ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯಾವುದೇ ದುರಂತ ಅಥವಾ ನೈಸರ್ಗಿಕ ವಿಕೋಪವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಸಿದ್ಧವಿಲ್ಲ ಎಂದು ಡಿಎಂಕೆ ಸಂಸದೆ ಕನಿಮೊಳಿ ಹೇಳಿದ್ದಾರೆ.
“ತಮಿಳುನಾಡಿನ ಜಿಲ್ಲೆಗಳಲ್ಲಿ ಪ್ರವಾಹ ಸಂಭವಿಸುವ ಏಳು ದಿನಗಳ ಮೊದಲು ಎಚ್ಚರಿಕೆ ನೀಡಿರುವುದಾಗಿ ಕೇಂದ್ರ ಸರ್ಕಾರ ಈ ಹಿಂದೆ ಹೇಳಿಕೊಂಡಿತ್ತು. ಕೇಂದ್ರದ ಹೇಳಿಕೆಯನ್ನು ತಮಿಳು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅದನ್ನು ನಿರಾಕರಿಸಿದ್ದಾರೆ ಎಂದು ಕನಿಮೋಳಿ ಹೇಳಿದ್ದಾರೆ. ಈಗ ವಯನಾಡ್ ದುರಂತದ ವಿಚಾರದಲ್ಲಿಯೂ ಅವರು ಅದೇ ರೀತಿ ಮಾಡುತ್ತಿದ್ದಾರೆ. ಕೇಂದ್ರದ ಸಮರ್ಥನೆಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ಸಾರಾಸಗಟಾಗಿ ನಿರಾಕರಿಸಿದ್ದಾರೆ” ಎಂದು ಅವರು ತಿಳಿಸಿದ್ದಾರೆ.
“ಬಿಜೆಪಿ ಸಂಕಷ್ಟದಲ್ಲಿರುವ ರಾಜ್ಯಗಳನ್ನು ಬೆಂಬಲಿಸುವುದಿಲ್ಲ. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ರಾಜ್ಯಗಳಿಗೆ ನಿಧಿ ಹಂಚಿಕೆ ಮಾಡುವ ಮೂಲಕ, ಉಳಿದ ರಾಜ್ಯಗಳನ್ನು ಕಡೆಗಣಿಸುತ್ತಿದೆ. ಅದಕ್ಕಾಗಿ, ರಾಜ್ಯ ಸರ್ಕಾರಗಳ ಮೇಲೆ ಸುಳ್ಳು ಆರೋಪಗಳನ್ನು ಮುಂದುವರೆಸಿದೆ” ಎಂದು ಕನಿಮೊಳಿ ಹೇಳಿದ್ದಾರೆ.