ಕಾಂಗ್ರೆಸ್‌ನ 50 ಶಾಸಕರಿಗೆ ಬಿಜೆಪಿಯಿಂದ ತಲಾ 50 ಕೋಟಿ ರೂ. ಆಫರ್

Date:

ರಾಜ್ಯದ ಕಾಂಗ್ರೆಸ್ ಸರ್ಕಾರ ಉರುಳಿಸಲು, ಕಾಂಗ್ರೆಸ್‌ನ 50 ಶಾಸಕರಿಗೆ ಬಿಜೆಪಿ ತಲಾ 50 ಕೋಟಿ ರೂ. ಆಫರ್‌ ನೀಡಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

- Advertisement -

ಬಿಜೆಪಿ ವಿರುದ್ಧ ಆರೋಪಿಸಿ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, “ಬಿಜೆಪಿ ಎಂದೂ ಸ್ವಂತ ಬಲದ ಮೇಲೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿಲ್ಲ, ಆಪರೇಷನ್ ಕಮಲದ ಮೂಲಕ ಮಾತ್ರ ಅಧಿಕಾರಕ್ಕೆ ಬಂದಿದೆ. ಬಿಜೆಪಿಯವರು ಸಾಕಷ್ಟು ಭ್ರಷ್ಟಾಚಾರ ಮಾಡಿ ಲಂಚದಿಂದ ಕೋಟಿಗಟ್ಟಲೆ ಹಣ ಸಂಪಾದನೆ ಮಾಡಿದ್ದಾರೆ. ಆ ಹಣದಿಂದ ನಮ್ಮ 50 ಶಾಸಕರಿಗೆ ತಲಾ 50 ಕೋಟಿ ರೂಪಾಯಿ ಕೊಟ್ಟು ಖರೀದಿ ಮಾಡಲು ಯತ್ನಿಸಿದ್ದರು. ಆದರೆ, ನಮ್ಮ ಯಾವ ಶಾಸಕರೂ ಪಕ್ಷ ಬಿಟ್ಟು ಹೋಗಿಲ್ಲ. ಹಾಗಾಗಿ ನನ್ನ ಮೇಲೆ ಮುಡಾ ಪ್ರಕರಣ ಎಂದು ಸುಳ್ಳು ಆರೋಪ ಮಾಡಿ ಕಪ್ಪು ಮಸಿ ಬಳಿಯಲು ಯತ್ನಿಸುತ್ತಿದ್ದಾರೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

“ಒಬ್ಬೊಬ್ಬ ಶಾಸಕರಿಗೆ 50 ಕೋಟಿ ರೂ.‌ಹಣ ಕೊಟ್ಟು ಖರೀದಿಸಲು ಯಡಿಯೂರಪ್ಪ ಏನು ಪ್ರಿಂಟ್ ಮಾಡಿದ್ದಾರಾ? ಬೊಮ್ಮಾಯಿ, ಅಶೋಕ್, ವಿಜಯೇಂದ್ರ ಹಣ ಪ್ರಿಂಟ್ ಮಾಡಿದ್ದಾರಾ? ಎಲ್ಲವೂ ಭ್ರಷ್ಟಾಚಾರ ಲಂಚದಿಂದ ಸಂಪಾದನೆ ಮಾಡಿರುವ ಹಣ” ಎಂದಿದ್ದಾರೆ.

“ಕೇಂದ್ರ ಸರ್ಕಾರ ಬಿಜೆಪಿ ಆಧಿಕಾರದಲ್ಲಿ ಇಲ್ಲದ ರಾಜ್ಯಗಳ ಮುಖ್ಯಮಂತ್ರಿಗಳ ಮೇಲೆ ಇಡಿ, ಐಟಿ, ಸಿಬಿಐ ಬಳಸಿಕೊಂಡು ತೊಂದರೆ ಕೊಡುತ್ತಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೂ ಸುಳ್ಳು ಪ್ರಕರಣ ಹಾಕಿ ತೊಂದರೆ ಕೊಟ್ಟರು.‌ ಈಗ ನನ್ನ ಮೇಲೂ ಸುಳ್ಳು ಪ್ರಕರಣ ದಾಖಲಿಸಿ ತೊಂದರೆ ಕೊಡುತ್ತಿದ್ದಾರೆ” ಎಂದು ಹೇಳಿದ್ದಾರೆ.

