್ವಜವನ್ನು ಹಾಕಲು ಒಪ್ಪದಿರುವವರು ದೇಶಭಕ್ತರೆಂದು ಹೇಳಿಕೊಳ್ಳುತ್ತಾರೆ” ಎಂದು ಹರಿಹಾಯ್ದರು.

ಮಂಡ್ಯದಲ್ಲಿ ರಾಷ್ಟ್ರಧ್ವಜಕ್ಕೆ ಗೌರವ ನೀಡುವ ಕಾಂಗ್ರೆಸ್ ಕಾಶ್ಮೀರದಲ್ಲಿ ರಾಷ್ಟ್ರಧ್ವಜಕ್ಕೆ ಗೌರವ ನೀಡುವುದಿಲ್ಲ ಎಂಬ ಬಿಜೆಪಿಯವರ ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಕಾಂಗ್ರೆಸ್ ಪಕ್ಷ ರಾಷ್ಟ್ರಧ್ವಜಕ್ಕೆ ಸದಾ ಗೌರವ ನೀಡುತ್ತದೆ. 1935 ರಲ್ಲಿ ದೇಶಕ್ಕೆ ರಾಷ್ಟ್ರಧ್ವಜವನ್ನು ನೀಡಿದವರು ಕಾಂಗ್ರೆಸ್ ಪಕ್ಷ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X