ರಾಜ್ಯದ ಇತಿಹಾಸದಲ್ಲಿ ವಿಪಕ್ಷದ ನಾಯಕನಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು: ಕಾಂಗ್ರೆಸ್‌ ಟೀಕೆ

Date:

Advertisements

ವಿಧಾನಮಂಡಲ ಅಧಿವೇಶನ ಆರಂಭವಾದರೂ ವಿಧಾನಸಭೆಯಲ್ಲಿ ವಿರೋಧ ಪಕ್ಷ ನಾಯಕ ಇಲ್ಲದೇ ಇರುವ ಸ್ಥಿತಿಯು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಬಿಜೆಪಿ ವಿರುದ್ಧ ಕಿಡಿಕಾರಿದೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, “ಬಿಜೆಪಿಯ 66 ಶಾಸಕರಲ್ಲಿ ವಿರೋಧ ಪಕ್ಷದ ನಾಯಕನಾಗುವ ಅರ್ಹತೆ ಇರುವ ಒಬ್ಬೇ ಒಬ್ಬ ಶಾಸಕನಿಲ್ಲದಿರುವುದು ಅತ್ಯಂತ ನಾಚಿಕೆಗೇಡು. ಕರ್ನಾಟಕದದ ಇತಿಹಾಸದಲ್ಲಿ ವಿರೋಧ ಪಕ್ಷದ ನಾಯಕನಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಪ್ರಜಾಪ್ರಭುತ್ವವನ್ನು ಗೌರವಿಸಲಿಲ್ಲ, ವಿಪಕ್ಷದಲ್ಲಿದ್ದಾಗಲೂ ಗೌರವಿಸುತ್ತಿಲ್ಲ” ಎಂದು ಆರೋಪಿಸಿದೆ.

“ಸರ್ಕಾರ ರಚನೆ ಆಯ್ತು, ನಮ್ಮ ಸರ್ಕಾರ ಟೆಕಾಫ್ ಆಗಿ ಹಲವು ದಿನಗಳಾಯ್ತು, ನಮ್ಮ ಗ್ಯಾರಂಟಿ ಯೋಜನೆಗಳ ಜಾರಿಯೂ ಆಯ್ತು, ಸದನವೂ ಪ್ರಾರಂಭವಾಯ್ತು. ಎಲ್ಲಿ ನಿಮ್ಮ ವಿರೋಧ ಪಕ್ಷದ ನಾಯಕ? ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ ಎಂದರೆ ಎಂತಹ ಹೀನಾಯ ಸ್ಥಿತಿಯಲ್ಲಿದೆ!” ಎಂದು ಕಾಂಗ್ರೆಸ್‌ ಟೀಕಿಸಿದೆ.

Advertisements

“ಬಿಜೆಪಿಗೆ ವಿರೋಧ ಪಕ್ಷದ ನಾಯಕನ ‘ಗ್ಯಾರಂಟಿ‘ಯೂ ಇಲ್ಲ! ವಿರೋಧ ಪಕ್ಷದ ನಾಯಕನಿಲ್ಲದೆ ಸದನ ಕಲಾಪ ನಡೆಯುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ. ಈ ಕಪ್ಪು ಚುಕ್ಕೆಯನ್ನಿಟ್ಟಿದ್ದು ಬಿಜೆಪಿ” ಎಂದು ಆರೋಪಿಸಿದೆ.

ಈ ಸುದ್ದಿ ಓದಿದ್ದೀರಾ? ವಿಪಕ್ಷಗಳ ವಿರುದ್ಧ ಸುಳ್ಳು ಪ್ರಚಾರಕ್ಕೆ ಪ್ರಧಾನಿಯಿಂದ ಅಧಿಕಾರ ದುರ್ಬಳಕೆ: ರಾಷ್ಟ್ರಪತಿಗೆ ಸಚಿವ ದಿನೇಶ್ ಗುಂಡೂರಾವ್ ಪತ್ರ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ವಿರೋಧಿಸುವ ನಾಯಕ ಇಲ್ಲದ ಭಾರತದ ಏಕೈಕ ಮುಖ್ಯಮಂತ್ರಿ ಶ್ರೀ, ಜನಾಬ್ ಸಿದ್ಧ ರಾಮಯ್ಯ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X