“ರಾಜ್ಯದಲ್ಲಿ ನಮ್ಮ ಐದೂ ಗ್ಯಾರಂಟಿಗಳು ಯಶಸ್ವಿಯಾಗಿ ಜಾರಿ ಆದ ಬಳಿಕ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಭಯಂಕರ ಸುಳ್ಳುಗಳನ್ನು ಹೊಸೆಯುತ್ತಿದ್ದಾರೆ. ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಹಸಿ ಹಸಿ ಸುಳ್ಳಿನ ಅಪಪ್ರಚಾರ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಗ್ಯಾರಂಟಿಗಳಿಗಾಗಿ 56 ಸಾವಿರ ಕೋಟಿ ರೂಪಾಯಿ ಕೊಟ್ಟರೆ, ಅಭಿವೃದ್ಧಿ ಕಾರ್ಯಗಳಿಗೆ 1.20 ಲಕ್ಷ ಕೋಟಿ ರೂ. ನೀಡಿದೆ.‌ ಇಂದು ನರಸೀಪುರದಲ್ಲಿ 470 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ದೊರೆತಿದೆ. ಬಿಜೆಪಿಯ ಸುಳ್ಳುಗಳಿಗೆ ಇವತ್ತಿನ ಅಭಿವೃದ್ಧಿ ಕಾರ್ಯಕ್ರಮ ಕನ್ನಡಿ ಹಿಡಿದಿದೆ” ಎಂದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, “ಬಹುಶಃ ನಿಮ್ಮ ಶಾಸಕರ ಮೇಲೆ ನೀವು ವಿಶ್ವಾಸವನ್ನು ಕಳೆದುಕೊಂಡಂತೆ ಕಾಣುತ್ತಿದೆ ಅದಕ್ಕಾಗಿಯೇ ₹50 ಕೋಟಿಗೆ ಅವರು ಮಾರಾಟವಾಗುತ್ತಿದ್ದಾರೆ ಎಂಬ ಕಪೋಲಕಲ್ಪಿತ ಆರೋಪ ಮಾಡುತ್ತಿದ್ದೀರಿ. ಇದು ನೀವು ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಾಗೂ ಶಾಸಕರನ್ನು ಮಾರಾಟದ ವಸ್ತುಗಳಂತೆ ವ್ಯಾಖ್ಯಾನಿಸಿ ಅವರಿಗೆ ಮಾಡುತ್ತಿರುವ ಅವಮಾನವಾಗಿದೆ” ಎಂದಿದ್ದಾರೆ.

“ಮುಖ್ಯಮಂತ್ರಿಯಂತಹ ಜವಾಬ್ದಾರಿ ಸ್ಥಾನದಲ್ಲಿ ಕುಳಿತಿರುವ ನೀವು ಅದರ ಘನತೆಯನ್ನು ಕುಗ್ಗಿಸುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದೀರಿ, ನಿಮ್ಮದೇ ಸರ್ಕಾರವಿದೆ, ನಿಮ್ಮದೇ ತನಿಖಾ ಸಂಸ್ಥೆಗಳಿವೆ, ₹50 ಕೋಟಿ ಆಮಿಷದ ಮೂಲ ಯಾವುದು ಎನ್ನುವುದನ್ನು ಜನರ ಮುಂದೆ ಬಹಿರಂಗಪಡಿಸುವುದು ನಿಮ್ಮ ನೈತಿಕ ಜವಾಬ್ದಾರಿಯಾಗಿರುತ್ತದೆ. ಇಲ್ಲದಿದ್ದರೆ ನಿಮ್ಮ ಹೇಳಿಕೆ ಪುಡಾರಿಗಳು ನೀಡುವ ಬಾಲಿಶ ರಾಜಕೀಯ ಹೇಳಿಕೆಯಾಗುತ್ತದೆಯಷ್ಟೆ” ಎಂದು ಹೇಳಿದ್ದಾರೆ.

“ಒಂದು ಕಡೆ ನಿಮ್ಮ ಪುತ್ರ ನ್ಯಾಯಾಂಗ ವ್ಯವಸ್ಥೆಯನ್ನೇ ಅಪಮಾನಿಸುವ ಆರೋಪ ಮಾಡಿದರೆ, ಮತ್ತೊಂದೆಡೆ ನೀವು ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಹತಾಶೆಯಿಂದ ವರ್ತಿಸುತ್ತಿದ್ದೀರಿ. ನಿಮ್ಮನ್ನು ಅಧಿಕಾರದಿಂದ ಕೆಳಗಿಳಿಸಿದರೆ ಜನ ಸುಮ್ಮನೆ ಬಿಡುವುದಿಲ್ಲ ಎಂದು ಅಬ್ಬರಿಸುತ್ತಿದ್ದೀರಿ ಆದರೆ ವಾಸ್ತವ ಸಂಗತಿ ಏನೆಂದರೆ, ಕರ್ನಾಟಕದ ಜನತೆ ನಿಮ್ಮಂಥ ಭ್ರಷ್ಟ ಮುಖ್ಯಮಂತ್ರಿ ಇನ್ನೂ ಅಧಿಕಾರದಿಂದ ಕೆಳಗಿಳಿಯದೇ ಭಂಡತನ ಪ್ರದರ್ಶಿಸುತ್ತಿದ್ದಾರಲ್ಲ ಎಂದು ರಸ್ತೆಯಲ್ಲಿ ನಿಂತು ಮಾತನಾಡಿಕೊಳ್ಳುತ್ತಿದ್ದಾರೆ,
ನಿಮ್ಮ ಗುಪ್ತಚರ ಇಲಾಖೆ ಈ ವಿಷಯವನ್ನು ನಿಮಗೆ ಮುಟ್ಟಿಸಿರಲೇಬೇಕು. ಆದ್ದರಿಂದಲೇ ನೀವು ಇಷ್ಟೊಂದು ವಿಚಲಿತರಾದಂತೆ ಕಪೋಲ ಕಲ್ಪಿತ ಕಥೆಗಳನ್ನು ಸೃಷ್ಟಿಸಿಕೊಂಡು ಬಡ ಬಡಿಸುತ್ತಿದ್ದೀರಿ” ಎಂದಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ ನಕ್ಷೆಯನ್ನೇ ಬದಲಿಸಿದ ಐತಿಹಾಸಿಕ ದಿನ!

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ...

ಪ್ರತಿಭಟನೆ ನಂತರ ಸ್ವಲ್ಪ ಶಾಪಿಂಗ್ ಮಾಡಿ: ವರ್ತಕರ ಆಕ್ಷೇಪಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಇಂದು (ನ.1) ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರತಿಪಕ್ಷಗಳ 'ಇಂಡಿಯಾ' ಒಕ್ಕೂಟ ಆಯೋಜಿಸಿರುವ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ...

ನಾಪತ್ತೆಯಾಗಿದ್ದ ದೊಡ್ಡಬಳ್ಳಾಪುರದ ದಲಿತ ಮುಖಂಡ ಸಿ. ಗುರುರಾಜಪ್ಪ ಧರ್ಮಸ್ಥಳದಲ್ಲಿ ಶವವಾಗಿ ಪತ್ತೆ

​ದೊಡ್ಡಬಳ್ಳಾಪುರದ ಕಚೇರಿಪಾಳ್ಯದ ನಿವಾಸಿ, ದಲಿತ ಹಾಗೂ ಪ್ರಗತಿಪರ ಹೋರಾಟಗಾರ ಸಿ. ಗುರುರಾಜಪ್ಪ...